ETV Bharat / state

ಬೆಂಬಲಿಗ ಶಾಸಕರಿಗೆ ಸಿದ್ದರಾಮಯ್ಯರೇ ಮುಂದಿನ ಸಿಎಂ.. ಯತೀಂದ್ರ ಸಿದ್ದರಾಮಯ್ಯ ಏನಂತಾರೆ?

ರಾಜ್ಯ ಕಾಂಗ್ರೆಸ್​​ನಲ್ಲೀಗ ಮುಂದಿನ ಸಿಎಂ ರೇಸ್​​ನ ಕುರಿತು ಚರ್ಚೆ ಆರಂಭವಾಗಿದೆ. ಈ ಕುರಿತು ಸಿದ್ದರಾಮಯ್ಯ ಅವರ ಪುತ್ರ, ವರುಣ ಕ್ಷೇತ್ರದ ಶಾಸಕ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಇದು ಅವರವರ ವೈಯಕ್ತಿಕ ಹೇಳಿಕೆಯಾಗಿದೆ. ಕಾಂಗ್ರೆಸ್ ವೇದಿಕೆಯಲ್ಲಿ ಯಾರು ಈ ಅಭಿಪ್ರಾಯ ವ್ಯಕ್ತಪಡಿಸಿಲ್ಲ ಎಂದಿದ್ದಾರೆ.

MLA Yethindra Siddaramaiah
ಯತೀಂದ್ರ ಸಿದ್ದರಾಮಯ್ಯ
author img

By

Published : Jun 23, 2021, 7:18 PM IST

ಮೈಸೂರು: ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಆಗಬೇಕೆಂದು ಅವರ ಬೆಂಬಲಿಗೆ ಶಾಸಕರು ಹೇಳಿಕೆ ನೀಡುತ್ತಿದ್ದಾರೆ. ಅದು ಅವರವರ ವೈಯಕ್ತಿಕ ಅಭಿಪ್ರಾಯ, ಇಂತಹ ಹೇಳಿಕೆಗಳು ಪಕ್ಷದ ಮೇಲೆ ಪ್ರಭಾವ ಬೀರಲ್ಲ ಎಂದು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್​​ ಮುಂದಿನ ಸಿಎಂ ರೇಸ್​​ ಕುರಿತು ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯೆ

ತಿ.ನರಸೀಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮುಂದಿನ ಸಿಎಂ ವಿಚಾರವಾಗಿ ಪ್ರತಿಕ್ರಿಯಿಸಿದರು. ಈಗಾಗಲೇ ಸಿದ್ದರಾಮಯ್ಯನವರು ಸ್ಪಷ್ಟನೆ ನೀಡಿದ್ದಾರೆ. ಕೆಲವರು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ವೇದಿಕೆ ಮತ್ತು ಸಭೆಗಳಲ್ಲಿ ಈ ವಿಚಾರ ತಿಳಿಸಿಲ್ಲ ಎಂದರು.

ಕಾಂಗ್ರೆಸ್ ಪಕ್ಷ ಸಾಮೂಹಿಕ ನಾಯಕತ್ವದ ಮೇಲೆ ಚುನಾವಣೆ ಎದುರಿಸುತ್ತದೆ. ಈ ವಿಚಾರಗಳಿಂದ ಪಕ್ಷಕ್ಕೆ ಯಾವುದೇ ರೀತಿಯ ತೊಂದರೆಯಾಗಲ್ಲ ಎಂದಿದ್ದಾರೆ.

ಓದಿ: ಪ್ರಪಂಚದಲ್ಲೇ ಭಾರತ, ದೇಶದಲ್ಲಿ ಕರ್ನಾಟಕ Vaccine ಹಾಕುವಲ್ಲಿ ಮೊದಲ ಸ್ಥಾನದಲ್ಲಿವೆ: ಸಚಿವ ಈಶ್ವರಪ್ಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.