ಮೈಸೂರು: ವರ್ಷಾರಂಭದಲ್ಲಿಯೇ ಚಾಮುಂಡೇಶ್ವರಿ ದರ್ಶನ ಪಡೆಯಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಇದರಿಂದ ಪ್ರವಾಸೋದ್ಯಮ ವಲಯ ಗರಿಗೆದರುವ ನಿರೀಕ್ಷೆ ಮೂಡಿದೆ.
ಡಿ.31 ಮತ್ತು ಜ.1ರಂದು ಚಾಮುಂಡಿ ಬೆಟ್ಟಕ್ಕೆ ನಿರ್ಬಂಧ ವಿಧಿಸಿದ್ದರಿಂದ ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಚಾಮುಂಡೇಶ್ವರಿ ದರ್ಶನ ಪಡೆಯಲು ಸಾಧ್ಯವಾಗಿರಲಿಲ್ಲ. ಆದರೆ ಜ. 2 ರಿಂದ ಭಕ್ತಾದಿಗಳ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿರುವುದರಿಂದ ಚಾಮುಂಡಿ ಬೆಟ್ಟದ ಪೂಜಾ ಸಾಮಗ್ರಿ ಅಂಗಡಿಗಳ ಮಾಲೀಕರ ಮುಖದಲ್ಲಿ ಮಂದಹಾಸ ಮೂಡಿದೆ.
ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಬರುವ ಭಕ್ತಾದಿಗಳ ಸಂಖ್ಯೆ ದಿನೇ ದಿನೇ ಏರುತ್ತಿರುವುದರಿಂದ ದೇವಾಲಯದ ಆದಾಯ ಹೆಚ್ಚಳವಾಗುವ ನಿರೀಕ್ಷೆಯನ್ನು ಆಡಳಿತ ಮಂಡಳಿ ಇಟ್ಟುಕೊಂಡಿದೆ.