ಮೈಸೂರು: ನಾಡಹಬ್ಬ ದಸರಾ ಸಂದರ್ಭದಲ್ಲಿ ನಗರಕ್ಕೆ ಹೆಚ್ಚಿನ ಪ್ರವಾಸಿಗರು ಆಗಮಿಸುತ್ತಿರುವುದರಿಂದ, ಇನ್ನು ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಪರೀಕ್ಷೆಗಳನ್ನು ನಡೆಸುವ ಸಲುವಾಗಿ ಪಾಲಿಕೆ ವತಿಯಿಂದ ಮೊಬೈಲ್ ತಂಡಗಳನ್ನು ರಚಿಸಿದೆ.
ನಗರದ ವಿವಿಧ ಫ್ಯಾಕ್ಟರಿ, ವಾಣಿಜ್ಯ, ಕೈಗಾರಿಕಾ ಉದ್ಯಮಗಳು, ಶಾಲಾ-ಕಾಲೇಜು ಶಿಕ್ಷಣ ಸಂಸ್ಥೆಗಳು, ಸರ್ಕಾರಿ, ಸರ್ಕಾರೇತರ ಸಂಸ್ಥೆಗಳು ತಮ್ಮ ಸಿಬ್ಬಂದಿಗಳಿಗೆ ಕೋವಿಡ್ ಪರೀಕ್ಷೆಗೆ ಒಳಪಡಿಸಲು ಇಚ್ಛಿಸಿದ್ದಲ್ಲಿ ಕೂಡಲೇ ನಗರ ಪಾಲಿಕೆಯ ಕಂಟ್ರೋಲ್ ರೂಮ್ 0821-2440890, ಮೊ.ಸಂ. 9449841196 ಗೆ ಕರೆ ಮಾಡಿ ಹೆಸರು ನೋಂದಾಯಿಸಿಕೊಂಡಲ್ಲಿ ನಮ್ಮ ಮೊಬೈಲ್ ತಂಡ ನಿಮ್ಮ ಸ್ಥಳಕ್ಕೆ ಭೇಟಿ ನೀಡಿ ಉಚಿತವಾಗಿ ಕೋವಿಡ್ ಪರೀಕ್ಷೆ ಮಾಡಲಾಗುವುದು ಎಂದು ನಗರ ಪಾಲಿಕೆ ಪ್ರಕಟಣೆಯಲ್ಲಿ ತಿಳಿಸಿದೆ.