ಮೈಸೂರು: ಕೌಟುಂಬಿಕ ಕಲಹದಿಂದ ಮನನೊಂದ ವ್ಯಕ್ತಿ ತಾನು ಗುತ್ತಿಗೆ ಪಡೆದು ವ್ಯವಸಾಯ ಮಾಡುತ್ತಿದ್ದ ಜಮೀನಿನ ಮರದಲ್ಲೇ ನೇಣಿಗೆ ಶರಣಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಚನ್ನಪಟ್ಟಣ ಗ್ರಾಮದಲ್ಲಿ ನಡೆದಿದೆ.
ಮಹೇಶ್ (30) ನೇಣಿಗೆ ಶರಣಾದ ವ್ಯಕ್ತಿ. ಈತ ಊರ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷನ ಜಮೀನನ್ನು ಗುತ್ತಿಗೆ ಪಡೆದು ವ್ಯವಸಾಯ ಮಾಡಿಕೊಂಡಿದ್ದ. ಹೆಚ್.ಡಿ. ಕೋಟೆ ತಾಲ್ಲೂಕಿನ ಚಿಕ್ಕಬರಗಿ ಗ್ರಾಮದ ಯುವತಿಯನ್ನು ಮದುವೆಯಾಗಿದ್ದ.
ಆದರೆ ಕೌಟುಂಬಿಕ ಸಮಸ್ಯೆಯಿಂದ ಈತ 2 ವರ್ಷದಿಂದ ಆಕೆಯನ್ನು ಬಿಟ್ಟಿದ್ದ ಎನ್ನಲಾಗಿದ್ದು ನಿನ್ನೆ ಸಂಜೆ ಜಮೀನಿನ ಮರದಲ್ಲಿ ನೇಣು ಬಿಗಿದುಕೊಂಡು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ.ಈ ಸಂಬಂಧ ಹುಲ್ಲಹಳ್ಳಿ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.