ETV Bharat / state

ಮೈಸೂರು, ಮಂಡ್ಯದಲ್ಲಿ ಸಾಲುಮರದ ತಿಮ್ಮಕ್ಕ ಟ್ರೀ ಪಾರ್ಕ್ ನಿರ್ಮಾಣಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

author img

By

Published : Jul 17, 2023, 10:07 AM IST

ಮೈಸೂರು ಮತ್ತು ಮಂಡ್ಯ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ಸಾಲುಮರದ ತಿಮ್ಮಕ್ಕ ಟ್ರೀ ಪಾರ್ಕ್​ಗಳನ್ನು ನಿರ್ಮಿಸುವಂತೆ ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

Progress review meeting at Aranya Bhawan Mysore
ಮೈಸೂರಿನ ಅರಣ್ಯ ಭವನದಲ್ಲಿ ಪ್ರಗತಿ ಪರಿಶೀಲನಾ ಸಭೆ

ಮೈಸೂರು: ಮೈಸೂರು ಮತ್ತು ಮಂಡ್ಯ ಜಿಲ್ಲೆಯ ಯಾವ ವಿಧಾನಸಭಾ ಕ್ಷೇತ್ರಗಳಲ್ಲಿ ಸಸ್ಯೋದ್ಯಾನ (ಟ್ರೀ ಪಾರ್ಕ್) ಇಲ್ಲವೋ ಅಲ್ಲಿ ಸಾಲುಮರದ ತಿಮ್ಮಕ್ಕ ಟ್ರೀ ಪಾರ್ಕ್​ಗಳನ್ನು ನಿರ್ಮಿಸುವಂತೆ ರಾಜ್ಯ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಮೈಸೂರಿನ ಅರಣ್ಯ ಭವನದಲ್ಲಿ ಭಾನುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಇಂದಿನ ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ವೈಪರೀತ್ಯ ತಡೆಗೆ ವೃಕ್ಷ ಸಂಪತ್ತಿನ ಹೆಚ್ಚಳ ಅನಿವಾರ್ಯ ಎಂದರು. ರಾಜ್ಯ ಸರ್ಕಾರ ಪ್ರಸಕ್ತ ವರ್ಷ 5 ಕೋಟಿ ಸಸಿಗಳನ್ನು ನೆಟ್ಟು ಪೋಷಿಸಲು ತೀರ್ಮಾನಿಸಿದೆ ಎಂದರು.

ದಿನಗೂಲಿ ನೌಕರರಿಗೆ ಅದರಲ್ಲೂ ಹೊರಗುತ್ತಿಗೆ ನೌಕರರಿಗೆ ವೇತನ ವಿಳಂಬವಾಗುತ್ತಿರುವ ಬಗ್ಗೆ ದೂರುಗಳು ಬಂದಿವೆ. ಅಂತಹ ಹೊರಗುತ್ತಿಗೆ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಂಡು ಬಡ ನೌಕರರಿಗೆ ಸಕಾಲದಲ್ಲಿ ಸಂಬಳ ಕೈ ಸೇರುವಂತೆ ಕ್ರಮ ವಹಿಸುವಂತೆ ಸಚಿವರು ಅಧಿಕಾರಿಗಳಿಗೆ ತಿಳಿಸಿದರು.

ದಸರಾ ಆನೆ ಆಯ್ಕೆ ವಿಚಾರ: ಮೈಸೂರು ದಸರಾ ವಿಶೇಷತೆ ಜಂಬೂ ಸವಾರಿಯಲ್ಲಿ ಆನೆಗಳೇ ಪ್ರಧಾನ ಆಕರ್ಷಣೆ. ಈ ಬಾರಿಯ ಮಹೋತ್ಸವಕ್ಕೆ 14 ಆನೆಗಳನ್ನು ಎಲ್ಲ ಮಾನದಂಡಗಳನ್ನು ಅನುಸರಿಸಿ ಆಯ್ಕೆ ಮಾಡುವಂತೆ ಹೇಳಿದರು. ಗಜ ಪಯಣ ಮತ್ತು ತಾಲೀಮುನಲ್ಲಿ ಯಾವುದೇ ಲೋಪದೋಷಗಳಿಗೆ ಆಸ್ಪದ ನೀಡದಂತೆ ಕಟ್ಟೆಚ್ಚರವಹಿಸಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೈಸೂರು ನಗರವನ್ನು ಏಕಬಳಕೆ ಪ್ಲಾಸ್ಟಿಕ್ ಮುಕ್ತಗೊಳಿಸುವ ನಿರ್ಧಾರವನ್ನು ಈಗಾಗಲೇ ಪ್ರಕಟಿಸಲಾಗಿದೆ. ಪ್ಲಾಸ್ಟಿಕ್ ಬಳಕೆ ನಿರ್ಬಂಧಿಸಲು ಜನಜಾಗೃತಿ ಮತ್ತು ಸರ್ಕಾರದ ಎಲ್ಲ ಇಲಾಖೆಗಳ ನೆರವು ಪಡೆಯಲು ಸಚಿವರು ತಿಳಿಸಿದರು.

