ETV Bharat / state

ವಿಜ್ಞಾನ-ತಂತ್ರಜ್ಞಾನದ ಜೊತೆಗೆ ಕನ್ನಡವನ್ನು ಬೆಳೆಸಿ: ಸಚಿವ ಎಸ್ ಟಿ ಸೋಮಶೇಖರ್ - s t somashekhar

ಕನ್ನಡ ಭಾಷೆ ಶ್ರೀಮಂತಗೊಳಿಸುವಿಕೆಯೊಂದಿಗೆ ಸಾಹಿತ್ಯ ಹಾಗೂ ಸಂಸ್ಕೃತಿಗಳ ಉತ್ತೇಜನಕ್ಕೂ ನಮ್ಮ ಸರ್ಕಾರವು ಸಾಕಷ್ಟು ಒತ್ತು ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ‌ ಸೋಮಶೇಖರ್ ತಿಳಿಸಿದ್ದಾರೆ..

minister-s-t-somashekhar-talk-about-kannada-rajyotsava
ಅರಮನೆ ಆವರಣದಲ್ಲಿರುವ ಭುವನೇಶ್ವರಿ ತಾಯಿಗೆ ಪೂಜೆ
author img

By

Published : Nov 1, 2021, 5:37 PM IST

ಮೈಸೂರು : ವಿಜ್ಞಾನ-ತಂತ್ರಜ್ಞಾನದ ಜೊತೆ ಜೊತೆಗೆ ಕನ್ನಡವನ್ನು ಬಳಸಿ ಬೆಳೆಸಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ‌ ಸೋಮಶೇಖರ್ ತಿಳಿಸಿದರು.

ಅರಮನೆ ಆವರಣದಲ್ಲಿರುವ ಭುವನೇಶ್ವರಿ ತಾಯಿಗೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಇಂದು ಕರ್ನಾಟಕ ಏಕೀಕರಣಗೊಂಡ ದಿನ. ಇದು ಕನ್ನಡಿಗರಾದ ನಮ್ಮೆಲ್ಲರಿಗೂ ಬಹಳ ವಿಶೇಷವಾದ ದಿನ. ಕನ್ನಡದ ಕಾರಣಕ್ಕೆ ಒಗ್ಗೂಡಿರುವ ಜನ ನಾವು.

ಸ್ವಾತಂತ್ರ್ಯ ಪೂರ್ವದಲ್ಲಿ ಹಲವು ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರ ಹಲವು ಪ್ರದೇಶಗಳನ್ನು ಒಂದುಗೂಡಿಸಿ, 1956ರ ನವೆಂಬರ್ 1ರಂದು ಕರ್ನಾಟಕ ಏಕೀಕರಣ ಮಾಡಲಾಯಿತು. ಅಂದಿನಿಂದ ಪ್ರತಿ ವರ್ಷ ನವೆಂಬರ್ 1ರಂದು ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸಿಕೊಂಡು ಬಂದಿದ್ದೇವೆ ಎಂದರು.

ಅರಮನೆ ಆವರಣದಲ್ಲಿರುವ ಭುವನೇಶ್ವರಿ ತಾಯಿಗೆ ಪೂಜೆ ಸಲ್ಲಿಸಲಾಯಿತು..

ಸಾಹಿತಿಗಳು, ಚಿಂತಕರು, ಲೇಖಕರು ತಮ್ಮ ಬರಹಗಳ ಮೂಲಕ ಏಕೀಕರಣದ ಪರವಾಗಿ ಧ್ವನಿಗೂಡಿಸಿದರು. ಕನ್ನಡ ನಾಡಿನ ಸ್ಥಾಪನೆಗೆ ಹಾಗೂ ಕರ್ನಾಟಕದ ಸರ್ವತೋಮುಖ ಬೆಳವಣಿಗೆಗೆ ಅನೇಕರು ಶ್ರಮಿಸಿದ್ದಾರೆ. ಅವರೆಲ್ಲರನ್ನು ಇಂದು ಗೌರವಪೂರ್ವಕವಾಗಿ ಸ್ಮರಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಪ್ರತಿಯೊಬ್ಬರೂ ತಮ್ಮ ಮಾತೃಭಾಷೆಯನ್ನು ಗೌರವಿಸಬೇಕು ಎಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರೂ ಪ್ರತಿಪಾದಿಸಿದ್ದರು ಎಂಬುದನ್ನು ನಾವು ಮನಗಾಣಬೇಕಿದೆ. ನಮ್ಮ ನಾಡು-ನುಡಿ ಹಾಗೂ ಸಂಸ್ಕೃತಿಗೆ ಸುಮಾರು 2000 ವರ್ಷಗಳ ಭವ್ಯ ಇತಿಹಾಸವಿದೆ. ದೇಶದ ಸಾಹಿತ್ಯದಲ್ಲಿ ಮತ್ತು ಭಾಷಾ ಲೋಕದಲ್ಲಿ ಕನ್ನಡ ಹಾಗೂ ಕರ್ನಾಟಕ ಅತ್ಯುನ್ನತವಾಗಿ ಬಣ್ಣಿಸಲ್ಪಟ್ಟಿದೆ.

