ಮೈಸೂರು : ಜಿಲ್ಲೆಯಲ್ಲಿ ಇಂದು ಒಂದೇ ದಿನ 220 ನೂತನ ಕೊರೊನಾ ಪ್ರಕರಣ ಪತ್ತೆಯಾಗಿವೆ. ಸೋಂಕಿತರ ಸಂಖ್ಯೆ 3000 ಗಡಿ ದಾಟಿದಂತಾಗಿದೆ.
ಕಳೆದ 20 ದಿನಗಳಿಂದ ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ಪ್ರಕರಣ ನಿತ್ಯ 200ರ ಗಡಿ ಸಮೀಪಿಸುತ್ತಿದೆ. ಇಂದು 220 ಹೊಸ ಸೋಂಕಿತ ಪ್ರಕರಣ ದಾಖಲಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3385ಕ್ಕೆ ಏರಿದೆ. ಈ ಪೈಕಿ 1011 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ 2249 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 115 ಮಂದಿ ಗುಣಮುಖರಾಗಿದ್ದಾರೆ. ಇಂದು 8 ಜನ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 123 ಮಂದಿ ಸಾವನ್ನಪ್ಪಿದಂತಾಗಿದೆ.