ಮೈಸೂರು: ದಸರಾ ಯಶಸ್ವಿ ರೂವಾರಿಗಳಾದ ಮಾವುತರು-ಕಾವಾಡಿಗಳ ಕೊರೊನಾ ವರದಿ ನೆಗೆಟಿವ್ ಬಂದಿರುವುದರಿಂದ ಅರಣ್ಯ ಇಲಾಖೆ ನಿಟ್ಟುಸಿರು ಬಿಟ್ಟಿದೆ.
ದಸರಾದಲ್ಲಿ ಪಾಲ್ಗೊಳ್ಳುತ್ತಿರುವ ಪ್ರತಿಯೊಬ್ಬರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು ಎನ್ನುವ ಜಿಲ್ಲಾಡಳಿತ ನಿರ್ಧಾರದ ಹಿನ್ನೆಲೆಯಲ್ಲಿ, ಶನಿವಾರ ಐದು ಆನೆಗಳ ಮಾವುತರು, ಕಾವಾಡಿಗಳು, ಅರಣ್ಯ ಇಲಾಖೆ ಸಿಬ್ಬಂದಿ ಸೇರಿದಂತೆ 24 ಮಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿತ್ತು. ಎಲ್ಲರ ವರದಿ ನೆಗೆಟಿವ್ ಬಂದಿರುವುದರಿಂದ ಅರಣ್ಯ ಇಲಾಖೆ ಹಾಗೂ ಮಾವುತರು, ಕಾವಾಡಿಗಳು ಕೂಡ ನಿರಾಳರಾಗಿದ್ದಾರೆ.