ಮೈಸೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನನ್ನು ಹುಣಸೂರು ನಗರ ಪೊಲೀಸರು ಬಂಧಿಸಿ, 250 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಹುಣಸೂರು ನಗರದ ಉಮೇಶ ಅಲಿಯಾಸ್ ತುಪ್ಪ (26) ಬಂಧಿತ ಆರೋಪಿ. ಈತ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದು, ಖಚಿತ ಮಾಹಿತಿ ಮೇರೆಗೆ ನಗರ ಠಾಣಾ ಪೊಲೀಸರು ದಾಳಿ ನಡೆಸಿ, ಈತನ ಬಳಿ ಇದ್ದ 250 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈ ಸಂಬಂಧ ಹುಣಸೂರು ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.