ಮೈಸೂರು: ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಾಲೂಕು ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಕೊರೊನಾ ವೈರಸ್ ತಡೆಗೆ ಯಾವ ರೀತಿ ಕ್ರಮ ಕೈಗೊಳ್ಳಲಾಗಿದೆ ಎಂಬುದರ ಬಗ್ಗೆ ಮಾಹಿತಿ ಪಡೆದರು.
ಈ ಸಭೆಯಲ್ಲಿ ಶಾಸಕರಾದ ಜಿ.ಟಿ ದೇವೇಗೌಡ, ಎಸ್.ಎ.ರಾಮದಾಸ್, ಡಾ. ಯತೀಂದ್ರ ಸಿದ್ದರಾಮಯ್ಯ, ಕೆ.ಮಹದೇವ, ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಹಾಗೂ ಉನ್ನತಮಟ್ಟದ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದರು.