ಮೈಸೂರು: ತಾಲೂಕು ಮಟ್ಟದಲ್ಲಿ ವಿಜೇತರಾದ ಕ್ರೀಡಾಪಟುಗಳಿಗಾಗಿ ನಡೆಯುವ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಚಾಲನೆ ನೀಡಿದರು.
ನಜರ್ಬಾದ್ನಲ್ಲಿರುವ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆಯುವ ದಸರಾ ಕ್ರೀಡಾಕೂಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮೈಸೂರು ಮಹಾರಾಜರು ಪ್ರತಿಯೊಂದು ಕ್ಷೇತ್ರಕ್ಕೂ ಮಹತ್ವ ನೀಡಿದ್ದರು ಎಂಬುದಕ್ಕೆ ದಸರಾ ಕ್ರೀಡಾಕೂಟವೇ ಸಾಕ್ಷಿ. ಈ ನಿಟ್ಟಿನಲ್ಲಿ ವಿವಿಧ ಜಿಲ್ಲೆಯಲ್ಲಿರುವ ಪ್ರತಿಭೆಗಳನ್ನು ಗುರುತಿಸುವ ಕೆಲಸ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸರ್ಕಾರ ಈ ರೀತಿಯ ಕಾರ್ಯ ಚಟುವಟಿಕೆಗಳಿಗೆ ಇನ್ನೂ ಹೆಚ್ಚಿನ ಕೊಡುಗೆ ನೀಡಿ ಕ್ರೀಡಾಪಟುಗಳು ಎತ್ತರಕ್ಕೆ ಬೆಳೆಯಲು ಸಹಕಾರಿಯಾಗಲಿದೆ ಎಂದರು.
ಈ ದಸರಾ ಕ್ರೀಡಾಕೂಟದಲ್ಲಿ ವಾಲಿಬಾಲ್, ಬಾಸ್ಕೆಟ್ ಬಾಲ್, ಹ್ಯಾಂಡ್ ಬಾಲ್, ಈಜು, ನೆಟ್ ಬಾಲ್, ಕಬಡ್ಡಿ, ಹಾಕಿ ಸೇರಿದಂತೆ 25ಕ್ಕೂ ಹೆಚ್ಚು ಕ್ರೀಡೆಗಳು ನಡೆಯಲಿವೆ.