ETV Bharat / state

ಪ್ರತಾಪ ಸಿಂಹಗೆ ಆಸೆ ಇದ್ದರೆ ಇನ್ನೊಂದು ಮದುವೆಯಾಗಲಿ : ತನ್ವೀರ್ ಸೇಠ್ ವಾಗ್ದಾಳಿ - ಸಂಸದ ಪ್ರತಾಪಸಿಂಹ

ಗೃಹ ಲಕ್ಷ್ಮೀ ಯೋಜನೆ ಜಾರಿಯಿಂದ ಮುಸ್ಲಿಂ ಕುಟುಂಬಗಳಲ್ಲಿ ಒಡಕು ಉಂಟಾಗುತ್ತದೆ ಎಂಬ ಸಂಸದ ಪ್ರತಾಪ್​ ಸಿಂಹ ಹೇಳಿಕೆಗೆ ಶಾಸಕ ತನ್ವೀರ್​ ಸೇಠ್​ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

mla-thanvir-seth-slams-mp-prathap-simha
ಪ್ರತಾಪ ಸಿಂಹಗೆ ಆಸೆ ಇದ್ದರೆ ಇನ್ನೊಂದು ಮದುವೆಯಾಗಲಿ : ತನ್ವೀರ್ ಸೇಠ್ ವಾಗ್ದಾಳಿ
author img

By

Published : Jun 17, 2023, 10:53 PM IST

Updated : Jun 17, 2023, 10:59 PM IST

ಪ್ರತಾಪ ಸಿಂಹಗೆ ಆಸೆ ಇದ್ದರೆ ಇನ್ನೊಂದು ಮದುವೆಯಾಗಲಿ : ತನ್ವೀರ್ ಸೇಠ್ ವಾಗ್ದಾಳಿ

ಮೈಸೂರು : ಸಂಸದ ಪ್ರತಾಪಸಿಂಹಗೆ ಆಸೆ ಇದ್ದರೆ ಇನ್ನೊಂದು ಮದುವೆಯಾಗಲಿ. ಬಳಿಕ ಅದರ ಅನುಭವವನ್ನು ನಮಗೆ ಬಂದು ಹೇಳಲಿ ಎಂದು ಶಾಸಕ ತನ್ವೀರ್ ಸೇಠ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹ ಲಕ್ಷ್ಮಿ ಯೋಜನೆ ಜಾರಿಯಿಂದ ಮುಸ್ಲಿಂ ಕುಟುಂಬಗಳಲ್ಲಿ ಒಡಕು ಉಂಟಾಗುತ್ತದೆ. ಮುಸ್ಲಿಮರಿಗೆ ಎರಡು ಮೂರು ಹೆಂಡತಿಯರಿರುತ್ತಾರೆ. ಆಗ ಯಾರನ್ನು ಮನೆಯ ಯಜಮಾನಿ ಎಂದು ಗುರುತಿಸುತ್ತಿರಾ ಎಂದಿದ್ದ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಪ್ರತಾಪ್​ ಸಿಂಹಗೆ ಅಷ್ಟೊಂದು ಆಸೆ ಇದ್ದರೆ ಇನ್ನೊಂದು ಮದುವೆಯಾಗಿ ಅನುಭವವನ್ನು ನಮಗೆ ಹೇಳಲಿ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.

