ETV Bharat / state

ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಜ.31ರಂದು ಸಾಮೂಹಿಕ ವಿವಾಹ - ಆರ್ ಲೋಕನಾಥ್

ಮೈಸೂರು ಜಿಲ್ಲೆಯ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ 'ಮಾಂಗಲ್ಯ ಭಾಗ್ಯ' ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿದೆ.

ಅಪರ ಜಿಲ್ಲಾಧಿಕಾರಿ ಆರ್. ಲೋಕನಾಥ್
ಅಪರ ಜಿಲ್ಲಾಧಿಕಾರಿ ಆರ್. ಲೋಕನಾಥ್
author img

By ETV Bharat Karnataka Team

Published : Dec 29, 2023, 10:27 PM IST

ಮೈಸೂರು: ನಂಜನಗೂಡಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಜನವರಿ 31ರಂದು 'ಮಾಂಗಲ್ಯ ಭಾಗ್ಯ' ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅರ್ಹರು ನೋಂದಣಿ ಮಾಡಿಕೊಂಡು ಸದುಪಯೋಗ ಪಡೆದುಕೊಳ್ಳಬಹುದು ಎಂದು ಅಪರ ಜಿಲ್ಲಾಧಿಕಾರಿ ಆರ್.ಲೋಕನಾಥ್ ತಿಳಿಸಿದ್ದಾರೆ. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಈ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾಡಳಿತದ ವತಿಯಿಂದ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 13 ಅಂತಿಮ ದಿನಾಂಕ. ಅರ್ಜಿಗಳನ್ನು ತಾಲ್ಲೂಕು ಕಚೇರಿಗಳಲ್ಲಿ, ಜಿಲ್ಲೆಯ ಎ ಗ್ರೇಡ್ ಹಾಗೂ ಬಿ ಗ್ರೇಡ್ ದೇವಸ್ಥಾನಗಳಲ್ಲಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಲ್ಲಿಸಬಹುದು. ನಂತರ ಅರ್ಜಿಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಬೇಕಿದೆ ಎಂದರು.

ವಿವಾಹಕ್ಕೆ ನೋಂದಣಿ ಮಾಡಿಕೊಳ್ಳುವ ವಧು, ವರರ ಜನ್ಮ ದಿನಾಂಕವನ್ನು ಪರಿಶೀಲನೆ ನಡೆಸಬೇಕು. ಹೆಣ್ಣಿಗೆ 18 ವರ್ಷ, ಗಂಡಿಗೆ 21 ವರ್ಷ ತುಂಬಿರಬೇಕು. ವಯಸ್ಸಿನ ದೃಢೀಕರಣಕ್ಕೆ ಜನನ ಪ್ರಮಾಣ ಪತ್ರ ಅಥವಾ ಎಸ್​ಎಸ್​ಎಲ್​ಸಿ ಅಂಕಪಟ್ಟಿ ಪರಿಶೀಲಿಸಬೇಕು. ವಧು, ವರರು ಅನಕ್ಷರಸ್ಥರಿದ್ದರೆ ವಯಸ್ಸಿನ ದೃಢೀಕರಣಕ್ಕಾಗಿ ತಾಲ್ಲೂಕು ವೈದ್ಯಾಧಿಕಾರಿಗಳಿಂದ ದೃಢೀಕರಣ ಪತ್ರ ನೀಡಬೇಕು. ಸಾಮೂಹಿಕ ವಿವಾಹ ಆದ ನಂತರ ವಿವಾಹವನ್ನು ನೋಂದಣಿ ಮಾಡಿಸಬೇಕು. ನ್ಯಾಯಾಲಯದಲ್ಲಿ ಯಾವುದೇ ಪ್ರಕರಣಗಳು ಇಲ್ಲ, ಕ್ರಿಮಿನಲ್ ಪ್ರಕರಣಗಳು ಇಲ್ಲ ಎಂಬ ಕುರಿತು ಲಿಖಿತ ಹೇಳಿಕೆ ಪಡೆಯಬೇಕು ಎಂದು ಅಧಿಕಾರಿಗಳಿಗೆ ಆರ್.ಲೋಕನಾಥ್ ಸೂಚನೆ ನೀಡಿದರು.

ವಿವಾಹಕ್ಕೆ ಅಗತ್ಯ ವಸ್ತುಗಳನ್ನು ಖರೀದಿಸಲು ವರನಿಗೆ 5 ಸಾವಿರ ರೂ, ವಧುವಿಗೆ 10 ಸಾವಿರ ರೂ ಹಾಗೂ ಚಿನ್ನದ ತಾಳಿ, ಎರಡು ಚಿನ್ನದ ಗುಂಡು ಖರೀದಿಸಲು 40 ಸಾವಿರ ರೂ ಸೇರಿದಂತೆ ಒಂದು ಜೋಡಿಗೆ ಒಟ್ಟು 55 ಸಾವಿರ ಪ್ರೋತ್ಸಾಹಧನ ನೀಡಲಾಗುವುದು. ತಾಲ್ಲೂಕು ಮಟ್ಟದಲ್ಲಿ ಜಾಹೀರಾತು ಫಲಕಗಳ ಮೂಲಕ, ವಿವಿಧ ದೇವಸ್ಥಾನಗಳಲ್ಲಿ ಪ್ಲೆಕ್ಸ್ ಮೂಲಕ ಹಾಗೂ ಕರಪತ್ರಗಳ ಮೂಲಕ ಅಗತ್ಯ ಪ್ರಚಾರ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಲೋಕನಾಥ್ ತಿಳಿಸಿದರು.

ಇದನ್ನೂ ಓದಿ: ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಎಸ್​ಆರ್​ಟಿಸಿ, ಬಿಎಂಟಿಸಿ ನೂತನ ಬಸ್ ನಿಲ್ದಾಣಗಳ ಉದ್ಘಾಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.