ಮೈಸೂರು: ಲಘು ಹೃದಯಾಘಾತದಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮೈಸೂರು ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್ ಎ ರಾಮದಾಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕಳೆದ ಮೂರು ದಿನಗಳ ಹಿಂದೆ ಲಘು ಹೃದಯಘಾತಕ್ಕೆ ತುತ್ತಾಗಿದ್ದ ಶಾಸಕ ರಾಮದಾಸ್ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರೀಗ ಚೇತರಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ನಿನ್ನೆಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆರೋಗ್ಯ ಸುಧಾರಣೆ ಕಂಡಿದ್ದು, ಯಾವ ತೊಂದರೆಯೂ ಇಲ್ಲ ಎಂದು ಆಸ್ಪತ್ರೆಯ ಮೂಲಗಳು ಖಚಿತ ಪಡಿಸಿವೆ.