ETV Bharat / state

ಕಾಲ್ನಡಿಗೆಯಲ್ಲಿ ತೆರಳಿ ಚಾಮುಂಡೇಶ್ವರಿ ದರ್ಶನ ಪಡೆದ ಸಂಸದೆ ಕರಂದ್ಲಾಜೆ - ಮೈಸೂರು ಮೆಟ್ಟಲೇರಿ ಚಾಮುಂಡೇಶ್ವರಿ ದರ್ಶನ ಪಡೆದ ಕರಂದ್ಲಾಜೆ ಸುದ್ದಿ

ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಯಾವುದೇ ಮಾಹಿತಿ ನೀಡದೇ ತಮ್ಮ ಆಪ್ತವಲಯದವರೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಮೆಟ್ಟಿಲೇರಿದ ಶೋಭಾ ಕರಂದ್ಲಾಜೆ ಅವರು ದೇವರ ದರ್ಶನ ಪಡೆದರು.

ಚಾಮುಂಡೇಶ್ವರಿ ದರ್ಶನ ಪಡೆದ ಸಂಸದೆ ಶೋಭಾ ಕರಂದ್ಲಾಜೆ

author img

By

Published : Jul 17, 2020, 9:25 AM IST

ಮೈಸೂರು: ಚಾಮುಂಡಿ ಬೆಟ್ಟದ ಸಾವಿರ ಮೆಟ್ಟಲಗಳನ್ನು ಏರುವ ಮೂಲಕ ಸಂಸದೆ ಶೋಭಾ ಕರಂದ್ಲಾಜೆ ಅವರು ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು.

ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಯಾವುದೇ ಮಾಹಿತಿ ನೀಡದೇ ತಮ್ಮ ಆಪ್ತವಲಯದವರೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಮೆಟ್ಟಿಲೇರಿದ ಶೋಭಾ ಕರಂದ್ಲಾಜೆ ಅವರು ದೇವರ ದರ್ಶನ ಪಡೆದರು. ಪ್ರತಿ ಆಷಾಢ ಮಾಸದ ಶುಕ್ರವಾರದಂದು ಚಾಮುಂಡೇಶ್ವರಿ ದರ್ಶನ ಪಡೆಯಲು ಮೆಟ್ಟಿಲುಗಳ ಮೂಲಕ ಹೋಗುವ ವಾಡಿಕೆಯನ್ನು ಶೋಭಾ ಕರಂದ್ಲಾಜೆ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದಗಿನಿಂದ ರೂಢಿಸಿಕೊಂಡಿದ್ದಾರೆ. ಪ್ರತಿವರ್ಷ ಆಷಾಢ ಶುಕ್ರವಾರದಂದು ದೇವಿಯ ದರ್ಶನ ಪಡೆದು ಇಷ್ಟಾರ್ಥಗಳನ್ನು ಈಡೇರಿಸುವಂತೆ ಬೇಡಿಕೊಳ್ಳುತ್ತಾರೆ.

ಚಾಮುಂಡೇಶ್ವರಿ ದರ್ಶನ ಪಡೆದ ಸಂಸದೆ ಶೋಭಾ ಕರಂದ್ಲಾಜೆ

ಸಾರ್ವಜನಿಕರ ಆಕ್ರೋಶ: ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಪ್ರತಿ ಆಷಾಢ ಶುಕ್ರವಾರ ಹಾಗೂ ಚಾಮುಂಡೇಶ್ವರಿ ವರ್ಧಂತ್ಯುತ್ಸವಕ್ಕೆ ಮೆಟ್ಟಲುಗಳು ಹಾಗೂ ರಸ್ತೆಯ ಮೂಲಕ ಯಾರನ್ನೂ ಬಿಟ್ಟಿಲ್ಲ. ಆದರೆ, ರಾಜಕಾರಣಿಗಳು ಹೇಗೆ ಬೇಕಾದರೂ ಹೋಗಿ ದೇವರ ದರ್ಶನ ಪಡೆಯಬಹುದು. ರಾಜಕಾರಣಿಗಳಿಗೊಂದು ಕಾನೂನು, ಜನಸಾಮಾನ್ಯರಿಗೆ ಒಂದು ಕಾನೂನು ಎಂದು ಅಸಮಾಧಾನ ಹೊರಹಾಕಿದ್ದಾರೆ‌.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.