ಮೈಸೂರು: ಮಂಗಳೂರಿನಲ್ಲಿ ಕೆಲ ದಿನಗಳ ಹಿಂದೆ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ರೂವಾರಿ, ಶಂಕಿತ ಉಗ್ರ ಶಾರೀಕ್, ಸ್ಫೋಟಕ್ಕೂ ಮುನ್ನ ಎರಡು ಬಾರಿ ಮಂಗಳೂರಿಗೆ ತೆರಳಿ ಪರಿಶೀಲನೆ ನಡೆಸಿದ್ದ ಎಂದು ತಿಳಿದು ಬಂದಿದೆ. ಒಮ್ಮೆ ರೈಲಿನಲ್ಲಿ ತೆರಳಿದ್ದರೆ ಮತ್ತೊಮ್ಮೆ ಬಸ್‌ನಲ್ಲಿ ಸಂಚರಿಸಿದ್ದ ಎನ್ನಲಾಗಿದೆ. ಇದೀಗ ಆತನ ಟ್ರಾವೆಲ್ ಹಿಸ್ಟರಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.
ನಗರದಲ್ಲಿ ಎಲ್ಲೆಲ್ಲಿ ಓಡಾಡಿದ್ದ, ಯಾರ್ಯಾರೊಂದಿಗೆ ಸಂಪರ್ಕದಲ್ಲಿದ್ದ, ಯಾವ್ಯಾವ ಊರುಗಳಿಗೆ ಪ್ರಯಾಣ ಮಾಡಿದ್ದ, ಯಾರನ್ನು ಭೇಟಿ ಮಾಡಿದ್ದ ಎಂಬುದರ ವಿವರ ಸಂಗ್ರಹಿಸಲಾಗುತ್ತಿದೆ. ಶಾರೀಕ್ ಉಳಿದುಕೊಂಡಿದ್ದ ಮೈಸೂರಿನ ಲೋಕನಾಯಕನಗರದ ಬಾಡಿಗೆ ಮನೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಕಾವಲಿಗೆ ನಿಯೋಜಿಸಲಾಗಿದೆ. ಮನೆಯಿರುವ ರಸ್ತೆಯ ಎರಡೂ ಕಡೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ.
ಇದನ್ನೂ ಓದಿ: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ: 'ಆಟೋ ರಿಕ್ಷಾ ಚಾಲಕನ ಆರೋಗ್ಯದಲ್ಲಿ ಸುಧಾರಣೆ'