ಮೈಸೂರು: ರಾಜ್ಯದ ವಿಧಾನಸಭಾ ಚುನಾವಣೆ ಫಲಿತಾಂಶದಿಂದ ಎಚ್ಚೆತ್ತು, 2024ರ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಿರುವ ಹಾಲಿ ಸಂಸದ ಪ್ರತಾಪ್ ಸಿಂಹ ಅವರು, ಕ್ಷೇತ್ರ ವ್ಯಾಪ್ತಿಯ ಕಾಮಗಾರಿಗಳ ಪರಿಶೀಲನೆ ಹಾಗೂ ಅಭಿವೃದ್ಧಿ ಕೆಲಸಗಳನ್ನು ಚುರುಕುಗೊಳಿಸುವ ಕೆಲಸ ಆರಂಭಿಸಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಕುರಿತು ಒಂದು ನೋಟ ಇಲ್ಲಿದೆ.
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ, ಮೈಸೂರು ಭಾಗದಲ್ಲಿ ಕಾಂಗ್ರೆಸ್ ಮೆಲುಗೈ ಸಾಧಿಸಿದ್ದು. ಈ ಹಿನ್ನೆಲೆಯಲ್ಲಿ ಮುಂದಿನ ಲೋಕಸಭಾ ಚುನಾವಣೆಗೆ ಮೈಸೂರು ಮತ್ತು ಮಡಿಕೇರಿ ಕ್ಷೇತ್ರವನ್ನು ಉಳಿಸಿಕೊಳ್ಳಲು ಈಗಾಗಲೇ ಕೆಲಸ ಆರಂಭಿಸಿರುವ ಪ್ರತಾಪ್ ಸಿಂಹ, ಪ್ರತಿದಿನ ತಮ್ಮ ಕ್ಷೇತ್ರದಲ್ಲೇ ಅಧಿಕಾರಿಗಳ ಸಭೆ, ಸ್ಥಳ ಪರಿಶೀಲನೆ ಸೇರಿದಂತೆ ಹಲವಾರು ಕೆಲಸಗಳಲ್ಲಿ ಸಂಸದರು ನಿರತರಾಗಿದ್ದಾರೆ.
![ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿದ ಸಂಸದ ಪ್ರತಾಪ್ ಸಿಂಹ](https://etvbharatimages.akamaized.net/etvbharat/prod-images/18609132_qefnw.jpg)
ವಿಧಾನಸಭೆಯ ಫಲಿತಾಂಶ ಲೋಕಸಭಾ ಚುನಾವಣೆಯ ದಿಕ್ಸೂಚಿಯೇ ?: ಈ ವಿಧಾನಸಭಾ ಚುನಾವಣೆಯಲ್ಲಿ ಮೈಸೂರು ಮತ್ತು ಕೊಡಗು ಕ್ಷೇತ್ರದ ಲೋಕಸಭಾ ವ್ಯಾಪ್ತಿಯಲ್ಲಿ ಮಡಿಕೇರಿ, ವಿರಾಜಪೇಟೆ, ಹುಣಸೂರು, ಪಿರಿಯಾಪಟ್ಟಣ, ಚಾಮರಾಜ, ಕೃಷ್ಣರಾಜ, ನರಸಿಂಹರಾಜ, ಚಾಮುಂಡೇಶ್ವರಿ ಕ್ಷೇತ್ರ ಸೇರಿದಂತೆ 8 ಕ್ಷೇತ್ರಗಳು ಈ ವ್ಯಾಪ್ತಿಯಲ್ಲಿ ಬರಲಿದ್ದು. ಇದರಲ್ಲಿ 5 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದರೆ, ಎರಡರಲ್ಲಿ ಜೆಡಿಎಸ್ ಹಾಗೂ ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಗೆಲುವು ಪಡೆದಿದೆ. ಈ ಕ್ಷೇತ್ರಗಳಲ್ಲಿ ಮತ್ತೆ ಮುಂದಿನ ಲೋಕಸಭೆಗೆ ಹೆಚ್ಚಿನ ಮತ ತೆಗೆದುಕೊಂಡರೆ ಮಾತ್ರ ಬಿಜೆಪಿಗೆ ಗೆಲ್ಲಲು ಸಾಧ್ಯವಿದ್ದು. ಈ ನಿಟ್ಟಿನಲ್ಲಿ ಬಿಜೆಪಿ ಈಗಾಗಲೇ ತನ್ನ ಕೆಲಸವನ್ನು ಆರಂಭಿಸಿದೆ.
