ETV Bharat / state

ಸಿಎಂ ಬದಲಾವಣೆ ವಿಚಾರ: ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದೇನು? - ಸಚಿವ ಎಸ್.ಟಿ. ಸೋಮಶೇಖರ್ ಹೇಳಿಕೆ

ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಪ್ರಧಾನ ಮಂತ್ರಿ ಹಾಗೂ ರಾಷ್ಟ್ರೀಯ ಅಧ್ಯಕ್ಷರು ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಸಚಿವ ಎಸ್.ಟಿ. ಸೋಮಶೇಖರ್​​ ಹೇಳಿದರು.

Minister ST Somashekar
ಸಚಿವ ಎಸ್.ಟಿ. ಸೋಮಶೇಖರ್
author img

By

Published : Jul 25, 2021, 12:42 PM IST

ಮೈಸೂರು: ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಸ್ಥಾನ ಉಳಿಸಿಕೊಳ್ಳುತ್ತಾರಾ ಅಥವಾ ಕಳೆದುಕೊಳ್ಳುತ್ತಾರಾ ಎಂಬ ಕುತೂಹಲ ರಾಜ್ಯದ ಜನರಿಗಿದೆ. ಈ ಕುರಿತು ರಾಷ್ಟ್ರೀಯ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್​ ಟಿ ಸೋಮಶೇಖರ್​ ಹೇಳಿದ್ದಾರೆ.

ಈ ಸಂಬಂಧ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಪ್ರಧಾನ ಮಂತ್ರಿ ಹಾಗೂ ರಾಷ್ಟ್ರೀಯ ಅಧ್ಯಕ್ಷರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.

ಸಿಎಂ ಬದಲಾವಣೆ ವಿಚಾರ-ಸಚಿವ ಎಸ್.ಟಿ. ಸೋಮಶೇಖರ್ ಪ್ರತಿಕ್ರಿಯೆ

ಮೈಸೂರು ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಇಲ್ಲ. ಕಬಿನಿ ಜಲಾಶಯಕ್ಕೆ ಒಳ ಹರಿವು ಕಡಿಮೆಯಾಗಿದೆ. ಈಗ 30 ಸಾವಿರ ಕ್ಯೂಸೆಕ್ ಹೊರ ಹರಿವು ಇದೆ. ಕಬಿನಿಯಿಂದ 60-70 ಸಾವಿರ ಕ್ಯೂಸೆಕ್ ನೀರಿದ್ದರೆ ಮಾತ್ರ ಪ್ರವಾಹ ಉಂಟಾಗಲಿದೆ ಎಂದು ತಿಳಿಸಿದರು.

ಕೆಆರ್​​ಎಸ್ ಡ್ಯಾಮ್​​ನಿಂದ 1.50 ಲಕ್ಷ ಕ್ಯೂಸೆಕ್ ನೀರು ಹೊರ ಹರಿವು ಇದ್ದರೆ ಮಾತ್ರ ತೊಂದರೆಯಾಗಲಿದೆ. ಸದ್ಯಕ್ಕೆ ಪ್ರವಾಹದ ಪರಿಸ್ಥಿತಿ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಸಂಜೆಯೊಳಗೆ ಹೈಕಮಾಂಡ್ ಸಂದೇಶ ಬರಲಿದೆ, ಕಾದು ನೋಡಿ: ಬಿಎಸ್‌ವೈ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.