ETV Bharat / state

ಸಿದ್ದರಾಮಯ್ಯ ಒಬ್ಬ ಪಕ್ಷಾಂತರಿ, ಬಿಜೆಪಿ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ: ಮಾಜಿ ಸಚಿವ ಅಶೋಕ್ ವಾಗ್ದಾಳಿ

author img

By ETV Bharat Karnataka Team

Published : Sep 11, 2023, 10:32 PM IST

ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಶಾಸಕ ಆರ್​ ಅಶೋಕ್​ ವಾಗ್ದಾಳಿ ನಡೆಸಿದ್ದಾರೆ.

Etv Bharat
Etv Bharat

ಮೈಸೂರು : ಯಾವ್ಯಾವ ಪಾರ್ಟಿಯಲ್ಲಿ ಏನು ಅಧಿಕಾರ ಸಿಗುತ್ತದೋ ಅಲ್ಲಿಗೆ ಸಿದ್ದರಾಮಯ್ಯ ಹೋಗುತ್ತಾರೆ. ಮುಂದೆ ಯಾವ ಪಾರ್ಟಿಗೆ ಹೋಗುತ್ತಾರೆ ಎಂಬುದು ಗೊತ್ತಿಲ್ಲ. ಸಿದ್ದರಾಮಯ್ಯ ಒಬ್ಬ ಪಕ್ಷಾಂತರಿ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಸಭೆಗೆ ಆಗಮಿಸಿದ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಬಿಜೆಪಿ ಇಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಒಬ್ಬ ಪಕ್ಷಾಂತರಿ. ಪ್ರಪಂಚದಲ್ಲಿ ಬಿಜೆಪಿಯೇ ನಂಬರ್ 1 ಪಾರ್ಟಿ. ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ. ಮತ್ತೆ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಅಪ್ಪಿತಪ್ಪಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಮತ್ತೆ ರಾಜ್ಯದಲ್ಲಿ ಚುನಾವಣೆ ನಡೆದರೆ ಸಿದ್ದರಾಮಯ್ಯಗೆ ಜನ ಓಟು ಹಾಕುವುದಿಲ್ಲ ಎಂದು ಹೇಳಿದರು.

ಸಿದ್ದರಾಮಯ್ಯಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ : ಬಿಜೆಪಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ಸಿದ್ದರಾಮಯ್ಯಗೆ ಇಲ್ಲ. ವಿರೋಧ ಪಕ್ಷದ ನಾಯಕರನ್ನು ಸಿದ್ದರಾಮಯ್ಯ ಆಯ್ಕೆ ಮಾಡುತ್ತಾರೆಯೇ. ನಮ್ಮ ಪಕ್ಷ ಯಾವಾಗ ಮಾಡಬೇಕು ಎಂಬುದನ್ನು ತೀರ್ಮಾನ ಮಾಡುತ್ತದೆ. ಮೊದಲು ಬಿ ಕೆ.ಹರಿಪ್ರಸಾದ್ ನಿತ್ಯ ಸಿದ್ದರಾಮಯ್ಯ ಪಂಚೆ ವಾಚಿನ ಬಗ್ಗೆ ಮಾತನಾಡುತ್ತಾರೆ. ಇದರ ಬಗ್ಗೆ ಪ್ರತಿಕ್ರಿಯೆ ನೀಡಲ್ಲ. ಸಿದ್ದರಾಮಯ್ಯ ಬಿಜೆಪಿ ಬಗ್ಗೆ ಮಾತ್ರ ಪ್ರತಿಕ್ರಿಯಿಸುತ್ತಾರೆ. ಇದರಿಂದಲೇ ಕಾಂಗ್ರೆಸ್​ ಪಕ್ಷ ಎಷ್ಟು ಹಾಳಾಗಿ ಹೋಗಿದೆ ಎಂಬುದು ಗೊತ್ತಾಗುತ್ತದೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬಗ್ಗೆ ಕಾಂಗ್ರೆಸ್ ಟೀಕೆ ಮಾಡುವುದು ಸರಿಯಲ್ಲ. ಜೆಡಿಎಸ್ ಜೊತೆ ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಂಡು ಅಧಿಕಾರ ನಡೆಸಿದಾಗ ಜನತಾದಳ ಒಳ್ಳೆಯದು, ಈಗ ಬಿಜೆಪಿ ಜೊತೆ ಅಧಿಕಾರ ಮಾಡಿದರೆ ಒಳ್ಳೆಯದಲ್ಲ. ಇದು ಕಾಂಗ್ರೆಸ್ ನ ಡಬಲ್​ ಸ್ಟಾಂಡರ್ಡ್. ಕಾಂಗ್ರೆಸ್ ಯೋಗ್ಯತೆಗೆ ಪಾರ್ಲಿಮೆಂಟ್ ನಲ್ಲಿ ಕೇವಲ ಒಂದೇ ಸ್ಥಾನ ಗೆದ್ದಿದ್ದು ಎಂದು ಟೀಕಿಸಿದರು.