ಹೊಂದಾಣಿಕೆ ರಾಜಕಾರಣದ ಬಗ್ಗೆ ಮಾತನಾಡಿ, ಹೊಂದಾಣಿಕೆ ರಾಜಕೀಯ ನನಗೆ ಗೊತ್ತಿಲ್ಲ. ಆ ರೀತಿ ಮಾಡಿರುವವರಿಗೆ ಆ ವಿಚಾರ ಗೊತ್ತು. ಹೊಂದಾಣಿಕೆ ಮಾಡಿಕೊಂಡು ಒಬ್ಬರನ್ನು ತುಳಿಯಲು ಮತ್ತೊಬ್ಬರನ್ನು ಬಳಸಿಕೊಳ್ಳೋದು ಸರಿಯಲ್ಲ. ಅದರ ಅನುಭವ ಇರುವವರು ಈ ವಿಚಾರ ಪ್ರಸ್ತಾಪ ಮಾಡಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ ವಿಚಾರವಾಗಿ ಮಾತನಾಡಿ, ವಿದ್ಯುತ್​ ದರ ಹೆಚ್ಚಳಕ್ಕೆ ಹಿಂದಿನ ಬಿಜೆಪಿ ಸರ್ಕಾರ ನೇರ ಕಾರಣ. ವಿದ್ಯುತ್ ದರ ಹೆಚ್ಚಳಕ್ಕೆ ಕೆಇಆರ್‌ಸಿ ಮಾಡಿದ್ದ ಶಿಫಾರಸ್ಸಿಗೆ ಈ ಹಿಂದಿನ ಬಿಜೆಪಿ ಸರಕಾರ ಒಪ್ಪಿಗೆ ಸೂಚಿಸಿದೆ. ಬಿಜೆಪಿಯವರಿಗೆ ಚುನಾವಣೆಯಲ್ಲಿ ಸೋಲುವುದು ಖಚಿತವಾಗಿದ್ದರಿಂದ ವಿದ್ಯುತ್ ದರ ಹೆಚ್ಚಳ ಪ್ರಸ್ತಾಪಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಈ ವಿಚಾರ ಮೇ 12ರಂದು ಪ್ರಕಟವಾಗಿದೆ ಎಂದು ತಿಳಿಸಿದರು. ಮೇ 13ರಂದು ಚುನಾವಣಾ ಫಲಿತಾಂಶ ಹೊರ ಬಿದ್ದಾಗ ಶಾಕ್ ಕೊಡುವ ಕೆಲಸ ಮಾಡಿದ್ದಾರೆ. ಹೀಗಾಗಿ ನಾನು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ ಎಂದರು.

5 ಗ್ಯಾರಂಟಿ ಯೋಜನೆ ಜಾರಿಯ ಜೊತೆಗೆ ವಿದ್ಯುತ್ ದರ ಏರಿಸಿದರೆ ಜನರಿಗೆ ತೊಂದರೆ ಆಗಲಿದೆ. ಕಾಂಗ್ರೆಸ್ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಲಿದೆ ಎಂದು ತಿಳಿಸಿದ್ದೇನೆ. ವಿದ್ಯುತ್ ದರ ಹೆಚ್ಚಳದಲ್ಲಿ ಲೋಪವಾಗಿದೆ ಎಂದು ತಿಳಿಸಿದ್ದೇನೆ. ವಿದ್ಯುತ್ ದರ ಹೆಚ್ಚಳವನ್ನು ಪುನರ್​ಪರಿಶೀಲನೆ ಮಾಡುವಂತೆ ಮನವಿ ಮಾಡಿದ್ದೇನೆ ಎಂದರು.

ಪಠ್ಯಪುಸ್ತಕ ಪರಿಷ್ಕರಣೆಗೆ ಬಿಜೆಪಿ ವಿರೋಧ ವಿಚಾರವಾಗಿ ಪ್ರತಿಕ್ರಿಯಿಸಿ, ಮಕ್ಕಳ ವಯೋಮಾನಕ್ಕೆ ತಕ್ಕಂತೆ ಸ್ವೀಕರಿಸಲು ಸಾಧ್ಯವಿರುವ ಶಿಕ್ಷಣ ಕೊಡಬೇಕು. ನಾವು ಕೊಡುವ ಶಿಕ್ಷಣದಿಂದ ಮಕ್ಕಳ ಜೀವನಶೈಲಿ ಬದಲಾಗಬೇಕು. ಬಿಜೆಪಿ ಸರಕಾರ ಬಂದಾಗ ಪಠ್ಯದಲ್ಲಿ ಬೇರೆ ವಿಷಯ -ವಿಷ ಎರಡನ್ನೂ ಕೊಟ್ಟಿದ್ದರು. 2016ರಲ್ಲಿ ನಾನು ಸಚಿವನಾಗಿದ್ದಾಗ ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಸಮಿತಿ ಮಾಡಿದ್ದ ಶಿಫಾರಸ್ಸಿನ ಅನ್ವಯ 1ರಿಂದ 10ನೇ ತರಗತಿಯವರೆಗೂ ಪಠ್ಯಕ್ರಮವನ್ನು ಪರಿಷ್ಕರಣೆ ಮಾಡಿದೆವು. ಈಗಲೂ ಬರಗೂರು ರಾಮಚಂದ್ರಪ್ಪ ಸಮಿತಿ ಶಿಫಾರಸ್ಸು ಮಾಡಿದ್ದ ಪಠ್ಯಕ್ರಮವನ್ನೇ ಅಳವಡಿಸಲಾಗಿದೆ ಎಂದು ತಿಳಿಸಿದರು.

