ETV Bharat / state

ಪಿಎಂ ವಿಡಿಯೋ ಸಂವಾದ: ಹಳ್ಳಿಗಳಿಗೆ ಸೋಂಕು ಹರಡದಂತೆ ತಡೆಯಲು ಮೋದಿ ಸಲಹೆ

ಕೋವಿಡ್ ಸಾಂಕ್ರಾಮಿಕದ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ರಾಜ್ಯದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೇರಿದಂತೆ 10 ರಾಜ್ಯಗಳ ಒಟ್ಟು 46 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಕೊರೊನಾ ನಿಯಂತ್ರಣದ ಕುರಿತು ಮಾಹಿತಿ ಮತ್ತು ಸಲಹೆಗಳ ಕುರಿತು ಚರ್ಚಿಸಿದರು.

ನರೇಂದ್ರ ಮೋದಿ
ನರೇಂದ್ರ ಮೋದಿ
author img

By

Published : May 18, 2021, 10:06 PM IST

ಕಾರವಾರ/ ಮೈಸೂರು/ಶಿವಮೊಗ್ಗ/ಬಳ್ಳಾರಿ: ರಾಜ್ಯದ 17 ಜಿಲ್ಲಾಧಿಕಾರಿಗಳ ಜೊತೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ವಿಡಿಯೋ ಸಂವಾದ ನಡೆಸಿ ಕೋವಿಡ್​ ಸಾಂಕ್ರಾಮಿಕವನ್ನು ತಡೆಗಟ್ಟುವ ಕುರಿತು ಮಾಹಿತಿ, ಸಲಹೆ ಮತ್ತು ಸೂಚನೆಗಳನ್ನು ನೀಡಿದರು.

ಕಾರವಾರ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರ ಜೊತೆ ಪ್ರಧಾನಿ ವಿಡಿಯೋ ಸಂವಾದ ನಡೆಸಿದರು. ಸಿಇಒ ಪ್ರಿಯಾಂಗ ಎಂ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಭಾಗವಹಿಸಿ ಪ್ರಧಾನಿ ಅವರ ಸಲಹೆ ಸೂಚನೆ ಆಲಿಸಿದರು.

ಸಭೆ ಬಳಿಕ ಮಾಧ್ಯಮದವರೊಂದಿಗೆ ಜೊತೆ ಮಾತನಾಡಿದ ಸಿಇಒ ಎಂ. ಪ್ರಿಯಾಂಗಾ, ಕೊರೊನಾ ತಡೆಗೆ ಕೈಗೊಂಡ ಕ್ರಮಗಳು, ಸ್ಥಿತಿಗತಿ ಬಗ್ಗೆ ಪ್ರಧಾನಿ ಮಾಹಿತಿ ಪಡೆದರು. ಹಳ್ಳಿಗಳಲ್ಲಿ ಕೋವಿಡ್​​ ತಡೆಗೆ ಮೊದಲ ಆದ್ಯತೆ ನೀಡುವಂತೆ ಸೂಚಿಸಿದ್ದಾರೆ. ಕೊರೊನಾ ಪರೀಕ್ಷೆ ಹಾಗೂ ಮೈಕ್ರೋ ಕಂಟೇನ್ಮೆಂಟ್​ ಝೋನ್ ಹೆಚ್ಚು ಮಾಡುವಂತೆ ಸೂಚಿಸಿದ್ದಾರೆ. ಆಕ್ಸಿಜನ್ ಅವಶ್ಯವಿದ್ದವರಿಗೆ ಸೂಕ್ತ ರಿತಿಯಲ್ಲಿ ಪೂರೈಸುವಂತೆ ಸೂಚಿಸಿದ್ದಾರೆ ಎಂದು ತಿಳಿಸಿದರು.

ಮೈಸೂರು: ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು, ಕೋವಿಡ್-19 ಪ್ರಕರಣ ದಾಖಲಾಗುತ್ತಿರುವ ಜಿಲ್ಲೆಗಳೊಂದಿಗೆ ಚರ್ಚಿಸಿದರು. ನಮ್ಮ ಜಿಲ್ಲೆಯ ಗ್ರಾಮಾಂತರ ಭಾಗದಲ್ಲಿ ಶೇ.50ರಷ್ಟು ಕೋವಿಡ್ ಪ್ರಕರಣಗಳು ದಾಖಲಾಗುತ್ತಿವೆ. ಚಿಕಿತ್ಸೆಗೆ ನೆರವಾಗಲು 150 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 'ಕೋವಿಡ್ ಮಿತ್ರ'ಗಳನ್ನಾಗಿ ಪರಿವರ್ತಿಸಲಾಗಿದೆ. ಈ ಪರಿಕಲ್ಪನೆಯನ್ನು ಕೇಂದ್ರಕ್ಕೆ ಕಳುಹಿಸಿಕೊಡಲಾಗುವುದು ಎಂದು ಡಿಸಿ ರೋಹಿಣಿ ಸಿಂಧೂರಿ ತಿಳಿಸಿದರು.

