ETV Bharat / state

ಟೋಲ್ ಸಂಗ್ರಹ ವಿರೋಧಿ ಹೋರಾಟಕ್ಕೆ ನನ್ನ ಬೆಂಬಲ ಇದೆ : ಸಚಿವ ಚೆಲುವನಾರಾಯಣಸ್ವಾಮಿ

ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇ ಎರಡನೇ ಹಂತದ ಟೋಲ್ ಸಂಗ್ರಹ, ಕೇಂದ್ರ ಸರ್ಕಾರದ ಉದ್ದಟತನವಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವನಾರಾಯಣಸ್ವಾಮಿ ಹೇಳಿದ್ದಾರೆ.

ಕೃಷಿ ಸಚಿವ ಚೆಲುವನಾರಾಯಣಸ್ವಾಮಿ
ಕೃಷಿ ಸಚಿವ ಚೆಲುವನಾರಾಯಣಸ್ವಾಮಿ
author img

By

Published : Jul 1, 2023, 12:59 PM IST

ಮೈಸೂರು: ಬೆಂಗಳೂರು-ಮೈಸೂರು ನಡುವಿನ ಎಕ್ಸ್‌ಪ್ರೆಸ್‌ ಹೈವೇಯಲ್ಲಿ ಎರಡನೇ ಹಂತದ ಟೋಲ್ ಸಂಗ್ರಹ, ಕೇಂದ್ರ ಸರ್ಕಾರದ ಉದ್ದಟತನವಾಗಿದ್ದು, ಜನರಿಗೆ ಟೋಲ್ ಕಟ್ಟದಂತೆ ಕರೆ ನೀಡಲಾಗಿದೆ. ಟೋಲ್ ಸಂಗ್ರಹ ವಿರೋಧಿ ಹೋರಾಟಕ್ಕೆ ನಮ್ಮ ಬೆಂಬಲ ಇದೆ. ನೇರವಾಗಿ ಪ್ರತಿಭಟನೆಗೆ ಹೋಗುವುದಿಲ್ಲ. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವನಾರಾಯಣಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರು-ಮೈಸೂರು ನಡುವಿನ ಹೆದ್ದಾರಿಯಲ್ಲಿ ಎರಡನೇ ಹಂತದ ಟೋಲ್ ಸಂಗ್ರಹ ಕೇಂದ್ರ ಸರ್ಕಾರದ ಉದ್ಧಟತನ, ಜನರಿಗೆ ಟೋಲ್ ಕಟ್ಟದಂತೆ ಕರೆ ನೀಡಲಾಗಿದೆ. ಟೋಲ್ ಸಂಗ್ರಹ ವಿರೋಧಿ ಹೋರಾಟಕ್ಕೆ ನನ್ನ ಬೆಂಬಲ ಇದೆ. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ರಾಜ್ಯ ಸರ್ಕಾರವನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ ಎಂದರು.

ಟೋಲ್ ಸಮಸ್ಯೆ ಬಗ್ಗೆ ಸಿಎಂ ಸಿದ್ದರಾಮಯ್ಯರ ಗಮನಕ್ಕೆ ತರಲಾಗುವುದು. ನಮ್ಮ ಶಾಸಕರು ಮುಖ್ಯ ಕಾರ್ಯದರ್ಶಿ ಭೇಟಿ ಮಾಡಿ ಮಾತನಾಡಿದ್ದಾರೆ. ಕೇಂದ್ರ ಎಲ್ಲಿಂದಲೂ ಹಣ ತರುವುದಿಲ್ಲ. ರಾಜ್ಯ ಸರ್ಕಾರಗಳು ಕಟ್ಟುವ ತೆರಿಗೆ ಹಣದಿಂದ ಅಭಿವೃದ್ಧಿ ಕಾರ್ಯ ಮಾಡುತ್ತಿದೆ. ಹೀಗಿದ್ದರೂ ರಾಜ್ಯ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಪೂರ್ಣ ಆಗದೆ ಟೋಲ್ ಸಂಗ್ರಹ ಬೇಡ ಎಂದು ಹೇಳಿದ್ದೇವೆ.

ನಿನ್ನೆ ಎಡಿಜಿಪಿ ಅಲೋಕ್ ಕುಮಾರ್ ಸ್ಥಳ ಪರಿಶೀಲನೆ ಮಾಡಿದ್ದಾರೆ. ಎಲ್ಲಾ ಸಮಸ್ಯೆ ಸರಿ ಮಾಡಿಕೊಂಡು ಟೋಲ್ ಸಂಗ್ರಹಿಸಿದರೆ ನಮ್ಮ ಅಡ್ಡಿ ಇಲ್ಲ. ಶೀಘ್ರದಲ್ಲೇ ಇದಕ್ಕೊಂದು ರೆಮಿಡಿ ಕಂಡುಹಿಡಿಯುತ್ತೇವೆಂದು ಸಚಿವ ಚೆಲುವನಾರಾಯಣಸ್ವಾಮಿ ಹೇಳಿಕೆ ನೀಡಿದರು.

