ETV Bharat / state

ಅಪ್ಪ ಅಂಬಾರಿ ಹೊತ್ತ ಅಂತ ಮರಿ ಆನೆಗೆ ಹೊರಿಸೋಕೆ ‌ಆಗಲ್ಲ: ಸಿ‌‌.ಪಿ.ಯೋಗೇಶ್ವರ್ - ಸಚಿವ ಸಿ.ಪಿ.ಯೋಗೇಶ್ವರ್

ಸಿಎಂ ಹುದ್ದೆ ಅನ್ನೋದು ಅಂಬಾರಿ ಹೊರುವ ಆನೆ ಇದ್ದಂತೆ. ಸಂವೇದನಾಶೀಲ, ಆಲೋಚನೆಯುಳ್ಳ ಆನೆ ಸೂಕ್ತ. ಸಿಎಂ ಹುದ್ದೆ ವೈಭವ, ಪ್ರೆಸ್ಟೀಜ್‌ಗೆ ಅಲ್ಲ. ರಾಜ್ಯದ ಜನರ ಆಶೋತ್ತರಗಳನ್ನು ಈಡೇರಿಸುವಂತಿರಬೇಕು ಎಂದು ಸಿಪಿವೈ ಹೇಳಿದರು.

Minister C.P. Yogeshwar Statement  in mysore
ಮೈಸೂರಿನಲ್ಲಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿಕೆ
author img

By

Published : Jul 4, 2021, 5:46 PM IST

ಮೈಸೂರು: ಅಪ್ಪ ಹೊತ್ತ ಅಂತ ಮರಿ ಆನೆಗೆ ಅಂಬಾರಿ ಹೊರಿಸೋಕೆ‌ ಆಗಲ್ಲ ಎಂದು ಬಿ.ವೈ.ವಿಜಯೇಂದ್ರ ವಿರುದ್ಧ ಸಚಿವ ಸಿ.ಪಿ.ಯೋಗೇಶ್ವರ್ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.

ಮೈಸೂರಿನಲ್ಲಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿಕೆ

ಜಯಲಕ್ಷ್ಮಿಪುರಂನಲ್ಲಿರುವ ಸಂಸದ ವಿ‌.ಶ್ರೀನಿವಾಸ್ ಪ್ರಸಾದ್ ಅವರ ಮನೆಗೆ ಭೇಟಿ ನೀಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಹುದ್ದೆ ಅನ್ನೋದು ಅಂಬಾರಿ ಹೊರುವ ಆನೆ ಇದ್ದಂತೆ. ಸಂವೇದನಾಶೀಲ, ಆಲೋಚನೆಯುಳ್ಳ ಆನೆ ಸೂಕ್ತ. ಸಿಎಂ ಹುದ್ದೆ ವೈಭವ, ಪ್ರೆಸ್ಟೀಜ್‌ಗೆ ಅಲ್ಲ. ರಾಜ್ಯದ ಜನರ ಆಶೋತ್ತರಗಳನ್ನ ಈಡೇರಿಸುವಂತಿರಬೇಕು ಎಂದು ಹೇಳಿದರು.