ಕನ್ನಡ ಭಾಷೆಯೂ ಹಲವು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದಿರುವುದು ನಮ್ಮ ಸಾಹಿತ್ಯ, ಭಾಷಾ ಶ್ರೀಮಂತಿಕೆಯನ್ನು ತೋರಿಸುತ್ತಿದೆ. ಆಡಳಿತದ ಎಲ್ಲಾ ಕ್ಷೇತ್ರಗಳಲ್ಲಿ ಕನ್ನಡ ಬಳಕೆಗೆ ನಮ್ಮ ಸರ್ಕಾರ ಇಂದು ಹೆಚ್ಚಿನ ಪ್ರಾಮುಖ್ಯತೆ ನೀಡಿದೆ. ಇದನ್ನು ಸಂಪೂರ್ಣವಾಗಿ ಜಾರಿಗೊಳಿಸುವಲ್ಲಿ ನಾವೆಲ್ಲರೂ ಮುಂದಾಗಬೇಕು ಎಂದರು.

pooja
ಅರಮನೆ ಆವರಣದಲ್ಲಿರುವ ಭುವನೇಶ್ವರಿ ತಾಯಿಗೆ ಪೂಜೆ

ಕನ್ನಡ ಭಾಷೆಯ ಶ್ರೀಮಂತಗೊಳಿಸುವಿಕೆಯೊಂದಿಗೆ ಸಾಹಿತ್ಯ ಹಾಗೂ ಸಂಸ್ಕೃತಿಗಳ ಉತ್ತೇಜನಕ್ಕೂ ನಮ್ಮ ಸರ್ಕಾರವು ಸಾಕಷ್ಟು ಒತ್ತು ನೀಡಿದೆ. ತಂತ್ರಜ್ಞಾನದ ವೇಗದಲ್ಲಿ ಹಾಗೂ ಇಂದಿನ ಡಿಜಿಟಲ್ ಲೋಕದಲ್ಲಿ ಕನ್ನಡ ಭಾಷೆಯು ಹಿಂದುಳಿಯದಂತೆ ಸರ್ಕಾರವು ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ.

ಕನ್ನಡದಲ್ಲಿ ಯೂನಿಕೋಡ್ ಅಕ್ಷರ ವಿನ್ಯಾಸ, ಪರಿವರ್ತಕಗಳು, ಚರವಾಣಿ (ಮೊಬೈಲ್‌ನಲ್ಲಿ) ಕನ್ನಡ ಬಳಕೆ, ಬ್ರೈಲ್ ಲಿಪಿಯಲ್ಲಿ ಕನ್ನಡ ಬಳಕೆ ಮತ್ತಿತರ ತಂತ್ರಾಂಶಗಳನ್ನು ಅಭಿವೃದ್ಧಿಪಡಿಸಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲೂ ಕನ್ನಡ ಲಿಪಿಯು ಹೆಚ್ಚು ಬಳಕೆಯಾಗುತ್ತಿರುವುದು ಸಂತಸದ ಬೆಳವಣಿಗೆಯಾಗಿರುತ್ತದೆ. ವಿಜ್ಞಾನ-ತಂತ್ರಜ್ಞಾನದ ಜೊತೆ ಜೊತೆಗೂ ಕನ್ನಡವನ್ನು ಬಳಸಿ, ಬೆಳೆಸಬೇಕಾಗಿದೆ.

