ETV Bharat / state

ದಸರಾ ಪೂರ್ವಭಾವಿ ಸಭೆ; ಹಲವು ನಿಯಮಾನುಸಾರ ನಾಡಹಬ್ಬ ಆಚರಣೆಗೆ ನಿರ್ಧಾರ - dasara celebration

ಕೋವಿಡ್​​-19 ಬಿಕ್ಕಟ್ಟು ಹಿನ್ನೆಲೆ ವಿಶ್ವವಿಖ್ಯಾತ ದಸರಾ ಹಬ್ಬವನ್ನು ಈ ಬಾರಿ ಸರಳವಾಗಿ ಆಚರಿಸಲು ನಿರ್ಧಾರ ಕೈಗೊಳ್ಳಲಾಗಿದೆ. ನಾಡಹಬ್ಬ ಆಚರಣೆ ಸಂಬಂಧ ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್​.ಟಿ.ಸೋಮಶೇಖರ್ ಹಾಗೂ ಸಚಿವ ಸಿ.ಟಿ. ರವಿ ಉಪಸ್ಥಿತಿಯಲ್ಲಿ ದಸರಾ ಪೂರ್ವಭಾವಿ ಸಭೆ ನಡೆಯಿತು.

meeting in mysore regarding dasara celebration
ದಸರಾ ಪೂರ್ವಭಾವಿ ಸಭೆ
author img

By

Published : Sep 12, 2020, 9:08 PM IST

ಮೈಸೂರು : ದಸರಾ ಮಹೋತ್ಸವ 2020 ರ ಪ್ರಯುಕ್ತ ಜಿಲ್ಲಾ ಉಸ್ತುವಾರಿ ಸಚಿವ ಎಸ್​.ಟಿ.ಸೋಮಶೇಖರ್ ಅಧ್ಯಕ್ಷತೆಯಲ್ಲಿ ಹಾಗೂ ಸಚಿವರಾದ ಸಿ.ಟಿ.ರವಿ ಉಪಸ್ಥಿತಿಯಲ್ಲಿ ಕಾರ್ಯಕಾರಿ ಸಮಿತಿ ಸಭೆ ನಡೆದಿದ್ದು, ಅದರ ಮುಖ್ಯಾಂಶಗಳು ಇಂತಿವೆ.

