ಮೈಸೂರು: ದೇಶದ ರಾಷ್ಟ್ರೀಯ ಪಕ್ಷಿ ನವಿಲನ್ನು ಹಿಡಿದುಕೊಂಡು ಬಂದು ಮನೆಯಲ್ಲಿ ಸಾಕುತ್ತಿದ್ದ ವ್ಯಕ್ತಿಯನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಮೈಸೂರು ತಾಲೂಕಿನ ಹನಗೂಡು ಹೋಬಳಿಯ ಕಾಮಗೌಡನ ಹಳ್ಳಿಯ ಮಂಜು ಎಂಬಾತನೆ ಬಂಧಿತ ಆರೋಪಿಯಾಗಿದ್ದಾನೆ.
ಈತ ಕಾಡಂಚಿನ ಜಮೀನುಗಳಿಗೆ ಬರುವ ನವಿಲುಗಳನ್ನು ಹಿಡಿದು ಮನೆಯಲ್ಲಿ ಸಾಕುತ್ತಿದ್ದಾನೆ ಎಂಬ ಮಾಹಿತಿ ಪಡೆದ ಅರಣ್ಯ ಸಂಚಾರಿ ದಳದ ಎಸ್ಐ ಲಕ್ಷ್ಮಿ ನೇತೃತ್ವದ ತಂಡ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ಮನೆಯಲ್ಲಿ ನವಿಲು ಪತ್ತೆಯಾಗಿದ್ದು, ತಕ್ಷಣ ಆರೋಪಿಯನ್ನು ಬಂಧಿಸಿದ್ದಾರೆ.
ವಿಚಾರಣೆ ವೇಳೆ ಆರೋಪಿಯು, ಈ ಹಿಂದೆ ಮತ್ತಷ್ಟು ನವಿಲುಗಳನ್ನು ಹಿಡಿದಿರುವ ಬಗ್ಗೆ ಬಾಯ್ಬಿಟ್ಟಿದ್ದಾನೆ. ವನ್ಯಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇದನ್ನೂ ಓದಿ: ವಿವಾಹಿತ - ವಿಚ್ಛೇದಿತ ಮಹಿಳೆಯರೇ ಟಾರ್ಗೆಟ್: 11 ಜನರ ಮದುವೆಯಾದ ಆಸಾಮಿ!