ಕೋವಿಡ್ ಮಿತ್ರ ಜನರಿಗೆ ಉಪಯೋಗಕ್ಕೆ ಬರಲಿದೆ. ಆಶಾ ಕಾರ್ಯಕರ್ತೆಯರು, ಗ್ರಾಮೀಣ ಭಾಗದ ಟಾಸ್ಕ್‌ ಫೋರ್ಸ್ ಮೂಲಕ ಮನೆ ಮನೆಗೆ ತಲುಪುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗುವ ಭರವಸೆ ಇದೆ ಎಂದರು.

ಗ್ರಾಮೀಣ ಭಾಗದಲ್ಲಿ ಕೋವಿಡ್ ನಿಯಂತ್ರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ಪರ್ಧೆ ಏರ್ಪಡಿಸಲು ಚಿಂತಿಸಲಾಗಿದೆ. ಕೋವಿಡ್ ಮುಕ್ತ ಗ್ರಾಮವನ್ನಾಗಿ ಮಾಡಿದ ಗ್ರಾಮ ಪಂಚಾಯಿತಿಗೆ ಅಭಿನಂದನೆ ಸಲ್ಲಿಸುವುದರ ಜೊತೆಗೆ ಪ್ರೋತ್ಸಾಹ ಧನ ನೀಡುವ ಆಲೋಚನೆ ಇದೆ ಎ‌ಂದು ಮಾಹಿತಿ ನೀಡಿದರು.

ಶಿವಮೊಗ್ಗ: ಪ್ರಧಾನಿಗಳು ನಡೆಸಿದ ವಿಡಿಯೋ ಸಂವಾದಲ್ಲಿ ಜಿಲ್ಲಾಧಿಕಾರಿ‌‌ ಕೆ.ಬಿ.ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಭಾಗಿಯಾಗಿದ್ದರು. ಕೋವಿಡ್ ಕುರಿತು ಸರಿಯಾದ ಪರೀಕ್ಷೆ ನಡೆಸಬೇಕಿದೆ. ಗ್ರಾಮೀಣ ಭಾಗಕ್ಕೆ ಹೆಚ್ಚಿನ ಗಮನ ಹರಿಸುವಂತೆ ಸೂಚಿಸಿದ್ದಾರೆ. ಆಮ್ಲಜನಕ ಹಾಗೂ ಔಷಧ ಆಯಾ ರಾಜ್ಯದ ಪಾಲು ಬಂದ ಹಾಗೆ ಕರ್ನಾಟಕಕ್ಕೂ ಬರುತ್ತದೆ ಒಂದು ಎಂದು ಸಚಿವ ಈಶ್ವರಪ್ಪ ತಿಳಿಸಿದರು.

ಬಳ್ಳಾರಿ: ಆಯುಷ್ 64 ಆರ್ಯುವೇದ ಔಷಧಿ ವಿತರಣೆಗೆ ಸೂಕ್ತ ಕ್ರಮಕೈಗೊಳ್ಳಿ. ಅದರಿಂದ ಕೊರೊನಾ ನಿಯಂತ್ರಣವನ್ನ ಆರಂಭಿಕ ಹಂತದಲ್ಲೇ ತಡೆಯಬಹುದು ಎಂದು ವಿಡಿಯೋ ಸಂವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ.

ಈ ಕೊರೊನಾ ತಡೆಗಟ್ಟುವಲ್ಲಿ ಯಶಕಂಡ ರಾಜ್ಯದ ಉದಾಹರಣೆಯನ್ನೂ ಕೂಡ ತೆಗೆದುಕೊಂಡು ಅದನ್ನೇ ಮಾದರಿಯನ್ನಾಗಿಸಿಕೊಂಡೇ ಮುಂದುವರಿಯಬೇಕು ಎಂದಿದ್ದಾರೆ. ಇದಲ್ಲದೇ, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಸದಸ್ಯರು, ಮಾಜಿ ಸದಸ್ಯರು ಹಾಗೂ ಮಾಜಿ ಶಾಸಕರನ್ನೂ ಒಳಗೊಂಡಂತೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಈ ಎರಡನೇ ಅಲೆಯ‌ನ್ನ ನಿಯಂತ್ರಿಸೋದಕ್ಕೆ ಶ್ರಮಿಸಿ ಎಂದು ಪಿಎಂ ಸಲಹೆ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.