ETV Bharat / state

ಮೈಸೂರು: ಮದುವೆಯಾಗುವುದಾಗಿ ನಂಬಿಸಿ 15ಕ್ಕೂ ಹೆಚ್ಚು ಮಹಿಳೆಯರಿಗೆ ವಂಚನೆ; ಆರೋಪಿ ಸೆರೆ - ಮಹಿಳೆಯರಿಗೆ ವಂಚಿಸುತ್ತಿದ್ದ ವ್ಯಕ್ತಿ ಬಂಧನ

ಮದುವೆಯಾಗುವುದಾಗಿ ನಂಬಿಸಿ ಮಹಿಳೆಯರನ್ನು ವಂಚಿಸಿ ನಗದು, ಚಿನ್ನಾಭರಣದೊಂದಿಗೆ ಪರಾರಿಯಾಗುತ್ತಿದ್ದ ವ್ಯಕ್ತಿಯನ್ನು ಮೈಸೂರಿನ ಕುವೆಂಪು ನಗರ ಪೊಲೀಸರು ಬಂಧಿಸಿದ್ದಾರೆ.

man-was-arrested-for-cheating-women-in-mysore
ಮದುವೆಯಾಗುವುದಾಗಿ ನಂಬಿಸಿ ಮಹಿಳೆಯರಿಗೆ ವಂಚಿಸುತ್ತಿದ್ದ ವ್ಯಕ್ತಿ ಬಂಧನ
author img

By

Published : Jul 9, 2023, 8:29 AM IST

ಮೈಸೂರು : ಮಹಿಳೆಯರನ್ನು ಮದುವೆಯಾಗುವುದಾಗಿ ನಂಬಿಸಿ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದ ವ್ಯಕ್ತಿಯನ್ನು ಕುವೆಂಪು ನಗರ ಠಾಣೆ ಪೊಲೀಸರು ಸೆರೆ ಹಿಡಿದಿದ್ದಾರೆ. ಬಂಧಿತನನ್ನು ಬೆಂಗಳೂರಿನ ಬನಶಂಕರಿ ಬಡಾವಣೆ ನಿವಾಸಿ ಮಹೇಶ್ (35) ಎಂದು ಗುರುತಿಸಲಾಗಿದೆ. ಈತನಿಂದ 2 ಲಕ್ಷ ನಗದು, 2 ಕಾರು, ಒಂದು ಬ್ರೇಸ್ ಲೈಟ್, ಒಂದು ಉಂಗುರ, ಎರಡು ಚಿನ್ನದ ಬಳೆ, ಒಂದು ನೆಕ್ಲೆಸ್ ಹಾಗೂ 7 ಮೊಬೈಲ್​ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿ ಮೈಸೂರಿನ ನಿವಾಸಿ ಹೇಮಲತಾ ಎಂಬವರಿಗೆ ತಾನು ವೈದ್ಯ ಎಂದು ಹೇಳಿ ಶಾದಿ ಡಾಟ್​​ ಕಾಂ ನಲ್ಲಿ ಪರಿಚಯಿಸಿಕೊಂಡಿದ್ದ. ಮದುವೆಯಾಗಿ ನಗದು ಹಾಗೂ ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದ. ಹೇಮಲತಾ ಅವರು ಕುವೆಂಪುನಗರ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆಯಲ್ಲಿ ಆರೋಪಿಯು ತಾನು ವೈದ್ಯ, ಇಂಜಿನಿಯರ್, ಸಿವಿಲ್ ಕಂಟ್ರಾಕ್ಟರ್ ಎಂದೆಲ್ಲ ಸುಳ್ಳು ಹೇಳಿಕೊಂಡು ಸುಮಾರು 15 ಮಹಿಳೆಯರಿಗೆ ವಂಚಿಸಿದ್ದು ಬೆಳಕಿಗೆ ಬಂದಿದೆ.

ಶಾದಿ ಡಾಟ್​​ ಕಾಂ ಮೂಲಕ ಹೇಮಲತಾ ಅವರನ್ನು ಸಂಪರ್ಕಿಸಿದ್ದ ಮಹೇಶ್, ಮೈಸೂರಿನ ವಿಜಯನಗರದಲ್ಲಿರುವ ಮನೆಯನ್ನು ತನ್ನದೆಂದು ತೋರಿಸಿ ನಂಬಿಸಿದ್ದಾನೆ. ಈತನನ್ನು ನಂಬಿದ ಮಹಿಳೆ ಕಳೆದ ಜ.1ರಂದು ವಿಶಾಖಪಟ್ಟಣಂನಲ್ಲಿ ಮದುವೆಯಾಗಿದ್ದಾರೆ. ನಂತರ ಮೈಸೂರಿನ ಮನೆಗೆ ಬಂದು ನೆಲೆಸಿದ್ದರು.

