ಮೈಸೂರು : ಆಕ್ಸಿಜನ್ ಕೊರತೆಯಿಂದ ಸಾವು ಸಂಭವಿಸಿದೆ. ಇದು ತುಂಬಾ ದುಃಖಕರ ಘಟನೆ ಎಂದು ಚಾಮರಾಜನಗರ ಸಂಸದ ವಿ. ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.
ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ 24 ಕೋವಿಡ್ ರೋಗಿಗಳು ಸಾವನ್ನಪ್ಪಿದ್ದು, ಈ ಘಟನೆ ದುರದೃಷ್ಟಕರ. ಈ ಘಟನೆಗೆ ಕಾರಣ ಏನು ಎಂಬುದರ ಬಗ್ಗೆ ಕುಲಂಕಶವಾಗಿ ತಿಳಿಯಲು ಆರೋಗ್ಯ ಸಚಿವರು ಚಾಮರಾಜನಗರಕ್ಕೆ ಭೇಟಿ ನೀಡುತ್ತಿದ್ದು, ಅವರು ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಕಲೆ ಹಾಕಲಿದ್ದಾರೆ.
ಪ್ರಾಥಮಿಕವಾಗಿ ಮೈಸೂರಿನಿಂದ ಆಕ್ಸಿಜನ್ ಪೂರೈಕೆಯಾಗದೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ಬಗ್ಗೆ ಮೈಸೂರು ಅಧಿಕಾರಿಗಳ ಜೊತೆ ಆಕ್ಸಿಜನ್ ಪೂರೈಕೆಯ ಬಗ್ಗೆ ಚಾಮರಾಜನಗರ ಜಿಲ್ಲಾಧಿಕಾರಿಗಳು ಮಾತನಾಡಿದ್ದಾರೆ.
ಈ ಘಟನೆಯಿಂದ ಸಾವನ್ನಪ್ಪಿರುವ ಬಡ ಕುಟುಂಬಗಳಿಗೆ ಹೆಚ್ಚಿನ ಪರಿಹಾರವನ್ನು ನೀಡಬೇಕೆಂದು ಮುಖ್ಯಮಂತ್ರಿ ಅವರಿಗೆ ಮಾನವಿ ಮಾಡುತ್ತೇನೆ ಎಂದು ಈ ಸಂದರ್ಭದಲ್ಲಿ ಸಂಸದ ಶ್ರೀನಿವಾಸ ಪ್ರಸಾದ್ ತಿಳಿಸಿದರು.
ಇದನ್ನೂ ಓದಿ : ಚಾಮರಾಜನಗರದಲ್ಲಿ 24 ಕೋವಿಡ್ ಸೋಂಕಿತರ ಸಾವು; ಅಷ್ಟಕ್ಕೂ ಆಸ್ಪತ್ರೆಯಲ್ಲಿ ಆಗಿದ್ದೇನು?