ಜೆಡಿಎಸ್ ಜೊತೆ ಮಾತುಕತೆ ನಡೆದಿರುವುದು ನಿಜ : ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದಲ್ಲಿ ಕೇಂದ್ರ ಬಿಜೆಪಿ ನಾಯಕರು ದೇವೇಗೌಡರು ಹಾಗೂ ಕುಮಾರಸ್ವಾಮಿ ಜೊತೆ ಮಾತನಾಡಿರುವುದು ನಿಜ. ಆದರೆ, ಮೈತ್ರಿ ವಿಚಾರ ಇನ್ನೂ ತೀರ್ಮಾನ ಆಗಿಲ್ಲ. ಆಗಲೇ ಮೈತ್ರಿ ವಿಚಾರದಲ್ಲಿ ಕಾಂಗ್ರೆಸ್​ಗೆ ಭಯ ಶುರುವಾಗಿದೆ. ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಾದರೆ ಕಾಂಗ್ರೆಸ್ ಒಂದು ಸ್ಥಾನವನ್ನು ಗೆಲ್ಲುವುದಿಲ್ಲ. ಆ ಭಯದಿಂದ ಕಾಂಗ್ರೆಸ್ ನವರು ಟೀಕೆ ಮಾಡುತ್ತಿದ್ದಾರೆ. ಕೇಂದ್ರ ನಾಯಕರು ಸೀಟು ಹಂಚಿಕೆ ವಿಚಾರದ ಬಗ್ಗೆ ತೀರ್ಮಾನ ಕೈಗೊಳ್ಳುತ್ತಾರೆ. ಮೈತ್ರಿಯಾದರೆ ಒಳ್ಳೆಯದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದೇವೆ ಎಂದು ಅಶೋಕ್​ ತಿಳಿಸಿದರು.

ಕೇಂದ್ರಕ್ಕೆ ನಿಯೋಗ ಹೋಗೋಣ ಎಂದು ಕರೆದಿಲ್ಲ : ಸರ್ವಪಕ್ಷಗಳ ಸಭೆಯಲ್ಲಿ ನೀರನ್ನು ಬಿಡುವುದಿಲ್ಲ ಎಂದು ನೀರನ್ನು ತಮಿಳುನಾಡಿಗೆ ಬಿಟ್ಟಿದ್ದಾರೆ. ಇವರು ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಜೊತೆಗೆ ಕೇಂದ್ರಕ್ಕೆ ನಿಯೋಗ ಹೋಗೋಣ ಎಂದು ನಮ್ಮನ್ನು ಕರೆದಿಲ್ಲ. ಕೊಟ್ಟ ಮಾತಿನಂತೆ ನಡೆದುಕೊಳ್ಳದೇ ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ. ಜೊತೆಗೆ ಟ್ರಿಬಿನಲ್ ನಲ್ಲೂ ವಾದ ಮಾಡಲು ವಿಫಲರಾಗಿದ್ದಾರೆ. ಈ ಮೂಲಕ ರಾಜ್ಯದ ಜನರಿಗೆ ಮೋಸ ಮಾಡಿದ್ದಾರೆ. ತಮಿಳುನಾಡಿನ ಸಿಎಂ ವಿರುದ್ಧ ಒಂದು ಹೇಳಿಕೆಯನ್ನು ನೀಡದೇ, ಅವರನ್ನು ಎದುರು ಹಾಕಿಕೊಳ್ಳಲು ಕಾಂಗ್ರೆಸ್​​ನವರಿಗೆ ಧೈರ್ಯ ಇಲ್ಲ. ಬಿಜೆಪಿಯವರ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಮೇಕೆದಾಟು ಯೋಜನೆಯನ್ನು ತರುತ್ತೇವೆ ಎಂದು ಪಾದಯಾತ್ರೆ ಮಾಡಿ ಪ್ರಚಾರ ಗಿಟ್ಟಿಸಿಕೊಂಡು, ಈಗ ಆ ಬಗ್ಗೆ ಒಂದೇ ಒಂದು ಮಾತನ್ನು ಸಹ ಆಡುತ್ತಿಲ್ಲ ಎಂದು ಟೀಕಿಸಿದರು.

ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ವಿರುದ್ಧದ ನನ್ನ ಹೋರಾಟ ನಿಲ್ಲುವುದಿಲ್ಲ: ಜಿ. ದೇವರಾಜೇಗೌಡ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.