ETV Bharat / state

ಜೆಎಸ್ಎಸ್ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ 500 ಹಾಸಿಗೆ ನೀಡಲು ಸುತ್ತೂರು ಶ್ರೀಗಳಿಗೆ ಸಚಿವರ ಮನವಿ - 500 bed covid 19 patients

ಜೆ.ಎಸ್.ಎಸ್. ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ 500 ಹಾಸಿಗೆ ನೀಡಲು ಸುತ್ತೂರು ಶ್ರೀಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಮನವಿ ಮಾಡಿದರು. ಇದಕ್ಕೆ ಶ್ರೀಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

Minister ST Somashekhar requests jss hospital to provide 500 beds for covid 19 patients
ಸುತ್ತೂರು ಶ್ರೀಗಳಿಗೆ ಸಚಿವರ ಮನವಿ
author img

By

Published : Apr 27, 2021, 8:13 PM IST

ಮೈಸೂರು: ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿಯವರನ್ನು ಭೇಟಿ ಮಾಡಿ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಕೋವಿಡ್ ಚಿಕಿತ್ಸೆಗೆ ಜೆಎಸ್ಎಸ್ ಆಸ್ಪತ್ರೆಯಲ್ಲಿ ಹೆಚ್ಚಿನ ಹಾಸಿಗೆಯನ್ನು ಜಿಲ್ಲಾಡಳಿತಕ್ಕೆ ನೀಡುವಂತೆ ಮನವಿ ಮಾಡಿದರು.

ಸರ್ಕಾರ ನಿಯೋಜಿಸುವ ಕೋವಿಡ್ ರೋಗಿಗಳ ಚಿಕಿತ್ಸೆಗೆ ಇನ್ನೂ 500 ಹಾಸಿಗೆಗಳನ್ನು, ಮುಖ್ಯವಾಗಿ ಆಕ್ಸಿಜನೇಟೆಡ್ ಬೆಡ್​ಗಳನ್ನು ಒದಗಿಸುವಂತೆ ಮಾಡಿದ ಮನವಿಗೆ ಶ್ರೀಗಳು ಸಕಾರಾತ್ಮಕವಾಗಿ ಸ್ಪಂದಿಸಿದರು.

ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಕೊರತೆ ನೀಗಿಸಲು ಜೆಎಸ್ಎಸ್ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಎಂಎಂಸಿ & ಆರ್​ಐ ಕಾಲೇಜಿನಲ್ಲಿ ಅಂತಿಮ ವರ್ಷದಲ್ಲಿರುವ ಎಂಬಿ‌ಬಿಎಸ್ ಹಾಗೂ ಫಾರ್ಮಸಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಬಳಸಿಕೊಳ್ಳುವ ಬಗ್ಗೆಯೂ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಅಶ್ವಿನ್ ಕುಮಾರ್, ಹರ್ಷವರ್ಧನ್ ಮತ್ತಿತರರು ಹಾಜರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.