ಮೈಸೂರು : ಬೈಕ್ ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಹಿಂಬದಿ ಕುಳಿತಿದ್ದ ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಿ.ನರಸೀಪುರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಸೋಸಲೆ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ರಾಜು (19) ಎಂಬಾತ ಮೃತ ದುರ್ದೈವಿ. ಬೈಕ್ ಹಿಂಬದಿ ಸವಾರ ತರುಣ್ನನ್ನು ಹೆಚ್ಚಿನ ಚಿಕಿತ್ಸೆಗೆ ತಿ. ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ನೇಹಿತನ ಮನೆಗೆ ಹೋಗುವಾಗ ಮಾರ್ಗಮಧ್ಯೆ ರಾಜು ಹೆಣವಾಗಿದ್ದಾನೆ. ಅಪಘಾತವೆಸಗಿ ಲಾರಿ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ. ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.