ETV Bharat / state

ಶಾಸಕ ರಾಮದಾಸ್​ಗೆ ಕೊರೊನಾ: ಸಚಿವ, ಶಾಸಕರಿಗೆ ನಡುಕ - ಮೈಸೂರು ಸುದ್ದಿ

ಮೈಸೂರಿನ ಕೆ.ಆರ್. ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್​​ಗೆ ಕೊರೊನಾ ಸೋಂಕು ದೃಢಪಟ್ಟಿದೆ.

MLa S.A Ramdas
ಶಾಸಕ ರಾಮದಾಸ್
author img

By

Published : Apr 14, 2021, 7:48 PM IST

ಮೈಸೂರು: ಕೆ.ಆರ್. ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್​​ಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇವರೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಚಿವರು, ಶಾಸಕರು ಹಾಗೂ ಮುಖಂಡರಿಗೂ ಆತಂಕ ಎದುರಾಗಿದೆ.

ಕೆಲ ದಿನಗಳ ಹಿಂದೆ ಶಾಸಕ ರಾಮದಾಸ್​​ಗೆ ಕೊರೊನಾ ಲಕ್ಷಣಗಳು ಕಂಡು ಬಂದಿತ್ತು. ಬಳಿಕ ಅವರು ಸ್ಯಾಂಪಲ್ ನೀಡಿದ್ದರು. ಇಂದು ಬಂದ ವರದಿಯಲ್ಲಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಆದರೆ, ಇಂದು ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡಿದ್ದರು.

ಈ ಕಾರ್ಯಕ್ರಮದಲ್ಲಿ ಸಚಿವ ಎಸ್‌.ಟಿ.ಸೋಮಶೇಖರ್, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಲ್.ನಾಗೇಂದ್ರ, ಹರ್ಷವರ್ಧನ್, ಮುಡಾ ಅಧ್ಯಕ್ಷ ರಾಜೀವ್,‌ ಮೇಯರ್ ರುಕ್ಮಿಣಿ ಮಾದೇಗೌಡ, ಡಿಸಿ ರೋಹಿಣಿ ಸಿಂಧೂರಿ ಸೇರಿದಂತೆ ಇತರರು ವೇದಿಕೆಯಲ್ಲಿದ್ದರು. ರಾಮದಾಸ್​​ಗೆ ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ಇವರೆಲ್ಲರಿಗೂ ಆತಂಕ ಶುರುವಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.