ETV Bharat / state

ಮೈಸೂರು: ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆಗೆ ಸಚಿವ ಹೆಚ್.​ಸಿ.ಮಹದೇವಪ್ಪ ಚಾಲನೆ

ರಾಜ್ಯ ಸರ್ಕಾರ 1 ರಿಂದ 10ನೇ ತರಗತಿ ಮಕ್ಕಳಿಗೆ ಪ್ರಸಕ್ತ ಸಾಲಿನಲ್ಲಿ ವಾರ್ಷಿಕವಾಗಿ 80 ದಿನಗಳವರೆಗೂ ಪೌಷ್ಟಿಕ ಆಹಾರ ನೀಡುತ್ತದೆ ಎಂದು ಸಮಾಜ ಕಲ್ಯಾಣ ಸಚಿವ ಹೆಚ್.​ಸಿ.ಮಹದೇವಪ್ಪ ತಿಳಿಸಿದರು.

minister-hc-mahadevappa-ingurate-egg-distribution-scheme-for-school-childrens-in-mysuru
ಮೈಸೂರು: ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ ಯೋಜನೆಗೆ ಸಚಿವ ಹೆಚ್​ಸಿ ಮಹದೇವಪ್ಪ ಚಾಲನೆ
author img

By

Published : Aug 21, 2023, 4:19 PM IST

Updated : Aug 21, 2023, 5:21 PM IST

ಸಚಿವ ಹೆಚ್.​ಸಿ.ಮಹದೇವಪ್ಪ

ಮೈಸೂರು: "ದೇಶವು ಅಭಿವೃದ್ಧಿ ಹೊಂದಲು ಪ್ರತಿಯೊಬ್ಬರೂ ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯವಂತರಾಗಿರಬೇಕು. ಈ ಉದ್ದೇಶದಿಂದ ಸರ್ಕಾರವು ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುತ್ತಿದೆ" ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.​ಸಿ.ಮಹದೇವಪ್ಪ ಹೇಳಿದರು. ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮದಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ವಾರಕ್ಕೆರಡು ಬಾರಿ ಮೊಟ್ಟೆ ವಿತರಣೆ ಯೋಜನೆಗೆ ಮಹಾರಾಜ ಸರ್ಕಾರಿ ಪ್ರೌಢಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ತಿನ್ನಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

"ಬಾಲ್ಯದಲ್ಲಿ ನಮಗೆ ಮೂರು ಹೊತ್ತು ಊಟವೇ ಸಿಗುತ್ತಿರಲಿಲ್ಲ. ಬಡತನದ ದಿನಗಳಲ್ಲಿ ಮುದ್ದೆಯ ಜೊತೆಗೆ ಉಪ್ಪು ಮತ್ತು ಮೆಣಸಿನಕಾಯಿ ಸೇರಿಸಿ ಊಟ ಮಾಡುತ್ತಿದ್ದೆವು. ಯಾರೂ ಕೂಡ ಹಸಿವಿನಿಂದ ಬದುಕು ಸಾಗಿಸಬಾರದು. ಹಸಿವುಮುಕ್ತ ಸಮಾಜ ನಿರ್ಮಾಣ ಮಾಡಬೇಕು ಎಂಬ ಉದ್ದೇಶದಿಂದ ನಮ್ಮ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿಮಾಡಿದೆ. ಕಳೆದ ಸಾಲಿನಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1 ರಿಂದ 8ನೇ ತರಗತಿ ಮಕ್ಕಳಿಗೆ ಮಾತ್ರ ವಾರ್ಷಿಕವಾಗಿ 46 ದಿನಗಳಿಗೆ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿಯನ್ನು ವಿತರಿಸಲಾಗಿರುತ್ತಿತ್ತು. ಆದರೆ ನಮ್ಮ ಸರ್ಕಾರ 1 ರಿಂದ 10ನೇ ತರಗತಿ ಮಕ್ಕಳಿಗೆ ಪ್ರಸಕ್ತ ಸಾಲಿನಲ್ಲಿ ವಾರ್ಷಿಕವಾಗಿ 80 ದಿನಗಳ ವರೆಗೂ ಪೌಷ್ಟಿಕ ಆಹಾರವನ್ನು ನೀಡುತ್ತದೆ" ಎಂದು ತಿಳಿಸಿದರು.

