ETV Bharat / state

ನಮಗೆ ರಾಜಕೀಯ ಇಚ್ಛಾಶಕ್ತಿ ಇರುವುದರಿಂದ ಮೀಸಲಾತಿ ಹೆಚ್ಚಳ ಮಾಡಿದ್ದೇವೆ: ಸಚಿವ ಶ್ರೀರಾಮುಲು - ಕಾಡುಗೊಲ್ಲ ಸಮುದಾಯಕ್ಕೆ ಅಪಮಾನ

ಮೀಸಲಾತಿ ಹೆಚ್ಚಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೆಗೆದುಕೊಂಡಿರುವ ತೀರ್ಮಾನ ಐತಿಹಾಸಿಕವಾಗಿದೆ ಎಂದು ಸಚಿವ ಬಿ. ಶ್ರೀರಾಮುಲು ಅವರು ಹೇಳಿದ್ದಾರೆ.

ಸಚಿವ ಶ್ರೀ ರಾಮುಲು
ಸಚಿವ ಶ್ರೀ ರಾಮುಲು
author img

By

Published : Oct 27, 2022, 4:29 PM IST

ಮೈಸೂರು: ನಮಗೆ ರಾಜಕೀಯ ಇಚ್ಛಾಶಕ್ತಿ ಇರುವುದರಿಂದ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಇಚ್ಛಾಶಕ್ತಿಯಿಂದ ಮೀಸಲಾತಿಯ ಹೆಚ್ಚಳವಾಗಿದೆ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ಸದ್ಯದಲ್ಲೇ ಬಳ್ಳಾರಿಯಲ್ಲಿ ಪರಿಶಿಷ್ಟ ಪಂಗಡಗಳ ಬೃಹತ್ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು. ಆ ಹಿನ್ನೆಲೆಯಲ್ಲಿ ಇಂದು ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ಆಯೋಜನೆ ಮಾಡಲಾಗಿದೆ ಎಂದು ಸಚಿವರು ಹೇಳಿದರು.

ಎಸ್ಸಿ ಎಸ್ಟಿ ಮೀಸಲಾತಿ ಅನುಷ್ಠಾನ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕ್ರೆಡಿಟ್ ವಾರ್ ವಿಚಾರದಲ್ಲಿ ಚರ್ಚೆ ನಡೆಯುತ್ತಿದೆ. ಆದರೆ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾಲದಲ್ಲಿ ಮೀಸಲಾತಿ ಹೆಚ್ಚಳ ಸಂಬಂಧ ಸಮಿತಿ ರಚನೆ ಆಗಿರಬಹುದು. ಆದರೆ, ಮೀಸಲಾತಿ ಹೆಚ್ಚಳ ಅನುಷ್ಠಾನ ಮಾಡಿದ್ದು ನಮ್ಮ ಸರ್ಕಾರ. ಅವರಿಗೆ ರಾಜಕೀಯ ಇಚ್ಛಾಶಕ್ತಿ ಕೊರತೆಯಿತ್ತು. ಆದರೆ, ನಮಗೆ ರಾಜಕೀಯ ಇಚ್ಛಾಶಕ್ತಿ ಇರುವುದರಿಂದ ಮೀಸಲಾತಿಯ ಹೆಚ್ಚಳ ಮಾಡಿದ್ದೇವೆ ಎಂದು ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರ ಇಚ್ಛಾಶಕ್ತಿಯಿಂದ ಮೀಸಲಾತಿಯ ಹೆಚ್ಚಳವಾಗಿದೆ ಎಂದು ಹೇಳಿದರು.

