ETV Bharat / state

ದಸರಾ ಉದ್ಘಾಟನಾ ವೇದಿಕೆಯಲ್ಲಿ 13 ಗಣ್ಯರಿಗೆ ಅವಕಾಶ, ಯುವ ದಸರಾಗೆ ಕಿಚ್ಚ ಸುದೀಪ್ ಅಲಭ್ಯ: ಸಚಿವ ಸೋಮಶೇಖರ್

ದಸರಾ ಉದ್ಘಾಟನಾ ಕಾರ್ಯಕ್ರಮ ವೇದಿಕೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ 13 ಗಣ್ಯರು ಇರಲಿದ್ದಾರೆ ಎಂದು ಉಸ್ತುವಾರಿ ಸಚಿವ ಸೋಮಶೇಖರ್ ಮಾಹಿತಿ ನೀಡಿದರು.

ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರಿಗೆ ನಾಡಹಬ್ಬ ದಸರಾಗೆ ಆಹ್ವಾನ

author img

By

Published : Sep 24, 2022, 9:07 PM IST

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಸೆ.26 ರಂದು ನಡೆಯಲಿರುವ 412ನೇ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಸೇರಿದಂತೆ 13 ಜನರಿಗೆ ವೇದಿಕೆಯಲ್ಲಿ ಅವಕಾಶ ಇರುತ್ತದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಮಾಧ್ಯಮಗಳಿಗೆ ವಿವರ ನೀಡಿದರು.

ಇಂದು ಅರಮನೆಗೆ ಭೇಟಿ ನೀಡಿ, ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರಿಗೆ ನಾಡಹಬ್ಬ ದಸರಾಗೆ ಆಹ್ವಾನ ನೀಡಿ ಮಾಧ್ಯಮಗಳ ಜೊತೆ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಮಾತನಾಡಿದರು. ಪ್ರತಿ ವರ್ಷದಂತೆ ಈ ವರ್ಷವೂ ದಸರಾಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ರಾಜಮಾತೆ ಪ್ರಮೋದಾದೇವಿ ಒಡೆಯರ್ ಭರವಸೆ ನೀಡಿದ್ದಾರೆ.

ಪ್ರತಿ ವರ್ಷದಂತೆ ರಾಜಮನೆತನಕ್ಕೆ ನೀಡುವ ಗೌರವ ಧನವನ್ನು ಈ ವರ್ಷವೂ ಸಹಾ ನೀಡಲಾಗುವುದು. ಈ ಬಾರಿ ನಾಡಹಬ್ಬ ದಸರಾ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸುತ್ತಿದ್ದು, ವೇದಿಕೆಯಲ್ಲಿ ರಾಷ್ಟ್ರಪತಿಗಳು, ರಾಜ್ಯಪಾಲರು, ಮುಖ್ಯಮಂತ್ರಿ, 6 ಜನ ಕೇಂದ್ರ ಸಚಿವರು, 4 ಜನ ರಾಜ್ಯ ಸಚಿವರು ಸೇರಿ ಒಟ್ಟು 13 ಜನ ಗಣ್ಯರು ದಸರಾ ಉದ್ಘಾಟನಾ ವೇದಿಕೆಯಲ್ಲಿ ಇರಲಿದ್ದಾರೆ ಎಂದು ಮಾಹಿತಿ ನೀಡಿದರು.

ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರಿಗೆ ನಾಡಹಬ್ಬ ದಸರಾಗೆ ಆಹ್ವಾನ
ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರಿಗೆ ನಾಡಹಬ್ಬ ದಸರಾಗೆ ಆಹ್ವಾನ

(ಓದಿ: ಮೈಸೂರು ದಸರಾ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಹ್ವಾನ)

ಯುವ ದಸರಾ ಉದ್ಘಾಟನೆಗೆ ಕಿಚ್ಚ ಸುದೀಪ್ ಬರುತ್ತಿಲ್ಲ: ದಸರಾದ ಮತ್ತೊಂದು ಪ್ರಮುಖ ಆಕರ್ಷಣೆಯಾದ ಯುವ ದಸರಾ ಉದ್ಘಾಟನೆಗೆ ನಟ ಕಿಚ್ಚ ಸುದೀಪ್​​ಗೆ ಆಹ್ವಾನ ನೀಡಲಾಗಿತ್ತು. ಆದರೆ ಅವರಿಗೆ ಬೇರೆ ಕೆಲಸ ಇರುವ ಕಾರಣ ಯುವ ದಸರಾ ಉದ್ಘಾಟನೆಗೆ ಬರುತ್ತಿಲ್ಲ. ಅವರ ಬದಲಿಗೆ ಬೇರೆ ಯಾರನ್ನು ಕರೆಸಬೇಕು ಎಂಬುದನ್ನು ಚಿಂತನೆ ನಡೆಸುತ್ತಿದ್ದೇವೆ ಎಂದು ಸಚಿವರು ತಿಳಿಸಿದರು.

ಶಾಸಕ ರಾಮದಾಸ್ ದಸರಾ ಕಾರ್ಯಕ್ರಮಗಳಲ್ಲಿ ಯಾಕೆ ಭಾಗವಹಿಸುತ್ತಿಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅವರು ಮೋದಿ ಯುಗ ಉತ್ಸವ ಕಾರ್ಯಕ್ರಮದಲ್ಲಿ ಬ್ಯುಸಿಯಾಗಿದ್ದಾರೆ. ನಾಳೆಗೆ ಕಾರ್ಯಕ್ರಮ ಮುಗಿಯುತ್ತದೆ. ಅವರು ಇನ್ನು ಮುಂದೆ ದಸರಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ ಎಂದರು.

ಈ ಬಾರಿ ದಸರಾ ಪ್ರಚಾರ ಕೊರತೆ ಇಲ್ಲ. ಎಲ್ಲ ರೀತಿಯ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದೆ. ಅಧಿಕಾರಿಗಳಲ್ಲಿ ಸಮನ್ವಯತೆಯ ಕೊರತೆಯಿಲ್ಲ. ಎಲ್ಲವೂ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದರು.

(ಓದಿ: ಮೈಸೂರು ದಸರಾ 2022: ಅರಮನೆ ಆವರಣದಲ್ಲಿ ಏಳು ದಿನ ಸಾಂಸ್ಕೃತಿಕ ಕಾರ್ಯಕ್ರಮಗಳ ಕಲರವ)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.