ETV Bharat / state

ಮೈಸೂರು ದಸರಾ: ಪಾರಂಪರಿಕ ಟಾಂಗಾ ಸವಾರಿ ಮಾಡಿದ ಸಚಿವ ಎಚ್ ಕೆ ಪಾಟೀಲ್ ದಂಪತಿ - ಪಾರಂಪರಿಕ ಟಾಂಗ ಸವಾರಿ

ಪುರಾತತ್ವ ಇಲಾಖೆಯಿಂದ ಆಯೋಜಿಸಿದ್ದ ಪಾರಂಪರಿಕ ಟಾಂಗ ಸವಾರಿಯನ್ನು ಸಚಿವ ಎಚ್ ಕೆ ಪಾಟೀಲ್ ದಂಪತಿ ಉದ್ಘಾಟಿಸಿದರು.

Minister HK Patil couple rode traditional tanga
ಪಾರಂಪರಿಕ ಟಾಂಗಾ ಸವಾರಿ ಮಾಡಿದ ಸಚಿವ ಎಚ್ ಕೆ.ಪಾಟೀಲ್ ದಂಪತಿ
author img

By ETV Bharat Karnataka Team

Published : Oct 20, 2023, 12:56 PM IST

Updated : Oct 20, 2023, 4:46 PM IST

ಪಾರಂಪರಿಕ ಟಾಂಗಾ ಸವಾರಿ ಮಾಡಿದ ಸಚಿವ ಎಚ್ ಕೆ ಪಾಟೀಲ್ ದಂಪತಿ

ಮೈಸೂರು: ವಿಜಯನಗರ ಸಾಮ್ರಾಜ್ಯ ಆಚರಿಸಿಕೊಂಡು ಬಂದಿದ್ದ ದಸರಾ ಪದ್ಧತಿಯನ್ನು ಮೈಸೂರಿನ ಮಹಾರಾಜರು ಮುಂದುವರೆಸಿಕೊಂಡು ಬರುವ ಮೂಲಕ ಈಡೀ ಜಗತ್ತು ಮೈಸೂರಿನತ್ತ ನೋಡುವಂತೆ ಮಾಡಿದ್ದಾರೆ. ಇದಕ್ಕೆ ಮೈಸೂರು ಮಹಾರಾಜರಿಗೆ ನಾಡಿನ ಬಗ್ಗೆ ಇದ್ದ ಅಭಿಮಾನವೇ ಕಾರಣ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್. ಕೆ ಪಾಟೀಲ್ ಹೇಳಿದರು. ಪಾರಂಪರಿಕ ಟಾಂಗಾ ಸವಾರಿ ಉದ್ಘಾಟನೆ ಮಾಡಿದ ಬಳಿಕ ಮಾಧ್ಯಮಗಳ ಜೊತೆ ಅವರು ಮಾತನಾಡಿದರು.

ಇಂದು ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ವತಿಯಿಂದ ಪಾರಂಪರಿಕ ಉಡುಗೆಯಲ್ಲಿ ನೂತನ ದಂಪತಿಗಳಿಗಾಗಿ ಆಯೋಜಿಸಿದ್ದ ಪಾರಂಪರಿಕ ಟಾಂಗ ಸವಾರಿಯ ಕಾರ್ಯಕ್ರಮವನ್ನು ಬೆಳಗ್ಗೆ ಪುರಾತತ್ವ ಇಲಾಖೆಯ ಆಯುಕ್ತ ದೇವರಾಜು, ಮಹಾಪೌರ ಶಿವಕುಮಾರ್, ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಸವಿತಾ ಸುನೀಲ್ ಬೋಸ್ ದಂಪತಿಗಳಿಗೆ ಬಾಗಿನ ನೀಡುವ ಮೂಲಕ ಸಚಿವರು ಉದ್ಘಾಟಿಸಿದರು.

ಬಹಳ ಉತ್ಕೃಷ್ಟವಾಗಿ ದಸರಾ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ. ನಾನು ನನ್ನ ಧರ್ಮಪತ್ನಿ ಹೇಮಾ, ಮಕ್ಕಳು ಮೊಮ್ಮಕ್ಕಳು ಸೇರಿ ಇಂದಿನ ಪಾರಂಪರಿಕ ಟಾಂಗಾ ಸವಾರಿಯಲ್ಲಿ ಭಾಗವಹಿಸಿದ್ದೇವೆ. ನಮ್ಮ ಸಂಸ್ಕೃತಿಯನ್ನು ಅಭಿವ್ಯಕ್ತಿಸುವಂತಹ ಇಂತಹ ವೈಭವದಲ್ಲಿ ಕುಟುಂಬ ಸಮೇತ ಭಾಗವಹಿಸಿರುವುದು ಬಹಳ ಸಂತೋಷವಾಗಿದೆ ಎಂದು ಸಂತೋಷ ಹಂಚಿಕೊಂಡರು.