ನಮಗೆ ಈಗ ಮೀಸಲಾತಿ ಸಿಕ್ಕಿದೆ: ಎಸ್ಸಿ-ಎಸ್ಟಿ ಬಳಿಕ ಹಲವು ಸಮುದಾಯಗಳು ಮೀಸಲಾತಿ ಹೆಚ್ಚಳಕ್ಕೆ ಬೇಡಿಕೆಯಿಟ್ಟಿವೆ. ಇದಕ್ಕೆ ನಮ್ಮದೇನು ಅಭ್ಯಂತರವಿಲ್ಲ. ಮೀಸಲಾತಿ ಹೆಚ್ಚಳ ಮಾಡಬೇಕಾದರೆ ಜಾತಿ ಕುಲ ಶಾಸ್ತ್ರ ಅಧ್ಯಯನ ಮಾಡಬೇಕು. ಅದರ ಅನುಷ್ಠಾನಕ್ಕೆ ಸಮಿತಿ ರಚನೆ ಮಾಡಬೇಕು ಮತ್ತು ಅದರ ವರದಿಯನ್ವಯ ಮೀಸಲಾತಿ ಹೆಚ್ಚಳ ಮಾಡಿಸಲಾಗುವುದು. ದಶಕಗಳಿಂದ ಹೋರಾಟ ನಡೆಸಿದ ನಮಗೆ ಈಗ ಮೀಸಲಾತಿ ಸಿಕ್ಕಿದೆ ಎಂದು ಹೇಳಿದರು.

ಸಚಿವ ಬಿ. ಶ್ರೀರಾಮುಲು ಅವರು ಮಾತನಾಡಿದರು

ಬಸ್ ದರ ಏರಿಕೆಯಿಲ್ಲ: ರಾಜ್ಯದಲ್ಲಿ ಸಾರಿಗೆ ಬಸ್ ದರ ಹೆಚ್ಚಳ ಪ್ರಸ್ತಾವನೆ ಸದ್ಯಕ್ಕಿಲ್ಲ. ಗ್ರಾಮೀಣ ಪ್ರದೇಶಗಳಿಗೆ ಸಾರಿಗೆ ಬಸ್ ಗಳನ್ನು ನಿಯೋಜನೆ ಮಾಡಲು ಆದ್ಯತೆ ನೀಡಲಾಗುತ್ತಿದೆ. ಎಲೆಕ್ಟ್ರಿಕ್ ಬಸ್​ಗಳ ಸೇವೆಯನ್ನು ಸಮರ್ಪಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚು ಹೆಚ್ಚು ಎಲೆಕ್ಟ್ರಿಕ್ ಬಸ್​ಗಳನ್ನು ಸೇವೆಗೆ ಸಮರ್ಪಿಸಲಾಗುವುದು ಎಂದರು.

ಕಾಡುಗೊಲ್ಲ ಸಮುದಾಯಕ್ಕೆ ಅಪಮಾನ: ಕಾಂಗ್ರೆಸ್ ನಿಂದ ಹಿಂದುಳಿದ ವರ್ಗಗಳಿಗೆ ನ್ಯಾಯ ಸಿಗುತ್ತಿಲ್ಲ. ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಕಾಡುಗೊಲ್ಲ ಸಮುದಾಯಕ್ಕೆ ಅಪಮಾನ ಮಾಡಲಾಗಿದೆ. ರಾಹುಲ್ ಗಾಂಧಿ ಭೇಟಿ ಮಾಡಿ, ಸಂವಾದಕ್ಕೆ ಮುಂದಾಗಿದ್ದ ಕಾಡುಗೊಲ್ಲರನ್ನು ತಡೆಯಲಾಗಿದ್ದು, ರಾಹುಲ್ ಭೇಟಿಗೆ ಅವಕಾಶ ನೀಡಲಿಲ್ಲ. ಇದು ಕಾಂಗ್ರೆಸ್ ನ ಹಿಂದುಳಿದ ವರ್ಗಗಳ ವಿರೋಧಿ ಧೋರಣೆಗೆ ಸಾಕ್ಷಿ ಎಂದು ಸಚಿವ ಶ್ರೀರಾಮುಲು ಹೇಳಿಕೆ ನೀಡಿದರು.

ಓದಿ: ನಾವು ಹೇಳಿರುವುದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ.. ಸಚಿವ ಶ್ರೀರಾಮುಲು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.