ETV Bharat / state

ರಾಜ್ಯ ಸರ್ಕಾರಗಳು ಹೆಚ್ಚು ಬೆಳೆಯುವ ಬೆಳೆಗಳಿಗೆ ಎಂಎಸ್​​ಪಿ ದರ ನಿಗದಿ ಮಾಡಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ - ರೈತರ ಬೆಳೆಗಳಿಗೆ ಕೇಂದ್ರ ಸರ್ಕಾರ ಎಂಎಸ್ ಪಿ ದರ ಹೆಚ್ಚಳ

ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಎಲ್ಲಿಂದ ಹಣ ತರುತ್ತದೆ. ರಾಜ್ಯದ ಹಣಕಾಸು ಸ್ಥಿತಿ ಹೇಗಿದೆ. ಎಷ್ಟು ಸಾಲ ಇದೆ. ಎಷ್ಟು ಬಡ್ಡಿ ಕಟ್ಟಬೇಕು ಎಂಬುದನ್ನು ಸರ್ಕಾರ ಘೋಷಣೆ ಮಾಡಬೇಕು, ಗ್ಯಾರಂಟಿಗಳಿಗೆ ಹಣಕಾಸಿನ ಮೂಲದ ಬಗ್ಗೆ ಜನರಿಗೆ ತಿಳಿಸಬೇಕು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯ.

Union Minister Shobha Karandlaje spoke to reporters.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸುದ್ದಿಗಾರರೊಂದಿಗೆ ಮಾತನಾಡಿದರು.
author img

By

Published : Jun 13, 2023, 5:11 PM IST

Updated : Jun 13, 2023, 5:49 PM IST

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸುದ್ದಿಗಾರರೊಂದಿಗೆ ಮಾತನಾಡಿದರು.

ಮೈಸೂರು: ದೇಶದಲ್ಲಿ ವಿವಿಧ ರಾಜ್ಯಗಳಲ್ಲಿ ಹಂಗಾಮಿಗೆ ತಕ್ಕಂತೆ ಬೇರೆ ಬೇರೆ ಬೆಳೆಗಳನ್ನು ಬೆಳೆಯುತ್ತಾರೆ. ಯಾವ ರಾಜ್ಯಗಳಲ್ಲಿ ಯಾವ ಯಾವ ಬೆಳೆಗಳನ್ನು ಹೆಚ್ಚಾಗಿ ಬೆಳೆಯುತ್ತಾರೋ, ಅದರ ಆಧಾರದ ಮೇಲೆ ಎಂಎಸ್ ಪಿ ದರ ನಿಗದಿ ಮಾಡಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಚಾಮುಂಡಿ ದೇವಿ ದರ್ಶನ ಪಡೆದು ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದ ಅವರು, ಇಂದು ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮದವರ ಜತೆ ಮಾತನಾಡಿದರು. ದೇಶದಲ್ಲಿ ರೈತರ ಬೆಳೆಗಳಿಗೆ ಕೇಂದ್ರ ಸರ್ಕಾರ ಎಂಎಸ್ ಪಿ ದರ ಹೆಚ್ಚಳ ಮಾಡಿದೆ. ಆಯಾ ರಾಜ್ಯಗಳು ಅದನ್ನು ಅನುಷ್ಠಾನಕ್ಕೆ ತರಬೇಕು.

ಏಕೆಂದರೆ ಒಂದೊಂದು ರಾಜ್ಯಗಳಲ್ಲೂ ಬೆಳೆಗಳನ್ನು ಬೆಳೆಯುವ ಸಮಯ ಬೇರೆ ಬೇರೆ ಆಗಿರುತ್ತದೆ. ಸಮಯಕ್ಕೆ ಸರಿಯಾಗಿ ಯಾವ ರಾಜ್ಯದಲ್ಲಿ ಯಾವ ಬೆಳೆಯನ್ನು ಹೆಚ್ಚಿಗೆ ಬೆಳೆಯುತ್ತಾರೋ ಅದಕ್ಕೆ ಎಂಎಸ್ ಪಿ ದರ ನಿಗದಿ ಮಾಡಬೇಕು ಎಂದು ಹೇಳಿದರು.

ದೇಶದಲ್ಲಿ ತಾಳೆ ಎಣ್ಣೆಯನ್ನು ಇಂಡೋನೇಷ್ಯಾ, ಮಲೇಷ್ಯಾ ಸೇರಿದಂತೆ ಹೊರದೇಶಗಳಿಂದ ಹೆಚ್ಚಾಗಿ ಅಂದರೆ ಶೇಕಡಾ 70 ರಷ್ಟು ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುತ್ತೇವೆ. ನಮ್ಮ ದೇಶದಲ್ಲಿ ನೆಲಗಡಲೆ, ಸಾಸಿವೆ ಎಣ್ಣೆ, ಸೋಯಾ ಬೆಳೆಯುವ ರೈತರಿಗೆ ಪ್ರೋತ್ಸಾಹ ನೀಡುತ್ತಿದ್ದೇವೆ. ಅದೇ ರೀತಿ ಎಲ್ಲಾ ರಾಜ್ಯಗಳು ಈ ಬಗ್ಗೆ ಗಮನಹರಿಸಬೇಕು. ಪ್ರಧಾನಿ ಮೋದಿಯವರು ಹೇಳಿದಂತೆ ಯಾವುದರಲ್ಲಿ ಆತ್ಮನಿರ್ಭರ ಇಲ್ಲವೋ ಅದಕ್ಕೆ ಹೆಚ್ಚು ಒತ್ತು ನೀಡಬೇಕು. ಆ ಕಡೆ ನಾವು ಗಮನಹರಿಸಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಲಹೆ ನೀಡಿದರು.

