ಮೈಸೂರು : ಪಾಲಿಕೆಯಲ್ಲಿ ಮೈತ್ರಿ ವಿಚಾರವಾಗಿ ಚರ್ಚೆ ಮಾಡಲು ಸಚಿವ ಎಸ್ ಟಿ ಸೋಮಶೇಖರ್ ಅವರು ಶಾಸಕ ಸಾ ರಾ ಮಹೇಶ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಫೆ.24ರಂದು ನಡೆಯಲಿರುವ ಮೇಯರ್ ಹಾಗೂ ಉಪಮೇಯರ್ ಚುನಾವಣೆಗೆ ಕಿಂಗ್ ಮೇಕರ್ ಆಗಿರುವ ಜೆಡಿಎಸ್ ತನ್ನ ಜೊತೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಹಾಗೂ ಬಿಜೆಪಿ ಪ್ರಯತ್ನ ನಡೆಸುತ್ತಿದೆ. ಈ ಹಿನ್ನೆಲೆ ಸಚಿವ ಎಸ್ ಟಿ ಸೋಮಶೇಖರ್ ಇಂದು ಶಾಸಕ ಸಾ ರಾ ಮಹೇಶ್ ಕಚೇರಿಗೆ ಭೇಟಿ ನೀಡಿ ಮೈತ್ರಿ ಕುರಿತು ಮಾತುಕತೆ ನಡೆಸಿದರು.
ಈ ಸಭೆಯ ಎಲ್ಲಾ ಬೆಳವಣಿಗೆಯ ಬಗ್ಗೆ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ಮಾಹಿತಿ ಪಡೆದರು. ನಾಳೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಖಾಸಗಿ ಹೋಟೆಲ್ನಲ್ಲಿ ಸಭೆ ನಡೆಯಲಿದೆ. ಯಾರ ಜೊತೆ ಜೆಡಿಎಸ್ ಮೈತ್ರಿ ಎಂದು ತಿಳಿಯಲಿದೆ.