ETV Bharat / state

ಮೈಸೂರಿನ 11 ವಿಧಾನಸಭಾ ಕ್ಷೇತ್ರದಲ್ಲಿಯೂ ಕನ್ನಡ ಸಾಹಿತ್ಯ ಪರಿಷತ್ ಕಟ್ಟಡ: ಸಚಿವ ಸೋಮಶೇಖರ್

ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆಗೆ ಜಿಲ್ಲಾ ಉಸ್ತುವಾರಿ ಸಚಿವನಾಗಿ ಆಗಮಿಸಿರುವುದು ನನಗೆ ಹೆಮ್ಮೆಯ ಹಾಗೂ ಸಂತಸದ ವಿಷಯವಾಗಿದೆ. ಕನ್ನಡ ಉಳಿವಿಗೆ ನಾವೆಲ್ಲರೂ ಬದ್ಧರಾಗಿದ್ದೇವೆ. ಈ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

minister-st-somashekar-talk
ಸಚಿವ ಸೋಮಶೇಖರ್
author img

By

Published : Feb 23, 2021, 4:06 PM IST

ಮೈಸೂರು: ಕನ್ನಡದ ಉಳಿವು ಹಾಗೂ ಬೆಳವಣಿಗೆಗೆ ನಾನು ಹಾಗೂ ನಮ್ಮ ಸರ್ಕಾರ ಬದ್ಧವಿದೆ. ಈ ನಿಟ್ಟಿನಲ್ಲಿ ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರದಲ್ಲೂ ಸಹ ತಾಲೂಕು ಕನ್ನಡ ಸಾಹಿತ್ಯ ಪರಿಷತ್​​​ಗೆ ಸ್ವಂತ ನಿವೇಶನ, ಕಟ್ಟಡ ಕೊಡಿಸುವುದಕ್ಕೆ ನಾನು ಬದ್ಧವಾಗಿದ್ದೇನೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಸಚಿವ ಸೋಮಶೇಖರ್

ಓದಿ: ನೆಚ್ಚಿನ ನಟನಿಗೆ ಮುತ್ತಿಗೆ ಹಾಕಿದ್ದಕ್ಕೆ ಅಸಮಾಧಾನ; ಫಿಲ್ಮ್ ಚೇಂಬರ್ ಬಳಿ ಆಗಮಿಸಿದ ನಟ ಜಗ್ಗೇಶ್ ಅಭಿಮಾನಿಗಳು

ಹೆಚ್.ಡಿ. ಕೋಟೆಯಲ್ಲಿ ನಡೆಯುತ್ತಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲಾ 11 ವಿಧಾನಸಭಾ ಕ್ಷೇತ್ರದಲ್ಲೂ ಸ್ವಂತ ಕಟ್ಟಡವನ್ನು ಕೊಡಬೇಕೆಂದು ಪ್ರಸ್ತಾವನೆ ಇಟ್ಟಿದ್ದಾರೆ. ಹೆಚ್.ಡಿ. ಕೋಟೆಯಲ್ಲೂ ಸಹ ನಿವೇಶನವನ್ನು ಕೊಡಬೇಕೆಂದು ಕೇಳಲಾಗಿದ್ದು, ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವನಾಗಿ ನಾನು ಸರ್ಕಾರದಿಂದ ಆದೇಶ ಹೊರಡಿಸಲು ಸ್ಪಂದಿಸುತ್ತೇನೆ ಎಂದು ತಿಳಿಸಿದರು.

ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆಗೆ ಜಿಲ್ಲಾ ಉಸ್ತುವಾರಿ ಸಚಿವನಾಗಿ ಆಗಮಿಸಿರುವುದು ನನಗೆ ಹೆಮ್ಮೆಯ ಹಾಗೂ ಸಂತಸದ ವಿಷಯವಾಗಿದೆ. ಕನ್ನಡ ಉಳಿವಿಗೆ ನಾವೆಲ್ಲರೂ ಬದ್ಧರಾಗಿದ್ದೇವೆ. ಈ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕನ್ನಡದ ಎಲ್ಲಾ ಸಾಹಿತಿಗಳು, ಕವಿಗಳ ಹೋರಾಟದ ಫಲವಾಗಿ ಕೊನೆಗೂ ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ದೊರೆಯಿತು. ಹೀಗೆ ಕನ್ನಡ ಎಂಬ ವಿಷಯ ಬಂದಾಗ ಎಲ್ಲರೂ ಒಗ್ಗಟ್ಟಾಗುವ ಗುಣ ತಾನಾಗಿಯೇ ಬರುತ್ತದೆ ಎಂದರು.

ಕೆಆರ್​​​ಎಸ್ ಬೃಂದಾವನ ಮಾದರಿಯ ಉದ್ಯಾನವನ:

ಕೆಆರ್‌ಎಸ್​​ನಲ್ಲಿರುವ ಬೃಂದಾವನ ಉದ್ಯಾನವನದಂತೆ ಕಬಿನಿಯಲ್ಲೂ 48 ಕೋಟಿ ರೂ. ವೆಚ್ಚದಲ್ಲಿ ಉದ್ಯಾನವನ ನಿರ್ಮಿಸಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇವೆ. ಬರುವ ಬಜೆಟ್​​ನಲ್ಲಿ ಇದು ಘೋಷಣೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಹೆಚ್.ಡಿ.ಕೋಟೆಯಲ್ಲಿ ಮಳೆ ಬಂದಾಗ ಪ್ರವಾಹ ಉಂಟಾಗಿ ರಸ್ತೆ ಸಂಪರ್ಕ ಸ್ಥಗಿತವಾಗುವ ಬಗ್ಗೆ ಗಮನಕ್ಕೆ ತಂದಿದ್ದರಿಂದ ಸೇತುವೆ ಹಾಗೂ ರಸ್ತೆ ನಿರ್ಮಾಣಕ್ಕೆ ಈಗಾಗಲೇ ಅನುಮೋದನೆ ದೊರಕಿಸಿ ಕೊಡಲಾಗಿದೆ. ಅಲ್ಲದೆ, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಾನು ಹಾಗೂ ನಮ್ಮ ಸರ್ಕಾರ ಬದ್ಧವಿದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.