ETV Bharat / state

ರಾಷ್ಟ್ರಪತಿ ದಸರಾ ಉದ್ಘಾಟಿಸುತ್ತಿರುವುದು ಹೆಮ್ಮೆಯ ವಿಚಾರ: ಯದುವೀರ್ - Dasara

ಎರಡು ವರ್ಷಗಳ ಬಳಿಕ ಅದ್ಧೂರಿ ದಸರಾ ನಡೆಯುತ್ತಿದೆ. ನಾಡಹಬ್ಬವನ್ನು ರಾಷ್ಟ್ರಪತಿ ಉದ್ಘಾಟನೆ ಮಾಡುತ್ತಿರುವುದು ಹೆಮ್ಮೆಯ ವಿಚಾರ ಎಂದು ಮೈಸೂರು ರಾಜವಂಶಸ್ಥರಾದ ಯದುವೀರ್ ಒಡೆಯರ್​ ಹೇಳಿದರು.

Maharaja Yaduveer wodeyar
ರಾಜವಂಶಸ್ಥ ಯದುವೀರ್
author img

By

Published : Sep 21, 2022, 1:14 PM IST

ಮೈಸೂರು: ಈ ಬಾರಿ ನಾಡಹಬ್ಬ ದಸರಾವನ್ನು ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿಗಳು ಉದ್ಘಾಟನೆ ಮಾಡುತ್ತಿರುವುದು ಹೆಮ್ಮೆಯ ವಿಚಾರ. ಎರಡು ವರ್ಷಗಳ ನಂತರ ಅದ್ದೂರಿ ದಸರಾ ಆಚರಿಸಲಾಗುತ್ತಿದೆ ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ಬುಧವಾರ ಅರಮನೆ ಆಡಳಿತ ಮಂಡಳಿ ಕಚೇರಿಯಲ್ಲಿ ದಸರಾ ಪ್ರಯುಕ್ತ ಅರಮನೆಯ ಸಿಬ್ಬಂದಿ ವರ್ಗ, ಮಾವುತ, ಕಾವಾಡಿಗರು ಮತ್ತು ಅವರ ಕುಟುಂಬಗಳಿಗೆ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಿದ್ದು, ಯದುವೀರ್ ಉದ್ಘಾಟಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅರಮನೆಯಲ್ಲಿ ಶರನ್ನವರಾತ್ರಿ ಪೂಜೆಗಳು ಸಾಂಪ್ರದಾಯಿಕವಾಗಿ ನಡೆಯಲಿವೆ ಎಂದರು.

ರಾಜವಂಶಸ್ಥ ಯದುವೀರ್ ಒಡೆಯರ್

ಮೈಸೂರಿಗೆ ಆಗಮಿಸುವ ರಾಷ್ಟ್ರಪತಿಗಳನ್ನು ದಸರಾ ಉದ್ಘಾಟನೆಯ ನಂತರ ಚಾಮುಂಡಿ ಬೆಟ್ಟದಿಂದ ಅರಮನೆಗೆ ಬರುವಂತೆ ಆಹ್ವಾನಿಸುವ ಬಗ್ಗೆ ರಾಜಮಾತೆ ತೀರ್ಮಾನ ಕೈಗೊಳ್ಳುತ್ತಾರೆ. ಎಂದು ಯದುವೀರ್ ತಿಳಿಸಿದರು.

ಇದನ್ನೂ ಓದಿ: ಮೈಸೂರು: ವೃಶ್ಚಿಕ ಲಗ್ನದಲ್ಲಿ ರತ್ನಖಚಿತ ಸಿಂಹಾಸನ ಜೋಡಣೆ ಕಾರ್ಯ ಪೂರ್ಣ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.