ಅರಣ್ಯ ಭೂಮಿ ಹಕ್ಕು ಪತ್ರ ಸಮಸ್ಯೆ ಪರಿಹಾರಕ್ಕೆ ನಿರ್ಧಾರ : ಇನ್ನೊಂದೆಡೆ, ಶಾಸಕ ಅನಿಲ್​ ಚಿಕ್ಕಮಾದು ಪಾಲ್ಗೊಂಡಿದ್ದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಸಚಿವ ಖಂಡ್ರೆ, ಕಂದಾಯ ಸಚಿವರೊಂದಿಗೆ ಸಮಾಲೋಚಿಸಿ ಅರಣ್ಯ ಮತ್ತು ಕಂದಾಯ ಭೂಮಿಯ ಜಂಟಿ ಸಮೀಕ್ಷೆ ನಡೆಸುವ ಮೂಲಕ ಕಾನೂನು ವ್ಯಾಪ್ತಿಯಲ್ಲಿ ಹಕ್ಕುಪತ್ರದ ಸಮಸ್ಯೆ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.

ಡಿ.ಬಿ.ಕುಪ್ಪೆ ವ್ಯಾಪ್ತಿಯಲ್ಲಿ 12 ಕುಟುಂಬಗಳು ಅರಣ್ಯವಾಸಿಗಳು ಎಂಬ ಬಗ್ಗೆ ಇರುವ ಗೊಂದಲದ ಕುರಿತಂತೆ ಪರಿಶೀಲನೆ ಮಾಡಿ ಸೂಕ್ತ ಪರಿಹಾರ ಒದಗಿಸಲು ಶೀಘ್ರವೇ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಸಭೆ ನಡೆಸಿ, ಸಮಸ್ಯೆ ಇರುವ ರಾಜ್ಯದ ಎಲ್ಲ ಹಾಡಿ, ಮುಳುಗಡೆ ಪ್ರದೇಶದ ಸಂತ್ರಸ್ತರ ಜಮೀನುಗಳ ಕುರಿತಂತೆ ಪರ್ಯಾಲೋಚಿಸುವುದಾಗಿಯೂ ತಿಳಿಸಿದರು.

ಅರಣ್ಯ ಭೂಮಿಗೆ ಪರ್ಯಾಯವಾಗಿ ಹಕ್ಕುಪತ್ರ ವಿತರಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬಂದ ಅಹವಾಲುಗಳನ್ನು ಪರಿಶೀಲಿಸಿ 3 ಎಕರೆಗಿಂತ ಕಡಿಮೆ ಪ್ರದೇಶದಲ್ಲಿ 1980ಕ್ಕಿಂತ ಮೊದಲು ಉಳುಮೆ ಮಾಡುತ್ತಿರುವ ಮತ್ತು ಮನೆ ಕಟ್ಟಿಕೊಂಡು ಮೂರು ತಲೆಮಾರಿನಿಂದ ವಾಸಿಸುತ್ತಿರುವವರಿಗೆ ಮಾತ್ರ ಪರಿಹಾರ ಒದಗಿಸುವ ಸಂಬಂಧ ನಿಗದಿತ ಅವಧಿಯಲ್ಲಿ ಅರ್ಜಿ ಸಲ್ಲಿಸಿದ್ದರೆ, ಪರಿಶೀಲಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಇದನ್ನೂ ಓದಿ: ಮೈಸೂರು ಮೃಗಾಲಯದಲ್ಲಿ ಜನಿಸಿದ ಸಿಂಹದ ಮರಿಗಳಿಗೆ ಕಬಿನಿ, ಸೂರ್ಯ ಹಾಗೂ ಚಂದ್ರ ಎಂದು ಸಚಿವ ಈಶ್ವರ ಖಂಡ್ರೆ ನಾಮಕರಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.