"ಮೈಸೂರು ಜಿಲ್ಲೆಯಲ್ಲಿ ಒಟ್ಟು 2,228 ಶಾಲೆಗಳಿದ್ದು, ಅದರಲ್ಲಿ ಸರ್ಕಾರಿ ಶಾಲೆಗಳು 2,064 ಅನುದಾನಿತ 258 ಶಾಲೆಗಳು ಹಾಗೂ ಮೌಲಾನಾ ಆಜಾದ್ ಮಾದರಿ 6 ಶಾಲೆಗಳ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳು ಈ ಯೋಜನೆಗೆ ಒಳಪಟ್ಟಿರುತ್ತಾರೆ. ಒಟ್ಟು 2,12,646 ವಿದ್ಯಾರ್ಥಿಗಳಲ್ಲಿ ಸರ್ಕಾರಿ ಶಾಲಾ 1,65,794 ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳು 46,852 ವಿದ್ಯಾರ್ಥಿಗಳಿಗೆ ವಾರಕ್ಕೆ ಎರಡು ದಿನದಂತೆ ಪೂರಕ ಪೌಷ್ಟಿಕ ಆಹಾರ ನೀಡಲಾಗುತ್ತಿದೆ" ಎಂದು ಮಾಹಿತಿ ನೀಡಿದರು.

"ಯೋಜನೆಯಡಿ ಪ್ರತಿ ವಿದ್ಯಾರ್ಥಿಗೆ ಘಟಕ ವೆಚ್ಚ 6 ರೂ. ಗಳಂತೆ ವಾರ್ಷಿಕ 80 ದಿನಗಳಿಗೆ ಪ್ರತಿಯೊಬ್ಬರಿಗೆ ತಲಾ 480 ರೂ. ಆಗಲಿದ್ದು, ಒಟ್ಟು ಎಲ್ಲಾ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ 10,20,70,080 ರೂಪಾಯಿಗಳನ್ನು ರಾಜ್ಯ ಸರ್ಕಾರವು ನೀಡುತ್ತಿದೆ. ವೈಜ್ಞಾನಿಕ ಮತ್ತು ವೈಚಾರಿಕತೆಯಿಂದ ಕೂಡಿದ ಶಿಕ್ಷಣ ಜಾರಿಗೆ ಬರಬೇಕೆಂದು ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಪಾದಿಸಿದ್ದರು. ಅದರಂತೆ ನಮ್ಮ ವಿದ್ಯಾರ್ಥಿಗಳು ಹಾಗೂ ಯುವ ಸಮೂಹ ಯಾವುದೇ ಧರ್ಮ, ಜಾತಿ, ಮತದ ಗೊಂದಲಕ್ಕೆ ಒಳಗಾಗದೇ ಸಂವಿಧಾನದ ಆಶಯಗಳಿಗೆ ತಕ್ಕಂತೆ ಬದುಕು ಕಟ್ಟಿಕೊಳ್ಳಬೇಕು" ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಸಕ ತನ್ವೀರ್ ಸೇಠ್, ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ, ಸಿ.ಎನ್.ಮಂಜೇಗೌಡ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ಕಾವೇರಿ ವಿಚಾರದಲ್ಲಿ ಬಿಜೆಪಿ ರಾಜಕೀಯ-ಹೆಚ್.​ಸಿ.ಮಹದೇವಪ್ಪ: ಮತ್ತೊಂದೆಡೆ, "ಕಾವೇರಿ ನದಿ ನೀರಿನ ವಿಚಾರದಲ್ಲಿ ಬಿಜೆಪಿಯವರು ತಮ್ಮ ರಾಜಕೀಯ ಬೇಳೆಯನ್ನು ಬೇಯಿಸಿಕೊಳ್ಳುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ನೀವು ಸಹ ನೀರನ್ನು ಬಿಟ್ಟಿದ್ದೀರಿ, ಈಗ ನೀವು ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ" ಎಂದು ಸಚಿವ ಹೆಚ್.​ಸಿ.ಮಹದೇವಪ್ಪ ಮೈಸೂರಿನಲ್ಲಿ ಹೇಳಿಕೆ ನೀಡಿದರು. ಇಂದು ಮೈಸೂರಿನ ಮಹಾರಾಜ ಪ್ರೌಢಶಾಲೆಯಲ್ಲಿ ಶಾಲೆಯಲ್ಲಿ ಮೊಟ್ಟೆ ವಿತರಣೆ ಯೋಜನೆಗೆ ಚಾಲನೆ ನೀಡಲು ಆಗಮಿಸಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಕಾವೇರಿ ಕರ್ನಾಟಕದ ಉಸಿರಾಗಿದೆ. ನೂರಾರು ವರ್ಷಗಳಿಂದ, ಮದ್ರಾಸ್ ಪ್ರಾಂತ್ಯ ಇದ್ದಾಗಿನನಿಂದಲೂ ನಮಗೂ ತಮಿಳುನಾಡಿಗೂ ವ್ಯಾಜ್ಯ ನಡೆಯುತ್ತಲೇ ಇದೆ" ಎಂದರು.

