ETV Bharat / state

ಸಿದ್ದರಾಮಯ್ಯ ಬಿಜೆಪಿ ಜೊತೆ ಕೈಜೋಡಿಸಿರುವ ಗುಮಾನಿ ಇದೆ: ಪ್ರತಾಪ್​ ಸಿಂಹ ವ್ಯಂಗ್ಯ

ಕಾಂಗ್ರೆಸ್ ಹಾಳಾದರೂ ಸರಿ ಡಿ.ಕೆ ಶಿವಕುಮಾರ್​ಗೆ ಯಾವುದೇ ಸ್ಥಾನ ಸಿಗಬಾರದು. ಇದು ಸಿದ್ದರಾಮಯ್ಯ ಉದ್ದೇಶ ಅದೇ ಕಾರಣಕ್ಕೆ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲನ್ನು ಸಿದ್ದರಾಮಯ್ಯ ಬಯಸುತ್ತಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಲೇವಡಿ ಮಾಡಿದ್ದಾರೆ.

MP pratap simha
ಸಂಸದ ಪ್ರತಾಪ್​ ಸಿಂಹ
author img

By

Published : Nov 10, 2020, 4:30 PM IST

ಮೈಸೂರು: ಆರ್​ಆರ್​ ನಗರ ಹಾಗೂ ಸಿರಾ ಉಪಚುನಾವಣೆಯಲ್ಲಿ ಸಿದ್ದರಾಮಯ್ಯ ಬಿಜೆಪಿ ಜೊತೆ ಕೈ ಜೋಡಿಸಿರುವ ಬಗ್ಗೆ ಗುಮಾನಿ ಇದೆ ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಳಾದರೂ ಸರಿ ಡಿ.ಕೆ ಶಿವಕುಮಾರ್​ಗೆ ಯಾವುದೇ ಸ್ಥಾನ ಸಿಗಬಾರದು. ಇದು ಸಿದ್ದರಾಮಯ್ಯ ಉದ್ದೇಶ ಅದೇ ಕಾರಣಕ್ಕೆ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲನ್ನು ಸಿದ್ದರಾಮಯ್ಯ ಬಯಸುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಸಂಸದ ಪ್ರತಾಪ್​ ಸಿಂಹ

ಕೆಪಿಸಿಸಿ ಅಧ್ಯಕ್ಷರೇ ಸಿಎಂ ಆಗುವುದು ಕಾಂಗ್ರೆಸ್ ಪರಂಪರೆ ಇದು ಸಿದ್ದರಾಮಯ್ಯಗೆ ಗೊತ್ತಿದೆ. ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಇದನ್ನು ತಪ್ಪಿಸಲು ಡಿ.ಕೆ ಶಿವಕುಮಾರ್‌ರನ್ನು ಚುನಾವಣೆಯಲ್ಲಿ ಸೋಲಿಸಬೇಕು. ಆದರೆ ಪರಮೇಶ್ವರ್​ ಅವರನ್ನು ಸೋಲಿಸಿದಂತೆ ಡಿಕೆಶಿ ಸೋಲಿಸಲು ಸಾಧ್ಯವಿಲ್ಲ. ಇದು ಸಿದ್ದರಾಮಯ್ಯ ಅವರಿಗೆ ಗೊತ್ತಿದೆ. ಹೀಗಾಗಿ ಪಕ್ಷದ ಹಿನ್ನೆಡೆಗೆ ಅವರೇ ಕಾರಣರಾಗುತ್ತಿದ್ದಾರೆ ಎಂದು ವ್ಯಾಖ್ಯಾನಿಸಿದರು.

ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿದೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರತಾಪಸಿಂಹ, ನಮ್ಮ ಪಕ್ಷದ ಬಗ್ಗೆ ನಮಗಿಂತ ಹೆಚ್ಚಾಗಿ ಸಿದ್ದರಾಮಯ್ಯಗೆ ಗೊತ್ತಾಗುತ್ತಿದೆ. ಸಿದ್ದರಾಮಯ್ಯ ಅವರಿಗೆ ಯಾವ ಮೂಲದಿಂದ ಇದು ಗೊತ್ತಾಗಿದೆ ಗೊತ್ತಿಲ್ಲ. ಬಹುಶಃ ಅವರು ನಮ್ಮ ಕೇಂದ್ರದ ನಾಯಕರ ಸಂಪರ್ಕ ಸಾಧಿಸಿರಬಹುದು. ಕಾಂಗ್ರೆಸ್​ನಲ್ಲಿ ನನಗೆ ಉಳಿಗಾಲವಿಲ್ಲವೆಂದು ಬಿಜೆಪಿ ಜೊತೆ ಕೈ ಜೋಡಿಸಲು ಮುಂದಾಗಿರಬಹುದು. ಇದರಿಂದ ಅವರು ಈ ರೀತಿ ಹೇಳಿಕೆ ನೀಡುತ್ತಿರಬಹುದು ಎಂದು ಲೇವಡಿ ಮಾಡಿದ್ದಾರೆ.

ಜತೆಗೆ ಮುಂದಿನ ಎರಡುವರೇ ವರ್ಷ ಯಡಿಯೂರಪ್ಪ ಅವರೇ ಸಿಎಂ ಆಗಿರುತ್ತಾರೆ. ಆ ಸ್ಥಾನದಿಂದ ಅವರನ್ನು ಕೆಳಗಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಸಿರಾ ವಿಚಾರ 70 ವರ್ಷದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಈಗ ಸಂಘಟಿತರಾಗಿ ಹೋರಾಟ ಮಾಡಿದಕ್ಕೆ ಗೆಲುವು ಸಿಗುತ್ತಿದೆ. ಉಪಚುನಾವಣೆ ಆಡಳಿತ ಪಕ್ಷದ ಪರವಾಗಿರುತ್ತವೆ. ಉಪ ಚುನಾವಣೆಯಲ್ಲಿ ಹಣ ಅಧಿಕಾರ ದುರುಪಯೋಗ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಉಪಚುನಾವಣೆಯಲ್ಲಿ ಮಾಡಿದ್ದೇನು ? ನಂಜನಗೂಡು ಚಾಮರಾಜನಗರ ಉಪಚುನಾವಣೆ ಹೇಗೆ ಗೆದ್ದರು ? ಉಪ ಚುನಾವಣೆ ಹೇಗೆ ಮಾಡಬೇಕು ಅಂತಾ ಮೇಲ್ಪಂಕ್ತಿಯನ್ನು ಹಾಕಿಕೊಟ್ಟವರೇ ಕಾಂಗ್ರೆಸ್‌ನವರು ಎಂದರು.

ಉಪಚುನಾವಣೆಯಲ್ಲಿ ಎಲ್ಲಾ ಬಲಗಳು ಬಳಕೆಯಾಗುವುದು ಸಹಜ. ಕಾಂಗ್ರೆಸ್ ಸೋತಾಗ ಅವರಿಗೆ ಇವಿಎಂ ನೆನಪಾಗುತ್ತದೆ. ಅವರು ಗೆದ್ದ ಕಡೆ ಈ ಬಗ್ಗೆ ಪ್ರಶ್ನೆ ಮಾಡುವುದಿಲ್ಲ. ಇವಿಎಂ ವಿಚಾರದಲ್ಲಿ ಭಾರತ ವಿಶ್ವಕ್ಕೆ ಮಾದರಿಯಾಗಿದೆ. ಅಮೆರಿಕಾ ಚುನಾವಣೆಯಲ್ಲೂ ಇದು ಸಾಬೀತಾಗಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.