ETV Bharat / state

ಮೈಸೂರಿನಲ್ಲಿ ಮಾರ್ಚ್ ತಿಂಗಳಿಂದ ‘ಸಪ್ತಪದಿ’ ಸಾಮೂಹಿಕ ವಿವಾಹ ಕಾರ್ಯಕ್ರಮ - mysore news 2021

‘ಸಪ್ತಪದಿ’ ಸರಳ ಸಾಮೂಹಿಕ ವಿವಾಹ ನಡೆಸುವ ಕುರಿತು ಅಪರ ಜಿಲ್ಲಾಧಿಕಾರಿ ಡಾ. ಬಿ.ಎಸ್.ಮಂಜುನಾಥಸ್ವಾಮಿ ಅಧ್ಯಕ್ಷತೆಯಲ್ಲಿ ಮುಜರಾಯಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು.

mysore
ಪೂರ್ವಭಾವಿ ಸಭೆ
author img

By

Published : Feb 9, 2021, 6:11 PM IST

ಮೈಸೂರು: ರಾಜ್ಯ ಸರ್ಕಾರದ ವತಿಯಿಂದ ಮೈಸೂರು ಜಿಲ್ಲೆಯಲ್ಲಿ ‘ಸಪ್ತಪದಿ’ ಸರಳ ಸಾಮೂಹಿಕ ವಿವಾಹ ನಡೆಸುವ ಕುರಿತು ಡಿಸಿ ಅಧ್ಯಕ್ಷತೆಯಲ್ಲಿ ಮುಜರಾಯಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆಯಿತು.

ಮಾರ್ಚ್ ತಿಂಗಳಿಂದ ಸಪ್ತಪದಿ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಸಭೆಯಲ್ಲಿ ನಿರ್ಧರಿಸಲಾಯಿತು. ಸಪ್ತಪದಿ ಕಾರ್ಯಕ್ರಮದ ಕುರಿತು ಪ್ರಮುಖ ದೇವಾಲಯಗಳ ಎದುರು ಮಾಹಿತಿ ಫಲಕಗಳನ್ನು ಅಳವಡಿಸಿದರೆ ಜನರಲ್ಲಿ ಸಾಕಷ್ಟು ಜಾಗೃತಿ ಮೂಡಲಿದೆ. ಕಾರ್ಯಕ್ರಮ ನಿರಂತರವಾಗಿ ನಡೆಯಲಿರುವುದರಿಂದ ಸಾಮೂಹಿಕ ವಿವಾಹದ ಕುರಿತು ಹೆಚ್ಚು ಪ್ರಚಾರದ ಅಗತ್ಯವಿದೆ ಎಂದರು.

ಸುತ್ತೂರು ಕ್ಷೇತ್ರದಲ್ಲಿ ಪ್ರತೀ ವರ್ಷ ಸಾಮೂಹಿಕ ವಿವಾಹ ನಡೆಯಲಿದೆ ಎಂಬ ಮಾಹಿತಿ ಎಲ್ಲರಿಗೂ ಇರುತ್ತದೆ. ಸಪ್ತಪದಿ ಕಾರ್ಯಕ್ರಮ ಪ್ರತೀ ತಿಂಗಳು ನಡೆಯುವುದರಿಂದ ಈ ಬಗ್ಗೆ ದೇವಾಲಯಗಳ ಮುಂಭಾಗ ಹಾಗೂ ಡಿಸಿ, ಎಸಿ ಮತ್ತು ತಾಲೂಕು ಕಚೇರಿಗಳ ಮುಂದೆ ಫಲಕ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಮಾರ್ಚ್‍ನಿಂದ ಜುಲೈವರೆಗೆ ಸಪ್ತಪದಿ ಸರಳ ಸಾಮೂಹಿಕ ವಿವಾಹ ನಡೆಸುವಂತೆ ಸರ್ಕಾರದಿಂದ ಸೂಚನೆ ಇದೆ. ಮಾರ್ಚ್ 15ರಂದು ಚಾಮುಂಡಿ ಬೆಟ್ಟ, ಏಪ್ರಿಲ್ 22ರಂದು ನಂಜನಗೂಡು, ಮೇ 13ರಂದು ಮುಡುಕುತೊರೆ, ಜೂನ್ 17ರಂದು ಚಾಮುಂಡಿ ಬೆಟ್ಟ ಹಾಗೂ ಜುಲೈ 7ರಂದು ನಂಜನಗೂಡಿನಲ್ಲಿ ಸಪ್ತಪದಿ ಸರಳ ಸಾಮೂಹಿಕ ವಿವಾಹ ನಡೆಸಲು ತೀರ್ಮಾನಿಸಲಾಯಿತು.

ಸಪ್ತಪದಿ ಕಾರ್ಯಕ್ರಮದಡಿ ವಿವಾಹ ಮಾಡಿಕೊಳ್ಳುವವರು ಆಯಾ ತಾಲೂಕು ಕಚೇರಿಯಲ್ಲಿ ನೋಂದಾಯಿಸಿಕೊಳ್ಳಲು ಅವಕಾಶವಿದೆ. ವಿವಾಹದಲ್ಲಿ ಪಾಲ್ಗೊಳ್ಳುವ ಜೋಡಿಗಳು ತಮ್ಮ ಅಧಿಕೃತ ಮಾಹಿತಿ ಹಾಗೂ ದಾಖಲೆಗಳೊಂದಿಗೆ ಸಪ್ತಪದಿ ಕಾರ್ಯಕ್ರಮದಡಿ ವಿವಾಹಕ್ಕೆ ಅರ್ಜಿ ಸಲ್ಲಿಸಬಹುದು ಎಂದರು. ಸರಳ ಸಾಮೂಹಿಕ ವಿವಾಹದಲ್ಲಿ ಜೋಡಿಗಳೊಂದಿಗೆ ಆಗಮಿಸುವ ಸಂಬಂಧಿಕರು, ಹಿತೈಷಿಗಳಿಗೆ ಊಟೋಪಚಾರ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಡೆಸಲು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.