"ಸುಪ್ರೀಂ ಕೋರ್ಟ್​ನ ಆದೇಶದ ಮೇರೆಗೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾಗಿದೆ. ಯಾರಿಗೆ ಎಷ್ಟೆಷ್ಟು ನೀರು ಹಂಚಿಕೆ ಆಗಬೇಕೆಂಬುದು ತೀರ್ಮಾನ ಮಾದಲೇ ಆಗಿದೆ‌. ಕೋರ್ಟ್ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿದ್ದೇವೆ. ಬರದ ಪರಿಸ್ಥಿತಿಯಲ್ಲಿ ಎಲ್ಲರೂ ಸಂಕಷ್ಟವನ್ನು ಹಂಚಿಕೊಳ್ಳಬೇಕಿದೆ. ಈ ಬಾರಿ ಕಡಿಮೆ ಮಳೆ ಬಿದ್ದಿದೆ, ನಮ್ಮ ಜಲಾಶಯಗಳಲ್ಲಿ ನೀರಿನ ಸಂಗ್ರಹ ತೀರಾ ಕಡಿಮೆ ಇದೆ. ಕಟ್ಟು ಮಾದರಿಯಲ್ಲಿ ನೀರು ನೀಡಬೇಕೆಂದು ನೀರಾವರಿ ಸಲಹಾ ಸಮಿತಿ ತೀರ್ಮಾನಿಸಿದೆ. ವೈಯುಕ್ತಿಕ ಹಿತಾಸಕ್ತಿಯಿಂದ ಯಾವುದೇ ಸರ್ಕಾರ ಕೆಲಸ ಮಾಡುವುದಿಲ್ಲ. ರಾಜ್ಯದ ರೈತರ ಹಿತದೃಷ್ಟಿಯಿಂದಲೇ ಕೆಲಸ ಮಾಡಬೇಕು. ಇದರಲ್ಲಿ ರಾಜಕೀಯ ಬೆರೆಸುವ ಅಗತ್ಯವಿಲ್ಲ. ಆಗಸ್ಟ್ 23ರಂದು ನಡೆಯುವ ಸರ್ವ ಪಕ್ಷಗಳ ಸಭೆಯಲ್ಲಿ ಈ ಬಗ್ಗೆ ಒಮ್ಮತದ ನಿರ್ಧಾರ ಕೈಗೊಳ್ಳಲಾಗುತ್ತದೆ‌" ಎಂದು ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್​ಗೆ ಆಪರೇಷನ್ ಹಸ್ತದ ಅವಶ್ಯಕತೆ ಇಲ್ಲ: ಶಾಸಕ ತನ್ವೀರ್ ಸೇಠ್

Last Updated : Aug 21, 2023, 5:21 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.