ಹಾಲಿ ಸಂಸದರು ಹೇಳುವುದೇನು: ಈ ಬಾರಿಯ ವಿಧಾನಸಭೆ ಚುನಾವಣಾ ಫಲಿತಾಂಶ ಮುಂದಿನ ಲೋಕಸಭಾ ಚುನಾವಣೆಯ ಫಲಿತಾಂಶದ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಜನರು ಪ್ರಜ್ಞಾವಂತರು, ದೇಶದ ಭದ್ರತೆ ಹಾಗೂ ಭವಿಷ್ಯಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು ಬೆಂಬಲಿಸುತ್ತಾರೆ. ಈ ಬಾರಿ ನಾವು ಒಳ್ಳೆಯ ಸರ್ಕಾರ ಕೊಟ್ಟಿದ್ದರು, ಜನರು ಕಾಂಗ್ರೆಸ್ನ ಗ್ಯಾರಂಟಿಗಳನ್ನು ನಂಬಿ ಅವರಿಗೆ ಮತ ಹಾಕಿದ್ದಾರೆ ಎಂದು ಹೇಳಿದರು.
![ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿದ ಸಂಸದ ಪ್ರತಾಪ್ ಸಿಂಹ](https://etvbharatimages.akamaized.net/etvbharat/prod-images/18609132_faef.jpg)
ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ 49 ಸೀಟ್ ಗೆದ್ದಿತ್ತು, 2014 ರಲ್ಲಿ 44 ಸೀಟ್ ಗೆದ್ದಿತ್ತು. ಆದರೆ ಮುಂದಿನ 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಥಿತಿ ಹಾಗೆಯೇ ಇರುತ್ತದೆ. ಬಿಜೆಪಿ ಕೇಂದ್ರದಲ್ಲಿ ಒಳ್ಳೆಯ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದೆ, ಈ ಬಾರಿಯೂ ಸಹ ನಾವು ಸ್ಪಷ್ಟ ಬಹುಮತ ಪಡೆಯುತ್ತೇವೆ ಎಂದು ಸಂಸದ ಪ್ರತಾಪ ಸಿಂಹ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ: ರುದ್ರಪ್ಪ ಲಮಾಣಿಗೆ ಸಚಿವ ಸ್ಥಾನ ನೀಡುವಂತೆ ಅಭಿಮಾನಿಗಳ ಪ್ರತಿಭಟನೆ: ಸಿದ್ದರಾಮಯ್ಯ ವಿರುದ್ಧ ಆಕ್ರೋಶ
ಒಟ್ಟಾರೆ ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿರುವ ಬಿಜೆಪಿ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಹೆಚ್ಚಿನ ಸ್ಥಾನಗಳಿಸಿ, ಹಾಲಿ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ವರಿಷ್ಠರಿಂದ ಸೂಚನೆ ಬಂದ ಹಿನ್ನೆಲೆ, ಸಂಸದರು ಕ್ಷೇತ್ರದಲ್ಲಿ ಸಕ್ರಿಯ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಕಾಂಗ್ರೆಸ್ ಸುಳ್ಳು ಹೇಳಿಕೊಂಡು ಜನರ ದಿಕ್ಕು ತಪ್ಪಿಸುತ್ತಿದೆ: ಮಾಜಿ ಸಚಿವ ಶ್ರೀರಾಮುಲು ಆರೋಪ