ಮೈಸೂರು : ಕರ್ನಾಟಕದಲ್ಲಿ ಮತ್ತೊಮ್ಮೆ ಲಾಕ್ಡೌನ್ ಮಾಡಲ್ಲ. ಮಾಡುವ ಅವಶ್ಯಕತೆಯೂ ಇಲ್ಲ ಎಂದು ಸಚಿವ ಕೆ ಸಿ ನಾರಾಯಣಗೌಡ ಹೇಳಿದ್ದಾರೆ.
ಮೈಸೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕೊರೊನಾದ ಬಗ್ಗೆ ಜಾಗೃತಿ ಇದೆ. ಸೋಂಕಿತ ಪ್ರಕರಣ ಹೆಚ್ಚಾಗಿದ್ದರೂ ವೈರಸ್ ಪವರ್ ಕಡಿಮೆಯಾಗುತ್ತಿದೆ. ಆದ್ದರಿಂದ ಮತ್ತೊಮ್ಮೆ ಲಾಕ್ಡೌನ್ ಮಾಡಲ್ಲ, ಮಾಡುವ ಅವಶ್ಯಕತೆಯೂ ಇಲ್ಲ ಎಂದರು. ಮುಂಬೈನಲ್ಲಿ ಶೇ. 50ರಷ್ಟು ಸ್ಲಮ್ ಇದೆ. ಆದ್ದರಿಂದ ಸೋಂಕಿತ ಪ್ರಕರಣ ಜಾಸ್ತಿ ಇದೆ ಎಂದರು.
ಹೆಚ್ ವಿಶ್ವನಾಥ್ ಅವರಿಗೆ ಎಂಎಲ್ಸಿ ಟಿಕೆಟ್ ನೀಡುವ ಕುರಿತು ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ ಎಂದರು. ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಾಡಲು ಹೊರಟಿರುವುದು ಒಳ್ಳೆಯ ಬೆಳವಣಿಗೆ ಇದರಿಂದ ಒಳ್ಳೆಯದಾಗುತ್ತದೆ ಎಂದರು.