ದೇಶದಲ್ಲಿ ರಸಗೊಬ್ಬರ ಬಿತ್ತನೆ ಬೀಜದ ಕೊರತೆ ಇಲ್ಲ: ಈ ಬಾರಿ ದೇಶದಲ್ಲಿ ಮುಂಗಾರು ಬೇಗ ಆರಂಭವಾಗಬೇಕಿತ್ತು. ಆದರೆ ತಡವಾಗಿದೆ. ರೈತರು ಎಲ್ಲಾ ತಯಾರಿಯನ್ನು ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರ ರಾಜ್ಯದ ಕೃಷಿ ಇಲಾಖೆ ಅಧಿಕಾರಿಗಳ ಜೊತೆ ನಿರಂತರ ಸಭೆ ನಡೆಸುತ್ತಿದೆ. ದೇಶದಲ್ಲಿ ಯಾವ ರಾಜ್ಯಕ್ಕೆ ಎಷ್ಟು ಬಿತ್ತನೆ ಬಿಜ, ರಸಗೊಬ್ಬರ ಬೇಕೋ ಅದನ್ನು ನಿಗದಿ ಮಾಡಿ ಬಿಡುಗಡೆ ಮಾಡುತ್ತೇವೆ. ಈಗಾಗಲೇ ಮುಂಗಾರಿಗೂ ಮುನ್ನ ರಾಜ್ಯ ಕೃಷಿ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ. ದೇಶದಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜದ ಸಮಸ್ಯೆ ಸದ್ಯಕ್ಕಿಲ್ಲ ಎಂದು ಸ್ಪಷ್ಟಪಡಿಸಿದರು.

ಗ್ಯಾರಂಟಿಗಳಿಗೆ ಹಣದ ಮೂಲ ಯಾವುದು: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಎಲ್ಲಿಂದ ಹಣ ತರುತ್ತದೆ. ರಾಜ್ಯದ ಹಣಕಾಸು ಸ್ಥಿತಿ ಹೇಗಿದೆ. ಎಷ್ಟು ಸಾಲ ಇದೆ. ಎಷ್ಟು ಬಡ್ಡಿ ಕಟ್ಟಬೇಕು ಎಂಬುದನ್ನು ಸರ್ಕಾರ ಘೋಷಣೆ ಮಾಡಬೇಕು. ಕಾಂಗ್ರೆಸ್ ಚುನಾವಣೆಗೂ ಮುನ್ನ ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು, ಈಗ ಗ್ಯಾರಂಟಿಗಳಿಗೆ ಕಂಡಿಷನ್ ಹಾಕುತ್ತಿದೆ. ಅವರು ಒಂದು ಕಡೆ ಕೊಟ್ಟು ಮತ್ತೊಂದು ಕಡೆ ಕಿತ್ತುಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಅವರ ಹಣಕಾಸಿನ ಮೂಲದ ಬಗ್ಗೆ ಜನರಿಗೆ ತಿಳಿಸಬೇಕು ಎಂದು ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದರು.

ಈಗಾಗಲೇ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಘೋಷಣೆ ಮಾಡಿದ್ದು, ಮಹಿಳೆಯರು ಖುಷಿಯಿಂದ ಓಡಾಡುತ್ತಿದ್ದಾರೆ. ಇದರ ನಡುವೆ ಕೆಎಸ್ ಆರ್ ಟಿಸಿಗೆ ಆಗುವ ನಷ್ಟವನ್ನು ಯಾರು ಭರಿಸುತ್ತಾರೆ ಎನ್ನುವುದರ ಬಗ್ಗೆ ತಿಳಿಸಬೇಕು ಎಂದು ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿದರು.

ಇದನ್ನೂಓದಿ:KRS ಜಲಾಶಯ ಖಾಲಿ ಖಾಲಿ.. ಮಳೆಗಾಗಿ ಪ್ರಾರ್ಥಿಸಿ ಶಾಸಕ ರಮೇಶಬಾಬು ಬಂಡಿಸಿದ್ದೇಗೌಡರಿಂದ ಪರ್ಜನ್ಯ ಹೋಮ..

Last Updated : Jun 13, 2023, 5:49 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.