ಮೈಸೂರು: ನಾನು ಸಚಿವ ಸ್ಥಾನದ ರೇಸ್ನಲ್ಲಿ ಇಲ್ಲ. ಮೈಸೂರು ಭಾಗಕ್ಕೆ ಈ ಬಾರಿ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಯಾರಿಗಾದರೂ ಸಚಿವ ಸ್ಥಾನ ನೀಡಿ ಎಂದು ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಒತ್ತಾಯಿಸಿದ್ದಾರೆ.
ಜಿಲ್ಲಾ ಪಂಚಾಯತ್ನಲ್ಲಿ ಸಚಿವರ ಸಭೆಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಈ ಬಾರಿ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಮೈಸೂರು ಭಾಗಕ್ಕೆ ಒಂದು ಸಚಿವ ಸ್ಥಾನ ನೀಡಿ. ಹಿರಿಯರಾದ ಎಸ್ ಎ ರಾಮದಾಸ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯಿಸುತ್ತೇನೆ ಎಂದರು.
ಸುಧಾರಣೆಗಾಗಿ ಬದಲಾವಣೆಯಾಗಬೇಕು, ಕೆಲವು ಶಾಸಕರು ಸಚಿವ ಸ್ಥಾನಕ್ಕಾಗಿ ಲಾಭಿ ನಡೆಸುತ್ತಿದ್ದಾರೆ. ಇದರ ಜೊತೆ ಮೈಸೂರು ಭಾಗದಿಂದ ಸಚಿವ ಸ್ಥಾನಕ್ಕಾಗಿ ಚಾಮರಾಜನಗರದ ಸಂಸದರಾದ ವಿ.ಶ್ರೀನಿವಾಸ್ ಪ್ರಸಾದ್ ಅವರ ಅಳಿಯ ನಂಜನಗೂಡು ಕ್ಷೇತ್ರದ ಬಿಜೆಪಿ ಶಾಸಕ ಹರ್ಷವರ್ಧನ್ ಮಂತ್ರಿ ಸ್ಥಾನ ಪಡೆಯಲು ಪ್ರಯತ್ನಿಸುತ್ತಿದ್ದು, ವಿಶ್ವನಾಥ್ ಅವರ ಹೇಳಿಕೆ ಈಗ ಮಹತ್ವ ಪಡೆದಿದೆ.
ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