ರಾಜ್ಯದಲ್ಲಿ ಒಟ್ಟು 25 ಸಾವಿರ ಪಾರಂಪರಿಕ ಕಟ್ಟಡಗಳು, ಸ್ಮಾರಕಗಳಿವೆ. ಇವುಗಳಲ್ಲಿ 500 ರಿಂದ 600 ಪಾರಂಪರಿಕ ಕಟ್ಟಡಗಳನ್ನು ಸರ್ಕಾರ ಗುರುತಿಸಿದೆ. ಇನ್ನೂ 500 ಪಾರಂಪರಿಕ ಕಟ್ಟಡಗಳನ್ನು ಗುರುತಿಸಿ ಉಳಿಸಿ ಸಂರಕ್ಷಿಸಲು ಯೋಜನೆಯನ್ನು ರೂಪಿಸಲಾಗುತ್ತಿದೆ. ಎಲ್ಲ ಪಾರಂಪರಿಕ ಕಟ್ಟಡಗಳಾಗಲಿ, ಸ್ಮಾರಕಗಳನ್ನಾಗಲಿ ಸರ್ಕಾರ ಒಂದೇ ನಿರ್ವಹಣೆ ಮಾಡಲು ಆಗಲ್ಲ. ಅದಕ್ಕೆ ಜನಸಾಮಾನ್ಯರ ಅಭಿಮಾನ ಹಾಗೂ ಸಹಕಾರ ಬೇಕಾಗುತ್ತದೆ ಎಂದು ಹೇಳಿದರು.

ಪಾರಂಪರಿಕ ಕಟ್ಟಡಗಳು, ಸ್ಮಾರಕಗಳು ನಿಮ್ಮ ಊರಿನಲ್ಲಿಯೇ ಇದ್ದರೆ ಅಂತಹ ಸ್ಮಾರಕವನ್ನೂ ರಕ್ಷಿಸುವ ಹಕ್ಕು ನಿಮಗಿರುತ್ತದೆ. ಹಾಗೂ ದತ್ತು ತೆಗೆದುಕೊಂಡು ರಕ್ಷಿಸಬಹುದಾಗಿದೆ. ಇಂತಹ ಕಟ್ಟಡಗಳನ್ನು ರಕ್ಷಿಸಲು ಜನರನ್ನು ಉತ್ತೇಜಿಸಲು ರಾಜ್ಯ ಸರ್ಕಾರ "ನಮ್ಮ ಸ್ಮಾರಕಗಳ ದತ್ತು ಕಾರ್ಯಕ್ರಮ"ವನ್ನು ಹಮ್ಮಿಕೊಂಡಿದ್ದು, ಅದು ಯಶಸ್ವಿಯಾಗಿ ಸಾಗುತ್ತಿದೆ ಎಂದರು.

ಅಮೆರಿಕಾದ ಅನಿವಾಸಿ ಭಾರತೀಯರೊಡನೆ ಆನ್​ಲೈನ್ ಮೂಲಕ (ಜೂಮ್ ಮೀಟಿಂಗ್) ಪಾರಂಪರಿಕ ಕಟ್ಟಡಗಳ ದತ್ತು ತೆಗೆದುಕೊಳ್ಳುವ ಸಂಬಂಧ ಚರ್ಚಿಸಿದ್ದೇನೆ. ಇದರಿಂದಾಗಿ ಸುಮಾರು 20 ಅನಿವಾಸಿ ಭಾರತೀಯರು ಪಾರಂಪರಿಕ ಕಟ್ಟಡಗಳನ್ನು ದತ್ತು ತೆಗೆದುಕೊಂಡು ಸಂರಕ್ಷಿಸುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಆಕರ್ಷಕ ದೀಪಾಲಂಕಾರಗಳಿಂದ ಜಗಮಗಿಸುತ್ತಿದೆ ಸಾಂಸ್ಕೃತಿಕ ನಗರಿ ಮೈಸೂರು: ಚಿತ್ರಗಳಲ್ಲಿ ನೋಡಿ

Last Updated : Oct 20, 2023, 4:46 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.