ETV Bharat / state

ಕುಮಾರಸ್ವಾಮಿ ಸುಖಾಸುಮ್ಮನೆ ಆರೋಪ ಮಾಡುವುದಲ್ಲ.. ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ : ಸಚಿವ ಕೆ ವೆಂಕಟೇಶ್

ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಆರೋಪಗಳಿಗೆ ಪಶುಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವ ಕೆ ವೆಂಕಟೇಶ್ ತಿರುಗೇಟು ನೀಡಿದ್ದಾರೆ.

minister-k-venkatesh-slams-hd-kumarswamy
ಕುಮಾರಸ್ವಾಮಿ ಅವರು ಸುಖಾಸುಮ್ಮನೆ ಆರೋಪ ಮಾಡುವುದಲ್ಲ.. ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ : ಸಚಿವ ಕೆ ವೆಂಕಟೇಶ್
author img

By

Published : Aug 5, 2023, 5:57 PM IST

Updated : Aug 5, 2023, 6:32 PM IST

ಸಚಿವ ಕೆ ವೆಂಕಟೇಶ್ ಹೇಳಿಕೆ

ಮೈಸೂರು : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದನ್ನು ಮಾಜಿ ಮುಖ್ಯಮಂತ್ರಿ ಹೆಚ್ ​ಡಿ ಕುಮಾರಸ್ವಾಮಿ ಅವರಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ಹೀಗಾಗಿ ಸುಖಾಸುಮ್ಮನೆ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಈ ಬಗ್ಗೆ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವ ಕೆ ವೆಂಕಟೇಶ್ ತಿರುಗೇಟು ನೀಡಿದ್ದಾರೆ.

ನಗರದ ಕಲಾ ಮಂದಿರದಲ್ಲಿ ಸರ್ಕಾರದ ಗೃಹ ಜ್ಯೋತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ವೈಎಸ್​ಟಿ ಟ್ಯಾಕ್ಸ್​ ಬಗ್ಗೆ ನನಗೆ ಗೊತ್ತಿಲ್ಲ. ಈ ಬಗ್ಗೆ ಕುಮಾರಸ್ವಾಮಿ ಅವರನ್ನೇ ಕೇಳಬೇಕು. ಕುಮಾರಸ್ವಾಮಿ ಅವರು ಯಾವಾಗಲೂ ಆರೋಪ ಮಾಡುತ್ತಿರುತ್ತಾರೆ. ಆದರೆ ಇದುವರೆಗೂ ಯಾವುದನ್ನೂ ಸಾಬೀತುಪಡಿಸಿಲ್ಲ. ಯಾವುದಾದರೂ ಆರೋಪವನ್ನು ಸಾಬೀತುಪಡಿಸಿದರೆ ನಾವು ನಂಬಬಹುದು. ಸುಖಾ ಸುಮ್ಮನೆ ಆರೋಪ ಮಾಡಿದರೆ ಏನು ಪ್ರಯೋಜನ ಎಂದು ಸಚಿವರು ಪ್ರಶ್ನಿಸಿದರು.

ಮಾಜಿ ಶಾಸಕ, ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವ ಕೆ ವೆಂಕಟೇಶ್​, ಅಧಿಕಾರದಲ್ಲಿ ಇರುವವರ ಮೇಲೆ ಏನಾದರೊಂದು ಆರೋಪ ಮಾಡಲೇಬೇಕಲ್ಲ. ಅದಕ್ಕೆ ಆರೋಪ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಸೋತ ಕಾರಣ ವೈಯಕ್ತಿಕವಾಗಿ ದ್ವೇಷ ಹೆಚ್ಚಾಗಿದೆ. ಆದ್ದರಿಂದ ಈ ರೀತಿ ಮಾತನಾಡುತ್ತಿದ್ದಾರೆ. ಕುಮಾರಸ್ವಾಮಿ ಕಿಂಗ್ ಮೇಕರ್ ಆಗುವ ಆಸೆ ಹೊಂದಿದ್ದರು. ಆದರೆ ಅವರ ಆಸೆ ಈಡೇರಲಿಲ್ಲ. ಹಾಗಾಗಿ ಆರೋಪ ಮಾಡುತ್ತಿರಬಹುದು ಎಂದರು.

ಗೃಹ ಜ್ಯೋತಿ ಯೋಜನೆಗೆ ಚಾಲನೆ : ರಾಜ್ಯಾದ್ಯಂತ ಇಂದಿನಿಂದ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲಾಗಿದೆ. ಸರ್ಕಾರ ಜನರಿಗೆ ಕೊಟ್ಟ ಮಾತಿನಂತೆ ಇಂದು ಗೃಹ ಜ್ಯೋತಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಸರ್ಕಾರ ಎಲ್ಲಾ ಯೋಜನೆಗಳನ್ನು ಜಾರಿಗೊಳಿಸಲು ಬದ್ಧವಾಗಿದೆ ಎಂದು ಹೇಳಿದರು.

ಕಾಂಗ್ರೆಸ್​ ಹೈಕಮಾಂಡ್​ ಸಭೆ ಕುರಿತು ಮಾತನಾಡಿದ ಅವರು, ಲೋಕಸಭೆ ಚುನಾವಣೆ ಸಂಬಂಧ ಹೆಚ್ಚಿನ ತಯಾರಿ ನಡೆಸಲು ಸಭೆಯಲ್ಲಿ ಸೂಚನೆ ನೀಡಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಉಸ್ತುವಾರಿಗಳಿಗೆ ಚುನಾವಣೆ ತಯಾರಿ ನಡೆಸುವಂತೆ ತಿಳಿಸಿದ್ದಾರೆ. ಈ ಮೂಲಕ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಡುವಂತೆ ಕೇಳಿದ್ದಾರೆ. ಮೈಸೂರು ಕೊಡಗು ಅಭ್ಯರ್ಥಿ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. ಮುಂದೆ ಈ ಬಗ್ಗೆ ಗೊತ್ತಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ : ನೈಸ್ ಹಗರಣದ ದಾಖಲೆಗಳನ್ನು ಪ್ರಧಾನಿ ಮೋದಿಗೆ ಕೊಡುತ್ತೇನೆ, ಪೆನ್ ಡ್ರೈವ್ ಬಿಡುಗಡೆ ಮಾಡಿದ್ರೆ ತನಿಖೆ ಮಾಡುವ ತಾಕತ್ತು ಸರ್ಕಾರಕ್ಕೆ ಇದೆಯಾ? ಕುಮಾರಸ್ವಾಮಿ ಸವಾಲು

Last Updated : Aug 5, 2023, 6:32 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.