ETV Bharat / state

ಮೈಸೂರಿನಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಸಚಿವ ಸೋಮಶೇಖರ್​ - ಮೈಸೂರಿನಲ್ಲಿ ಅಕ್ರಮ ಗಣಿಗಾರಿಕೆ

ಮೈಸೂರಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಕುರಿತಂತೆ ಸಹಕಾರ ಸಚಿವ ಎಸ್​ ಟಿ ಸೋಮಶೇಖರ್​ ಪ್ರತಿಕ್ರಿಯೆ ನೀಡಿದ್ದಾರೆ.

Minister ST Somashekar reaction on illegal mining in Mysore
ಮೈಸೂರಿನಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಬಗ್ಗೆ ಸೋಮಶೇಖರ್​ ಪ್ರತಿಕ್ರಿಯೆ
author img

By

Published : Mar 5, 2022, 7:50 PM IST

ಮೈಸೂರು: ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್​.ಟಿ.ಸೋಮಶೇಖರ್ ಎಚ್ಚರಿಕೆ ರವಾನಿಸಿದ್ದಾರೆ.

ಮೈಸೂರಿನಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಬಗ್ಗೆ ಸೋಮಶೇಖರ್​ ಪ್ರತಿಕ್ರಿಯೆ

ಮಹಾನಗರ ಪಾಲಿಕೆ ನಗರದ ಸ್ವಚ್ಛತೆಗೆ ಆದ್ಯತೆ ನೀಡುವ ಉದ್ದೇಶದಿಂದ ಸ್ವಚ್ಛ ಭಾರತ್ ಅನುದಾನದಡಿಯಲ್ಲಿ ಪ್ರತಿಯೊಂದು ವಾರ್ಡ್​​ಗಳಿಗೆ ಟ್ರ್ಯಾಕ್ಟರ್ ಹಾಗೂ ಅಧಿಕಾರಿಗಳು ಸ್ಥಳ ಪರಿಶೀಲನೆಗೆ ತೆರಳಲು ಮಿನಿ ಬಸ್ ವ್ಯವಸ್ಥೆ ಮಾಡಿದೆ. ಇದನ್ನು ಸಚಿವರು ಇಂದು ಉದ್ಘಾಟಿಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗ 16 ಟ್ರ್ಯಾಕ್ಟರ್​​​ಗಳನ್ನು ಕಾರ್ಪೊರೇಷನ್​​​ಗೆ ನೀಡಲಾಗಿದೆ. ಉಳಿದವುಗಳನ್ನು ಸದ್ಯದಲ್ಲೇ ನೀಡಲಾಗುವುದು. ಜೊತೆಗೆ ಮೇಯರ್ ಸುನಂದಾ ಪಾಲನೇತ್ರರವರು ತಮ್ಮ 6 ತಿಂಗಳ ಅವಧಿಯಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದು ಮೇಯರ್​ ಕೆಲಸಕ್ಕೆ ಅಭಿನಂದಿಸಿದರು.

ಮೈಸೂರಿನಲ್ಲಿ ಅಕ್ರಮವಾಗಿ ನಡೆಯುತ್ತಿರುವ ಗಣಿಗಾರಿಕೆಗಳು, ಕ್ವಾರೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಗಣಿ ಮತ್ತು ಭೂ ವಿಜ್ಞಾನ ಸಚಿವರ ಗಮನಕ್ಕೆ ತಂದು ಪರಿಶೀಲನೆ ನಡೆಸಲಾಗುವುದು ಎಂದರು.

ದೇವರಾಜು ಮಾರುಕಟ್ಟೆ ಹಾಗೂ ಲ್ಯಾನ್ಸ್ ಡೌನ್ ಬಿಲ್ಡಿಂಗ್ ದುರಸ್ತಿ ಬಗ್ಗೆ ಈ ಬಾರಿಯ ಬಜೆಟ್‌ನಲ್ಲಿ ಪರಿಗಣಿಸಿಲ್ಲ. ಜೊತೆಗೆ ಇದರ ಬಗ್ಗೆ ಶಾಸಕ ನಾಗೇಂದ್ರ ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ. ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ‌

ಮೈಸೂರಿನಲ್ಲಿ ಚಿತ್ರನಗರಿ ಸ್ಥಾಪನೆ ಬಗ್ಗೆ ಸಚಿವ ಮುರುಗೇಶ್ ನಿರಾಣಿಯವರು ಸ್ಥಳ ಪರಿಶೀಲನೆ ಮಾಡಿದ್ದಾರೆ. ಜೊತೆಗೆ ಕೆಇಡಿಬಿ ಜೊತೆ ಎಲ್ಲರೂ ಸೇರಿ ಸಭೆ ನಡೆಸಿ ಅಡಚಣೆಗಳನ್ನು ಪರಿಹರಿಸಿ ಕ್ಯಾಬಿನೆಟ್​ಗೆ ತರುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಚಾಮುಂಡಿ ಬೆಟ್ಟದ ರೋಪ್ ವೇ ಬಗ್ಗೆ ಪರಿಸರವಾದಿಗಳ‌ ವಿರೋಧದ ಬಗ್ಗೆ ಪ್ರತಿಕ್ರಿಯಿಸಿ, ಬಜೆಟ್​​ನಲ್ಲಿ ರೋಪ್ ವೇ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ. ಅದನ್ನು ತಿಳಿದುಕೊಂಡು ಹೇಳುತ್ತೇನೆ ಎಂದರು.

ಈ ಬಾರಿಯ ಬಜೆಟ್ ಸಹಕಾರ ಇಲಾಖೆಯ ಅಭಿವೃದ್ಧಿಗೆ ಪೂರಕವಾಗಿದ್ದು, ಯಶಸ್ವಿನಿ ಯೋಜನೆಯನ್ನು ಮರು ಘೋಷಣೆ ಮಾಡಿದ್ದಾರೆ‌. ರೈತರಿಗೆ ಹೆಚ್ಚು ಸಾಲದ ವ್ಯವಸ್ಥೆ ಮಾಡಿದ್ದಾರೆ ಎಂದು ಆಯವ್ಯಯವನ್ನು ಸಮರ್ಥಿಸಿಕೊಂಡರು.

ಇದನ್ನೂ ಓದಿ: ಕುಗ್ಗುತ್ತಿರುವ ಬಂಡವಾಳ ವೆಚ್ಚದ ಮೇಲಿನ ಖರ್ಚು: ಅಭಿವೃದ್ಧಿ ಕಾಮಗಾರಿಗಳಿಗೆ ಹಣ ವಿನಿಯೋಗ ಕುಂಠಿತ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.