ಮಹೇಶ್​ ತಾನು ಕ್ಲಿನಿಕ್ ಓಪನ್ ಮಾಡಬೇಕು, 70 ಲಕ್ಷ ರೂ ನೀಡುವಂತೆ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಹಣ ಕೊಡಲು ಹೇಮಲತಾ ಒಪ್ಪದೇ ಇದ್ದಾಗ ಕೊಲೆ ಬೆದರಿಕೆ ಹಾಕಿದ್ದಾನೆ. ನಂತರ ಹೇಮಲತಾ ಮನೆಯಲ್ಲಿ ಇಲ್ಲದಿರುವ ಸಮಯ ನೋಡಿಕೊಂಡು 15 ಲಕ್ಷ ಹಣ ಹಾಗೂ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದಾನೆ. ಬಳಿಕ ಮನೆಗೆ ಹಿಂದಿರುಗಲಿಲ್ಲ.

ಕೆಲವೇ ದಿನಗಳಲ್ಲಿ ಬೆಂಗಳೂರಿನ ದಿವ್ಯಾ ಎಂಬವರು ಹೇಮಲತಾರನ್ನು ಸಂಪರ್ಕಿಸಿ ತನ್ನನ್ನೂ ಮದುವೆ ಆಗಿದ್ದಾರೆಂದು ಮಾಹಿತಿ ನೀಡಿದ್ದಾರೆ. ಮಹೇಶ್ ವಂಚನೆಗೆ ಬೇಸತ್ತ ಹೇಮಲತಾ ನ್ಯಾಯಕ್ಕಾಗಿ ಕುವೆಂಪುನಗರ ಪೊಲೀಸರ ಮೊರೆ ಹೋಗಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಡಿಸಿಪಿ ಮುತ್ತುರಾಜು, ಕೆ.ಆರ್. ವಿಭಾಗದ ಎಸಿಪಿ ಗಂಗಾಧರ ಸ್ವಾಮಿ ಮಾರ್ಗದರ್ಶನದಲ್ಲಿ, ಕುವೆಂಪುನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಎಲ್.ಅರುಣ್, ಎಸ್‌ಐ ಎಂ. ರಾಧ, ಎಸ್.ಪಿ. ಗೋಪಾಲ್, ಎಎಸ್‌ಐ ನಂಜುಂಡಸ್ವಾಮಿ, ಸಿಬ್ಬಂದಿಗಳಾದ ಎಂ.ಪಿ. ಮಂಜುನಾಥ, ಆನಂದ್, ಎನ್.ಕೆ. ಪುಟ್ಟಪ್ಪ , ಹಜರತ್, ಸುರೇಶ್, ತಾಂತ್ರಿಕ ವಿಭಾಗದ ಕುಮಾರ್ ಪತ್ತೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಪೊಲೀಸ್‌ ಆಯುಕ್ತರ ಕಿವಿಮಾತು: "ಮಹಿಳೆಯರಿಗೆ ವಂಚಿಸುವ ಹಲವು ಪ್ರಕರಣಗಳು ಬೆಳಕಿಗೆ ಬಂದರೂ ಸಹ ಕೆಲವು ಅಮಾಯಕ ಮಹಿಳೆಯರು ಮೋಸ ಹೋಗುತ್ತಿದ್ದಾರೆ. ಇನ್ನು ಮುಂದಾದರೂ ಮದುವೆಯ ವೆಬ್‌ಸೈಟ್‌ಗಳಲ್ಲಿ ಬರುವ ಆಫರ್‌ಗಳನ್ನು ಏಕಾಏಕಿ ನಂಬದೆ ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳಬೇಕು" ಎಂದು ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಹೇಳಿದ್ದಾರೆ.

ಇದನ್ನೂ ಓದಿ : ಮಂಗಳೂರು: ಕೆಲಸಕ್ಕಿದ್ದ ಯುವಕನಿಗೆ ಬೆಂಕಿ ಹಚ್ಚಿ ಸುಟ್ಟು ಹತ್ಯೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.