ಮೈಸೂರು: ಸಚಿವ ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಂತರ ಸತ್ಯಾಸತ್ಯತೆ ಹೊರ ಬರಲಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಈಗಾಗಲೇ ಪ್ರತಿಕ್ರಿಯೆ ನೀಡಿದ್ದಾರೆ. ಇದರಲ್ಲಿ ನನ್ನ ಪಾತ್ರ ಏನೂ ಇಲ್ಲ ಎಂದು ಹೇಳಿದ್ದಾರೆ. ಸಮಗ್ರ ತನಿಖೆಯಾದಾಗ ಸತ್ಯಾಸತ್ಯತೆ ಏನೆಂಬುದು ತಿಳಿಯಲಿದೆ ಎಂದರು.
ಕೋವಿಡ್ ನಂತರ ಕೈಗಾರಿಕೆಗಳು ಚೇತರಿಸಿಕೊಳ್ಳುತ್ತಿವೆ. ದೇಶದಲ್ಲಿ 3 ಲಕ್ಷದ 70 ಸಾವಿರ ಕೋಟಿ ರೂ. ಹೂಡಿಕೆ ಪ್ರಸ್ತಾಪ ಬಂದಿದೆ. ಅದರಲ್ಲಿ ರಾಜ್ಯಕ್ಕೆ 1 ಲಕ್ಷ 59 ಸಾವಿರ ಕೋಟಿ ರೂ. ಬಂದಿದೆ. ಶೇ.41 ರಷ್ಟು ನಮ್ಮ ರಾಜ್ಯಕ್ಕೆ ಬಂಡವಾಳ ಹರಿದು ಬಂದಿದೆ. ಕೈಗಾರಿಕಾ ವಲಯದಲ್ಲಿ ನಮ್ಮ ರಾಜ್ಯ ದೇಶದಲ್ಲೇ ನಂ.1 ಸ್ಥಾನದಲ್ಲಿದೆ. ಮೈಸೂರಿನ ಎಟಿ&ಎಸ್ ಕಂಪನಿ ಸಮಸ್ಯೆ ಬಗ್ಗೆ ಮಾತನಾಡುತ್ತೇನೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.
ಓದಿ: ರಮೇಶ್ ಜಾರಕಿಹೊಳಿ ವಿರುದ್ಧ ವ್ಯವಸ್ಥಿತ ಪಿತೂರಿ: ಸಿ.ಪಿ.ಯೋಗೇಶ್ವರ್