ಮೈಸೂರು: ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಚಾಮುಂಡಿಬೆಟ್ಟದ ಪಾದದ ಬಳಿ ಇರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದರು.
ಸುತ್ತೂರು ಶಾಖಾಮಠಕ್ಕೆ ಭೇಟಿ ನೀಡಿ, ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದು ಚರ್ಚಿಸಿದರು. ಈ ವೇಳೆಯಲ್ಲಿ ಶಾಸಕರಾದ ಎಚ್. ಪಿ ಮಂಜುನಾಥ್. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಆರ್. ಧ್ರುವನಾರಾಯಣ್. ಮಾಜಿ ಶಾಸಕರಾದ ವಾಸು. ಎ. ಆರ್ ಕೃಷ್ಣಮೂರ್ತಿ. ಬಾಲರಾಜ್. ವಿಧಾನ ಪರಿಷತ್ ಮಾಜಿ ಸದಸ್ಯರಾದ ಧರ್ಮಸೇನಾ. ಕೆಪಿಸಿಸಿ ಮಹಿಳಾ ಅಧ್ಯಕ್ಷೆ ಡಾ. ಬಿ ಪುಷ್ಪ ಅಮರನಾಥ್ ಮತ್ತಿತರರು ಇದ್ದರು.
ಅ. 6 ರಿಂದ ಭಾರತ್ ಜೋಡೋನಲ್ಲಿ ಪಾಲ್ಗೊಳ್ಳಲು ಮಲ್ಲಿಕಾರ್ಜುನ ಖರ್ಗೆ ಅವರು ಮೈಸೂರಿಗೆ ಆಗಮಿಸಿದ್ದು, ಮೈಸೂರಿನಲ್ಲಿ ವಾಸ್ತವ್ಯ ಹೂಡಿ, ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನಿಂದ ಆರಂಭವಾಗುವ ಯಾತ್ರೆಯಲ್ಲಿ ಪಾಲ್ಗೊಳ್ಳುವರು ಎಂದು ತಿಳಿದುಬಂದಿದೆ.