ಮೈಸೂರು: ಗಣೇಶೋತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮತಿ ಕೊಡಬೇಕು ಎಂದು ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.
ಗಣೇಶೋತ್ಸವ ಆಚರಣೆ ವಿಚಾರವಾಗಿ ಮಾತನಾಡಿದ ಅವರು, ಶುಕ್ರವಾರ ಮಸೀದಿಗಳಲ್ಲಿ ಸಾಮೂಹಿಕ ನಮಾಜ್ ಮಾಡ್ತಿದ್ದಾರಲ್ವಾ?, ಚರ್ಚ್ಗಳಲ್ಲಿ ಪ್ರತಿ ಭಾನುವಾರ ಸಾಮೂಹಿಕ ಪ್ರಾರ್ಥನೆ ನಡೀತಿದ್ಯಲ್ವಾ? ಅಲ್ಲಿ ಅವಕಾಶ ಮಾಡಿಕೊಟ್ಟಿದ್ದೀರಿ ಅನ್ನೋದಾದ್ರೆ ಗಣೇಶೋತ್ಸವಕ್ಕೂ ಅವಕಾಶ ಕಲ್ಪಿಸಿಕೊಡಲಿ ಎಂದರು.
ಇದನ್ನೂ ಓದಿ: ಎತ್ತಿನಹೊಳೆ ಯೋಜನೆ: ಸಿಎಂಗೆ ಪತ್ರ ಬರೆದ ಮಾಜಿ ಸಿಎಂ HD ಕುಮಾರಸ್ವಾಮಿ
ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ಬಳಿಕ ಅವಕಾಶ ಮಾಡಿಕೊಡಿ. ಉತ್ಸವ ಅನ್ನೋದು ನಡೆಯಬೇಕು. ಅದ್ಧೂರಿಯಾಗಿ ನಡೆಯಬೇಕೆಂದು ನಾವು ಹೇಳುತ್ತಿಲ್ಲ ಎಂದರು. ಸಿಎಂ ಬೊಮ್ಮಾಯಿ, ಈ ಎಲ್ಲ ಅಂಶಗಳನ್ನು ಗಣನೆಗೆ ತೆಗೆದುಕೊಳ್ಳುತ್ತಾರೆ ಅನ್ನೋ ವಿಶ್ವಾಸವಿದೆ ಎಂದು ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.