ಮೈಸೂರು: ಮಾಜಿ ಶಾಸಕ ಕೆ. ವೆಂಕಟೇಶ್ ಅವರ ಹಿಂಬಾಲಕರು ಅಪಪ್ರಚಾರ ಮಾಡುವುದನ್ನು ಮೊದಲು ನಿಲ್ಲಿಸಲಿ ಎಂದು ಶಾಸಕ ಕೆ. ಮಹದೇವ್ ಗರಂ ಆಗಿದ್ದಾರೆ.
ಪಿರಿಯಾಪಟ್ಟಣ ತಾಲೂಕಿನ ಕಿತ್ತೂರು ಹಾಗೂ ಕೊತ್ತುವಳಿ ಕೊಪ್ಪಲು ಗ್ರಾಮಗಳಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಸುಮಾರು 1.2 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ನಂತರ ಮಾತನಾಡಿದ ಅವರು, ರಸ್ತೆ ಕಾಮಗಾರಿಗೆ ಮಾಜಿ ಶಾಸಕ ಕೆ. ವೆಂಕಟೇಶ್ ಹಣ ಬಿಡುಗಡೆ ಮಾಡಿಸಿದ್ದಾರೆ ಎಂದು ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಹೊಲದಪ್ಪ ಎಲ್ಲ ಕಡೆ ಅಪಪ್ರಚಾರ ಮಾಡುತ್ತಿದ್ದಾರೆ, ಇದು ಅವರಿಗೆ ಶೋಭೆ ತರುವುದಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಾನು ಶಾಸಕನಾಗಿ ಆಯ್ಕೆಯಾಗಿ ಎರಡೂವರೆ ವರ್ಷಗಳು ಕಳೆದಿವೆ. ನಾನು ಮುಖ್ಯಮಂತ್ರಿ ಹತ್ತಿರ ಖುದ್ದು ಸರ್ಕಾರದಿಂದ ಹಣ ಮಂಜೂರು ಮಾಡಿಸಿದ್ದೇನೆ. ಇದಕ್ಕೆ ನನ್ನ ಬಳಿ ದಾಖಲೆಗಳಿವೆ. ಈ ರೀತಿ ಜನರ ದಿಕ್ಕು ತಪ್ಪಿಸುವ ಕೆಲಸವನ್ನು ಮಾಜಿ ಶಾಸಕರ ಹಿಂಬಾಲಕರು ಮೊದಲು ಕೈಬಿಡಬೇಕೆಂದು ಕಿಡಿಕಾರಿದರು.
ಇದನ್ನೂ ಓದಿ: ಮೈಸೂರು: ಕಡಿಮೆ ಬೆಲೆಗೆ ಚಿನ್ನ ಕೊಡಿಸುವುದಾಗಿ ವಂಚಿಸುತ್ತಿದ್ದ ಖದೀಮರ ಬಂಧನ