ಮೈಸೂರು : ನಟಿ ಡಾ.ಭಾರತಿ ವಿಷ್ಣುವರ್ಧನ್ ಬೆಂಗಳೂರಿಗೆ ತೆರಳಲು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸಹಾಯ ಮಾಡಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ನಟಿ ಡಾ.ಭಾರತಿ ವಿಷ್ಣುವರ್ಧನ್ ಅವರು ವೈಯಕ್ತಿಕ ಕೆಲಸದ ಮೇಲೆ ನಗರದಕ್ಕೆ ಬಂದಿದ್ದರು. ಲಾಕ್ಡೌನ್ ಘೋಷಣೆಯಾದ ಪರಿಣಾಮ ಎಲ್ಲ ವಾಹನಗಳ ಸಂಚಾರ ಸ್ಥಗಿತಗೊಂಡಿದ್ದು, ಪುನಃ ಬೆಂಗಳೂರಿಗೆ ಹೋಗಲು ಪರದಾಡುತ್ತಿದ್ದರು.
ಅಲ್ಲದೇ ಅವರ ಅಗತ್ಯ ಔಷಧಗಳು ಖಾಲಿಯಾದ ಪರಿಣಾಮ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ ಸೋಮಶೇಖರ್ ಅವರ ಸಹಾಯ ಕೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಮಾತನಾಡಿ ಅಗತ್ಯ ಪಾಸ್ ಮತ್ತು ವಾಹನದ ವ್ಯವಸ್ಥೆ ಮಾಡಿ ಡಾ.ಭಾರತಿ ವಿಷ್ಣುವರ್ಧನ್ ಅವರನ್ನು ಬೆಂಗಳೂರಿಗೆ ಕಳುಹಿಸಲು ವ್ಯವಸ್ಥೆ ಮಾಡಿಕೊಟ್ಟರು.