ETV Bharat / state

ಯಡಿಯೂರಪ್ಪ ಮಂತ್ರಿನೂ ಆಗಿರಲಿಲ್ಲ, ನಾನಾಗಲೇ ಕೇಂದ್ರ ಸಚಿವನಾಗಿದ್ದೆ: ಮತ್ತೆ ಗುಡುಗಿದ ಯತ್ನಾಳ್

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ಬಿಎಸ್​ವೈ ವಿರುದ್ದ ಮತ್ತೆ ವಾಗ್ದಾಳಿ ನಡೆಸಿದರು. ನಾನು ಕೇಂದ್ರ ಸಚಿವನಾಗಿದ್ದ ಅವಧಿಯಲ್ಲಿ ಬಿ ಎಸ್​ ಯಡಿಯೂರಪ್ಪ ರಾಜ್ಯದಲ್ಲಿ ಶಾಸಕರಾಗಿದ್ದರು ಅಷ್ಟೇ ಎಂದು ಕುಟುಕಿದ್ದಾರೆ.

author img

By

Published : Jul 6, 2021, 1:25 PM IST

MLA Basanagowda Patil Yatnal
ಸಿಎಂ ಬಿಎಸ್​ವೈ ವಿರುದ್ಧ ವಾಗ್ದಾಳಿ

ಮೈಸೂರು : ಆ ಅವಧಿಯಲ್ಲಿ ಬಿ.ಎಸ್‌. ಯಡಿಯೂರಪ್ಪ ಮಂತ್ರಿನೂ ಆಗಿರಲಿಲ್ಲ, ನಾನಾಗಲೇ ಕೇಂದ್ರ ಸಚಿವನಾಗಿದ್ದೆ ಎಂದು ಮುಖ್ಯಮಂತ್ರಿ ಬಿಎಸ್‌ವೈ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ವಾಗ್ದಾಳಿ ಮುಂದುವರಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಈ ಹಿಂದೆಯೇ ಮುಖ್ಯಮಂತ್ರಿ ಆಗಬೇಕಿತ್ತು. ಆದರೆ, ನಾನೇ ಕೆಲವು ಅವಕಾಶಗಳನ್ನು ಮಿಸ್ ಮಾಡಿಕೊಂಡಿದ್ದೇನೆ. ಸದಾನಂದ ಗೌಡ, ಜಗದೀಶ್ ಶೆಟ್ಟರ್‌ಗಿಂತ ನಾನು ಹಿರಿಯ. ಯಡಿಯೂರಪ್ಪ ರಾಜ್ಯದಲ್ಲಿ ಶಾಸಕರಾಗಿದ್ದಾಗ ಅವಧಿಯಲ್ಲಿ ನಾನು ಕೇಂದ್ರ ಸಚಿವನಾಗಿದ್ದೆ. ನನ್ನ ರಾಜಕೀಯ ಜೀವನ ಅಂತ್ಯವಾದರೂ ಪರವಾಗಿಲ್ಲ. ಭ್ರಷ್ಟಾಚಾರ, ಕುಟುಂಬಶಾಹಿ ರಾಜಕೀಯದ ವಿರುದ್ಧ ನನ್ನ ಹೋರಾಟ ನಿಲ್ಲಿಸುವುದಿಲ್ಲ ಎಂದು ಹೇಳಿದರು.

ಓದಿ : ತಾಕತ್ತಿದ್ರೆ ಬಿಎಸ್​ವೈ ಬೆಂಬಲವಿಲ್ಲದೆ ಯತ್ನಾಳ್ ಗೆದ್ದು ತೋರಿಸಲಿ: ಸಿಎಂ ಆಪ್ತ ಶಾಸಕರಿಂದ ಸವಾಲು

ಯಡಿಯೂರಪ್ಪನವರೇ ಸಾಕು, ಗೌರವಯುತವಾಗಿ ನಿವೃತ್ತಿಯಾಗಿ. ನಿಮ್ಮ ಭ್ರಷ್ಟಾಚಾರದ ಕರ್ಮಕಾಂಡವೇ ನಮ್ಮ ಬಳಿ ಇದೆ. ಯಡಿಯೂರಪ್ಪನವರ ಭ್ರಷ್ಟಾಚಾರದ ದಾಖಲೆಗಳನ್ನು ಬಿಡುಗಡೆ ಮಾಡಿದರೆ, ಮಠಾಧೀಶರು ಮಠ ಬಿಟ್ಟು ಓಡಬೇಕಾಗುತ್ತದೆ. ನಮ್ಮ ರಾಜ್ಯದ ಹಿತದೃಷ್ಟಿಯಿಂದ, ಪಕ್ಷದ ಹಿತದೃಷ್ಟಿಯಿಂದ ಹಾಗೂ ನಿಮ್ಮ ಕುಟುಂಬದ ಹಿತದೃಷ್ಟಿಯಿಂದಲೂ ನಿವೃತ್ತಿ ಒಳ್ಳೆಯದು ಎಂದು ಯತ್ನಾಳ್​ ಕಿಡಿಕಾರಿದರು.

ನಾನು ಏಕಾಂಗಿಯಲ್ಲ, ಸಾಕಷ್ಟು ಸಚಿವರು ಸಂಪರ್ಕದಲ್ಲಿದ್ದಾರೆ. ಎಲ್ಲರೂ ನೀವು ಮಾಡುತ್ತಿರುವುದು ನ್ಯಾಯಯುತ ಹೋರಾಟ. ಹೋರಾಟವನ್ನು ಮುಂದುವರಿಸಿ ಎಂದು ಹೇಳಿದ್ದಾರೆ. ಕೆಲವೇ ದಿನಗಳಲ್ಲಿ ನನ್ನ ಹೋರಾಟದ ಫಲ ಸಿಗುತ್ತದೆ ಎಂದು ಶಾಸಕ ಯತ್ನಾಳ ಮತ್ತೊಂದು ಬಾಂಬ್​ ಸಿಡಿಸಿದರು.

ಯತ್ನಾಳ್ ರಾಜೀನಾಮೆ ನೀಡಿ ಹೊರಬರಲಿ ಎಂಬ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯನವರು ಮೊದಲು ರಾಜೀನಾಮೆ ನೀಡಲಿ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರು ಸಿಎಂ ಪುತ್ರ ವಿಜಯೇಂದ್ರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಪರಸ್ಪರ ಭೇಟಿಯಾಗಿ ಸಲಹೆ ಕೊಡುತ್ತಾರೆ ಆರೋಪಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.