ಮೈಸೂರು: ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬಳು ತನ್ನ 9 ತಿಂಗಳ ಹೆಣ್ಣು ಮಗುವನ್ನು ವಿದ್ಯಾರಣ್ಯಪುರಂನ ಸುಯೇಜ್ ಫಾರ್ಂ ಬಳಿಯ ಪುಟ್ ಫಾತ್ನಲ್ಲಿ ಬಿಟ್ಟು ಹೋದ ಅಮಾನವೀಯ ಘಟನೆ ನಗರದಲ್ಲಿ ನಡೆದಿದೆ.
ಮಗು ಅಳುವುದನ್ನು ಕಂಡ ಸ್ಥಳೀಯರು ವಿದ್ಯಾರಣ್ಯಪುರಂ ಪೊಲೀಸರಿಗೆ ಮಾಹಿತಿ ನೀಡಿದರು. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಗುವನ್ನು ರಕ್ಷಿಸಿ ಚೆಲುವಾಂಬ ಆಸ್ಪತ್ರೆಗೆ ದಾಖಲಿಸಿದರು.
ಈ ವಿಷಯ ತಿಳಿದ ಮಗುವಿನ ತಂದೆ, ತಾತ ಮತ್ತು ಮಾನಸಿಕ ಅಸ್ವಸ್ಥ ತಾಯಿ ಆಸ್ಪತ್ರೆಗೆ ಭೇಟಿ ನೀಡಿ ಮಗುವನ್ನು ಪಡೆದು ಕೊಂಡಿದ್ದಾರೆ. ಇದನ್ನು ನೋಡಿದ ಸಾರ್ವಜನಿಕರು ಮಗುವಿನ ತಂದೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.