  • ಕೋವಿಡ್ ಹಿನ್ನೆಲೆ ಈ ಬಾರಿ ನಾಡಹಬ್ಬವನ್ನು ಸರಳವಾಗಿ ಆಚರಿಸಲು ನಿರ್ಧಾರ
  • ಅಕ್ಟೋಬರ್ 2 ರ ಮಧ್ಯಾಹ್ನ 12.18 ಗಂಟೆಗೆ ದಸರಾ ಗಜಪಡೆ ಸ್ವಾಗತ ಕಾರ್ಯಕ್ರಮ
  • ಈ ಹಿಂದೆ ವೀರನ ಹೊಸಹಳ್ಳಿಯಲ್ಲಿ ಆಯೋಜಿಸುತ್ತಿದ್ದ ಗಜ ಪಯಣ ಸಮಾರಂಭ ಇರಲ್ಲ.
  • ನೇರವಾಗಿ ಮೈಸೂರು ಅರಮನೆ ಆವರಣಕ್ಕೆ ಗಜಪಡೆಯ ಆಗಮನ
  • ಕೊರೊನಾ ವಾರಿಯರ್ಸ್ ಗಳಿಂದ ಚಾಮುಂಡಿ ಬೆಟ್ಟದಲ್ಲಿ ದಸರಾ ಮಹೋತ್ಸವ ಉದ್ಘಾಟನೆ
  • ಐವರು ಕೊರೊನಾ ವಾರಿಯರ್ಸ್ ಗಳ ಪೈಕಿ ಒಬ್ಬರಿಂದ ದಸರಾ ಉದ್ಘಾಟನೆ, ಉಳಿದವರಿಗೆ ಸನ್ಮಾನ
  • ಸನ್ಮಾನಿತರ ಪಟ್ಟಿಯಲ್ಲಿ ಕೋವಿಡ್ ಶವ ಸಂಸ್ಕಾರ ಮಾಡಿದ ವ್ಯಕ್ತಿಯನ್ನು ಸೇರಿಸಿಕೊಳ್ಳುವ ಬಗ್ಗೆ ಪ್ರಸ್ತಾಪ‌ ಬಂದಿದೆ
  • 2020ರ ಅಕ್ಟೋಬರ್ 17 ರಂದು ಬೆಳಿಗ್ಗೆ 7‌.45 ರಿಂದ 8.15 ರೊಳಗಿನ ಶುಭ ಮುಹೂರ್ತದಲ್ಲಿ ದಸರಾ ಮಹೋತ್ಸವ ಉದ್ಘಾಟನೆ
  • ದಸರಾ ದೀಪಾಲಂಕಾರ ಪ್ರತಿ ಬಾರಿಯಂತೆಯೇ ವಿದ್ಯುತ್ ನಿಗಮದ ವತಿಯಿಂದ ಇರಲಿದೆ.
  • ಜಂಬೂ ಸವಾರಿ ಮೆರವಣಿಗೆ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಲಿದೆ
  • ಜಂಬೂ ಸವಾರಿ ವೀಕ್ಷಣೆಗೆ ಎರಡು ಸಾವಿರ ಮಂದಿಗೆ ಮಾತ್ರ ಅವಕಾಶ
  • ಆದ್ರೆ, ಎಷ್ಟು ಜನರನ್ನು ಸೇರಿಸಲು ಅನುಮತಿ‌ ಸಿಗುತ್ತದೆಯೋ ನೋಡಿ, ಆಹ್ವಾನಿತರ ಸಂಖ್ಯೆಯನ್ನು ನಿರ್ಧರಿಸಲಾಗುವುದು.
  • ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರವೇ ಮೆರವಣಿಗೆ ನಡೆಸಲಾಗುವುದು.
  • ಈ ಬಾರಿ ಚಿನ್ನದ ಅಂಬಾರಿ ಹೊರಲಿರುವ ಅಭಿಮನ್ಯು
  • ಅಭಿಮನ್ಯು ಜೊತೆಗೆ ವಿಕ್ರಮ, ಗೋಪಿ, ವಿಜಯ ಮತ್ತು ಕಾವೇರಿ ಆನೆಗಳು ದಸರಾ ಮಹೋತ್ಸವದಲ್ಲಿ ಭಾಗಿಯಾಗಲಿವೆ‌.
  • ನವರಾತ್ರಿಯ ಎಲ್ಲಾ ದಿನ ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
  • ರಾಜ್ಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದರನ್ನು ಕಾರ್ಯಕ್ರಮ ನೀಡಲು ಆಹ್ವಾನಿಸಲಾಗುವುದು.
  • ಎಲ್ಲಾ ಕಾರ್ಯಕ್ರಮಗಳನ್ನು ಸಾಮಾಜಿಕ‌ ಜಾಲತಾಣದಲ್ಲಿ ನೇರ ಪ್ರಸಾರ ಮಾಡಲಾಗುವುದು.‌
    meeting in mysore regarding dasara celebration
    ದಸರಾ ಪೂರ್ವಭಾವಿ ಸಭೆ

ಸಭೆಯಲ್ಲಿ ಶಾಸಕರಾದ ಎಸ್.ಎ. ರಾಮದಾಸ್, ತನ್ವೀರ್ ಸೇಠ್, ಎಲ್.‌ನಾಗೇಂದ್ರ, ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ಕೆ. ಮಹದೇವ, ಅಶ್ವಿನ್ ಕುಮಾರ್, ಹರ್ಷವರ್ಧನ್, ಮೇಯರ್ ತಸ್ನೀಂ, ಮುಡಾ ಅಧ್ಯಕ್ಷರಾದ ಹೆಚ್.ವಿ. ರಾಜೀವ್, ಜಿಲ್ಲಾಧಿಕಾರಿ ಬಿ.ಶರತ್, ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಲೆಕ್ಸಾಂಡರ್, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಚಾಮುಂಡಿ ಬೆಟ್ಟದ ಪ್ರಧಾನ ಅರ್ಚಕರಾದ ಡಾ. ಶಶಿಶೇಖರ್ ದೀಕ್ಷಿತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ‌ ಎಸ್. ರಂಗಪ್ಪ ಸೇರಿ ಮತ್ತಿತರರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.