ಸಿ ಟಿ ರವಿ ಮೊದಲು ಪಂಚೆ ಸರಿಮಾಡಿಕೊಳ್ಳಲಿ: ಕಾಂಗ್ರೆಸ್​ನಲ್ಲಿ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಕಿತ್ತಾಡುತ್ತಾರೆ ಎಂದು ಮನಸ್ಸಿಗೆ ಬಂದ ರೀತಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಮಾತನಾಡುತ್ತಾರೆ. ಚುನಾವಣೆಯಲ್ಲಿ ಹೀಗೆ ಮಾತನಾಡಿದ್ದರಿಂದಲೇ ಜನ ಉತ್ತರ ಕೊಟ್ಟಿದ್ದಾರೆ. ಸಿ ಟಿ ರವಿ ಮೊದಲು ತಮ್ಮ ಪಂಚೆ ಸರಿಮಾಡಿಕೊಳ್ಳಲಿ. ಪ್ರಜಾಪ್ರಭುತ್ವದಲ್ಲಿ ಜನರ ಉತ್ತರವೇ ಅಂತಿಮ. ಇದಕ್ಕಾಗಿಯೇ ಜನ ಬಿಜೆಪಿಯನ್ನ 66 ಸ್ಥಾನಕ್ಕೆ ಇಳಿಸಿದ್ದಾರೆ. ಈಗ ಜನರೇ ಉತ್ತರ ಕೊಟ್ಟಿದ್ದಾರೆ. ಮೊದಲು ಸಿ ಟಿ ರವಿ ತಮ್ಮ ಪಂಚೆ ಸರಿಮಾಡಿಕೊಳ್ಳಲಿ. ದಿನಬೆಳಗಾದರೆ ಕಾಂಗ್ರೆಸ್ ಬಗ್ಗೆ ಮಾತನಾಡುವುದನ್ನು ನಿಲ್ಲಿಸಲಿ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಜಾರಿ ಆಗುವುದಿಲ್ಲ ಎಂದು ಬಿಜೆಪಿ, ಜೆಡಿಎಸ್ ಹೋರಾಟ ಮಾಡಿದ್ದು ಸರಿಯಲ್ಲ ಎಂದರು.

ಕಾಂಗ್ರೆಸ್​ ಗ್ಯಾರೆಂಟಿ ಯೋಜನೆ ಜಾರಿಗೆ ತರದಿದ್ದಲ್ಲಿ ಜುಲೈ 5 ರಂದು ವಿಧಾನಸೌಧದ ಮುಂದೆ ಯಡಿಯೂರಪ್ಪ ಧರಣಿ ಮಾಡುವುದಾಗಿ ಹೇಳಿದ್ದಾರೆ ಅದಕ್ಕೆ ಸ್ವಾಗತಾರ್ಹ. ಅವರ ಜೊತೆ ಬೊಮ್ಮಾಯಿ, ಸಾಮ್ರಾಟ್ ಅಶೋಕ್, ಸಿ ಟಿ ರವಿ ಎಲ್ಲರೂ ಬಂದು ಹೋರಾಟ ಮಾಡಲಿ ಎಂದು ವ್ಯಂಗ್ಯವಾಡಿದರು.

ಬಳಿಕ ಜೊತೆಗೆ ಟೋಲ್ ಸಂಗ್ರಹ ಧರಣಿಯಲ್ಲೂ ನೀವು ಭಾಗವಹಿಸುತ್ತೀರಾ ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಾನು ರೈತರ ಹೋರಾಟಕ್ಕೆ ಬೆಂಬಲ ಕೊಟ್ಟಿದ್ದೇನೆ. ಟೋಲ್ ಕಟ್ಟಬೇಡಿ ಎಂದು ಹೇಳಿದ್ದೇನೆ. ಟೋಲ್ ಸಂಗ್ರಹ ವಿರೋಧಿ ಹೋರಾಟಕ್ಕೆ ನನ್ನ ಬೆಂಬಲ ಇದೆ. ಈ ಟೋಲ್ ನಿಂದ ಮಂಡ್ಯದವರಿಗೆ ಮಾತ್ರ ತೊಂದರೆ ಆಗುವುದಿಲ್ಲ ಬೆಂಗಳೂರು, ಕೇರಳ, ತಮಿಳುನಾಡು ಹೀಗೆ ಹೊರ ರಾಜ್ಯಗಳಿಗೆ ಹೋಗುವವರಿಗೆ ಎಲ್ಲರಿಗೂ ತೊಂದರೆ ಆಗುತ್ತದೆ. ಹೀಗಾಗಿ ನಾನು ಸಿಎಂ ಜೊತೆ ಚರ್ಚೆ ಮಾಡಿದ್ದೇನೆ. ಇಲಾಖೆಯ ಅಧಿಕಾರಿಗಳ ಜೊತೆಯೂ ಸಹ ಮಾತನಾಡುತ್ತೇನೆ, ಎಂದು ಇದೇ ಸಂದರ್ಭದಲ್ಲಿ ಹೇಳಿದರು.

ಇದನ್ನೂ ಓದಿ: Bengaluru-Mysuru Expressway: ಜುಲೈ 1ರಿಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇಯಲ್ಲಿ 2ನೇ ಟೋಲ್ ಆರಂಭ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.