ಚರವಾಣಿ (ಮೊಬೈಲ್) ಮೂಲಕ ಅಮೇಜಾನ್ ಆನ್‌ಲೈನ್ ಮಾರಾಟ ವೇದಿಕೆಯಲ್ಲೂ ಸಹ ಕನ್ನಡ ಬಳಸಲು ಅವಕಾಶ ಇದೆ. ಇಲ್ಲಿ ಕನ್ನಡದಲ್ಲೇ ವ್ಯವಹರಿಸುವ ಮೂಲಕ ನಮ್ಮ ನೆಲೆದ ಭಾಷೆಗೆ ಹೆಚ್ಚಿನ ಪ್ರಾಧಾನ್ಯತೆ ನೀಡಬೇಕಾಗಿದೆ. ಕನ್ನಡವನ್ನು ಯುವಕರು ಒಲವಿನ ಭಾಷೆಯಾಗಿ ಬಳಸಬೇಕಾಗಿದೆ. ಕನ್ನಡದ ಅಸ್ಮಿತೆಯನ್ನು ಕಟ್ಟುವಂತಹ ಕೆಲಸ ಪ್ರತಿಯೊಬ್ಬರಿಂದಲೂ ಆಗಬೇಕು.

ಕನ್ನಡ ನಮ್ಮ ಬದುಕಿನ ಭಾಷೆ, ನಮ್ಮ ಹೃದಯದ ಭಾಷೆ ಎಂಬುದನ್ನು ಯಾರೂ ಮರೆಯಬಾರದು. ಹಲವಾರು ಉನ್ನತ ಶಿಕ್ಷಣ ವಿಷಯಗಳನ್ನು ಕನ್ನಡದಲ್ಲೇ ವಿದ್ಯಾಭ್ಯಾಸ ಮಾಡಲು, ಪರೀಕ್ಷೆ ಬರೆಯಲು ಅವಕಾಶವಿದೆ. ನೂತನ ಶಿಕ್ಷಣ ನೀತಿಯ ಅನುಸಾರ ಇಂಜಿನಿಯರಿಂಗ್ ಶಿಕ್ಷಣವನ್ನು ಕನ್ನಡದಲ್ಲೇ ಕಲಿಸಲು ರಾಜ್ಯದ ನಾಲ್ಕೈದು ಶಿಕ್ಷಣ ಸಂಸ್ಥೆಗೆ ಅವಕಾಶ ಮಾಡಿಕೊಡಲಾಗಿದೆ. ವಿದ್ಯಾರ್ಥಿಗಳು ಈ ಅವಕಾಶ ಬಳಸಿಕೊಂಡರೆ ಮುಂದೆ ತಾಂತ್ರಿಕ ಶಿಕ್ಷಣ ನಮ್ಮ ಮಾತೃ ಭಾಷೆಯಲ್ಲೇ ಪಡೆಯಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಕನ್ನಡವು ಯಾವುದೋ ಮತ ಪಂಥದ ಭಾಷೆಯಲ್ಲ. ಅದು ಈ ನಾಡಿನ, ಈ ಮಣ್ಣಿನ ಭಾಷೆ. ಈ ಭಾಷೆಯಲ್ಲೇ ನಮ್ಮ ಸಂಸ್ಕೃತಿ ಇದೆ. ನಮ್ಮ ಸಂಸ್ಕಾರ ಇದೆ. ನಮ್ಮ ಸಂಬಂಧಗಳು ಇವೆ. ನಮ್ಮ ನಾಗರಿಕತೆ ಇದೆ. ಈ ಭಾಷೆಯ ಶ್ರೀಮಂತಿಕೆಗೆ ಹಲವಾರು ಮಹನೀಯರು ಶ್ರಮಿಸಿದ್ದಾರೆ. ಮುಂದಿನ ತಲೆಮಾರಿಗೆ ಈ ಭಾಷೆಯನ್ನು ಕೊಂಡೊಯ್ಯುವ ಜವಾಬ್ದಾರಿ ನಮ್ಮ ಮೇಲೆ ಇದೆ.‌ ಕೇವಲ ಭೌಗೋಳಿಕವಾಗಿ, ಆಡಳಿತಾತ್ಮಕವಾಗಿ ಏಕೀಕರಣವಾದರೆ ಸಾಲದು. ಕನ್ನಡದ ಮನಸ್ಸುಗಳು ಏಕೀಕರಣವಾಗಬೇಕು ಎಂಬ ಆಶಯವನ್ನು ಅವರು ವ್ಯಕ್ತಪಡಿಸಿದರು.

ಓದಿ: ಡಿಸೆಂಬರ್​ನಲ್ಲಿ ಬಿಬಿಎಂಪಿ‌ ಚುನಾವಣೆಗೆ ಸರ್ಕಾರ ಸಿದ್ಧತೆ ಮಾಡುತ್ತಿಲ್ಲ : ಸಿಎಂ ಬೊಮ್ಮಾಯಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.