ಗಲಭೆಯಲ್ಲಿ ಮೃತಪಟ್ಟಿದ್ದ ನಾಲ್ವರು ಅಲ್ಪಸಂಖ್ಯಾತ ಕುಟುಂಬಗಳಿಗೆ ಪರಿಹಾರ ಘೋಷಣೆ ವಿಚಾರವಾಗಿ ಮಾತನಾಡಿ, ಈ ವಿಚಾರದಲ್ಲಿ ಬಿಜೆಪಿ ಸರಕಾರ ತಾರತಮ್ಯ ಮಾಡಿತ್ತು. ಬಿಜೆಪಿ ಸರ್ಕಾರ ಮಾಡಿದ್ದ ತಪ್ಪನ್ನು ಕಾಂಗ್ರೆಸ್ ಸರಕಾರ ಸರಿ ಮಾಡಿದೆ. ಬಿಜೆಪಿ ಅವಧಿಯಲ್ಲಿ ಆಗಿದ್ದ ಅನ್ಯಾಯವನ್ನು ಕಾಂಗ್ರೆಸ್ ಸರಕಾರ ಸರಿಪಡಿಸಿದೆ ಎಂದು ಹೇಳಿದರು.

ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆದಿರುವ ವಿಚಾರವಾಗಿ ಮಾತನಾಡಿ, ಇದಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಚಿವ ಸಂಪುಟದಲ್ಲಿ ನಾನಿಲ್ಲ, ಹೀಗಾಗಿ ಸಂಪುಟ ಸಭೆಯಲ್ಲಿ ಏನು ಚರ್ಚೆಯಾಗಿದೆ ಎಂದು ಗೊತ್ತಿಲ್ಲ. ಮುಂದೆ ಈ ವಿಚಾರ ಸದನದಲ್ಲಿ ಚರ್ಚೆಗೆ ಬಂದಾಗ ಉತ್ತರಿಸುತ್ತೇನೆ ಎಂದು ಹೇಳಿದರು.ಸಚಿವ ಸ್ಥಾನ ಸಿಗದಿದ್ದಕ್ಕೆ ನನಗೆ ನಿರಾಸೆಯಾಗಿಲ್ಲ. ನಮ್ಮ ಪಕ್ಷ ಅಧಿಕಾರಕ್ಕೆ ಬಂದಿರುವ ಖುಷಿಯಿದೆ. ಮನುಷ್ಯನ ಆಸೆಗೆ ಕೊನೆಯಿಲ್ಲ, 34 ಕ್ಕೆ 34 ಸಚಿವ ಸ್ಥಾನಗಳು ಭರ್ತಿಯಾಗಿವೆ. ಅಧಿಕಾರ ಹಂಚಿಕೆ ಸಂಬಂಧ ನಡೆದಿರುವ ಗೌಪ್ಯ ಸಭೆಯ ಬಗ್ಗೆಯೂ ನನಗೆ ಗೊತ್ತಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ : Brand Bengaluru: ಬ್ರ್ಯಾಂಡ್ ಬೆಂಗಳೂರು ಅಭಿವೃದ್ಧಿಗೆ ಪ್ರಮುಖರ ಸಮಿತಿ ರಚಿಸಿ, ಆರು ತಿಂಗಳಲ್ಲಿ ಮಾಸ್ಟರ್ ಪ್ಲಾನ್ ಸಿದ್ಧ: ಡಿಸಿಎಂ ಡಿಕೆಶಿ

Last Updated : Jun 17, 2023, 10:59 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.