ಬದಲಾವಣೆ ಜಗದ ನಿಯಮ: ಅರ್ಜುನ, ಅಭಿಮನ್ಯು ಕೆಲ ವರ್ಷ ಅಂಬಾರಿ ಹೊತ್ತರು. ಅಪ್ಪ ಹೊತ್ತ ಅಂತ ಮರಿ ಆನೆಗೆ ಅಂಬಾರಿ ಹೊರಿಸೋಕೆ‌‌ ಆಗಲ್ಲ. ನನ್ನ ಹಣೆಬರಹ ಏನ್ ಮಾಡೋದು, ದೇವಾಲಯದ ಗೋಪುರದ ಫೌಂಟೇನ್ ತರ ಆಗಿದ್ದೀನಿ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಪದೇ ಪದೇ 25 ಪರ್ಸೆಂಟ್ ಸರ್ಕಾರ ಅಂತಾರೆ. ವೈಯಕ್ತಿಕವಾದ ವಿಚಾರ ಇದ್ದರೆ, ರುಜುವಾತು ಮಾಡಬೇಕು. ನಾನು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ. ನಮ್ಮನ್ನೆಲ್ಲಾ ಒಟ್ಟೊಟ್ಟಿಗೆ ಸೇರಿಸಿ ಹೇಳಬಾರದು. ವಿಜಯೇಂದ್ರಗೆ ಸರ್ಕಾರದಲ್ಲಿ ಯಾವುದೇ ಅಧಿಕೃತ ಹುದ್ದೆ‌ ಇಲ್ಲ. ನಮಗಾಗುವ ಚಿತ್ರಹಿಂಸೆ ಯಾರಿಗೆ ಹೇಳೋದು. ನಮ್ಮ ಸರ್ಕಾರ ಬಂದರೂ ನಮ್ಮ ಸರ್ಕಾರ ಇದೆ ಎಂಬ ಭಾವನೆ ನಮಗಿಲ್ಲ. ನಮ್ಮ ಸರ್ಕಾರದಲ್ಲಿ ವಿಪಕ್ಷದವರ ಕೈ ಮೇಲಾಗ್ತಿದೆ ಎಂದರು‌.

ಇದನ್ನೂ ಓದಿ: ಸಿದ್ದರಾಮಯ್ಯ ಕಾಂಗ್ರೆಸ್​ಗೆ ಬಂದಾಗ ಪ್ರಳಯ ಆಗಿತ್ತಾ..? ಹೆಚ್​.ವಿಶ್ವನಾಥ್

ಶ್ರೀರಾಮುಲು ಪಿಎ ವಿರುದ್ಧ ದೂರು ವಿಚಾರವಾಗಿ ಮಾತನಾಡಿ, ಅಂಗೈ ಹುಣ್ಣಿಗೆ ಕನ್ನಡಿಯಾಕೆ, ಕರೆದು ಹೇಳಬಹುದಿತ್ತು. ದೂರು ಕೊಡುವಂತ ಅಗತ್ಯವಿರಲಿಲ್ಲ ಎಂದು ಹೇಳಿದರು‌‌. ಶಾಸಕ ರಮೇಶ್ ಜಾರಕಿಹೊಳಿ ಷಡ್ಯಂತ್ರಕ್ಕೆ ಬಲಿ ಆಗಿರೋದು ನಿಜ‌. ಆದರೂ ಅವರಿಗೆ ನ್ಯಾಯ ಕೊಡುವಲ್ಲಿ ದುರುದ್ದೇಶದಿಂದ ಡಿಲೇ ಆಗ್ತಿದೆ ಎಂದರು.‌

ರಾಜ್ಯದಲ್ಲಿ ವಿರೋಧಪಕ್ಷವೇ ಇಲ್ಲ. ನಮ್ಮ ಕ್ಷೇತ್ರಗಳಲ್ಲಿ ನಮಗಿಂತ ಬೇರೆ ಪಕ್ಷದವರ ಕೆಲಸವೇ ಜಾಸ್ತಿ ನಡೆಯುತ್ತೆ. ಜಿ.ಪಂ, ತಾ.ಪಂ ಚುನಾವಣೆಯಲ್ಲೂ ಮೀಸಲಾತಿ ವಿಂಗಡಣೆ ಮಾಡಬೇಕಿದ್ದು ಸರ್ಕಾರ ಹೇಳಿದೆ. ಆದರೆ, ಕುಮಾರಸ್ವಾಮಿ ಹೇಳಿದ್ದ ಹಾಗೆ ನಡೆಯುತ್ತಿದೆ. ಡಿಕೆಶಿ , ಹೆಚ್ ಡಿ.ಕುಮಾರಸ್ವಾಮಿ ಹಸ್ತಕ್ಷೇಪದ ಬಗ್ಗೆ ಅಸಮಾಧಾನ ಹೊರ ಹಾಕಿದರು‌.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.